NEWS 5

 

 

ದೇಶದ ಜನರಿಗೆ ಉದ್ಯೋಗ ಕಲ್ಪಿಸುವ ಉದ್ಯೋಗ ಖಾತ್ರಿಯಾದ ಮನ್‍ರೇಗಾ ಕಾಯ್ದೆಯನ್ನು ವಿಬಿಜಿರಾಮ್‍ಜಿ ಎಂದು ಬದಲಾಯಿಸುವ ಮೂಲಕ ದೇಶದ ಜನರಿಗೆ ಕೇಂದ್ರ ಸರ್ಕಾರ ಬಹುದೊಡ್ಡ ಪೆಟ್ಟು ನೀಡುತ್ತಿದೆ ಎಂದು ಕೆಪಿಸಿಸಿ ಉಪಾಧ್ಯಕ್ಷ ಬಿ.ಎಲ್.ಶಂಕರ್ ಹೇಳಿದರು.

ಚಿಕ್ಕಮಗಳೂರು ನಗರದಲ್ಲಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ಕಾರ್ಯಕಾರಿಣಿ ಸಭೆಯಲ್ಲಿ ಶನಿವಾರ ಪಾಲ್ಗೊಂಡು ಅವರು ಮಾತನಾಡಿದರು.

ದೇಶದಲ್ಲಿ ಕಾಂಗ್ರೆಸ್ ಪಕ್ಷ ಹಾಗೂ ಹಲವು ರಾಜ್ಯಗಳ ಪ್ರಾದೇಶಿಕ ಪಕ್ಷಗಳು ಒಟ್ಟಾಗಿ ಮನ್‍ರೇಗಾ ಬದ ಲಾವಣೆ ಕುರಿತು ಭಾರೀ ವಿರೋಧ ವ್ಯಕ್ತಪಡಿಸಿ ಜನರ ಚಳುವಳಿ ನಡೆಸಲು ನಿರ್ಣಯಿಸಲಾಗಿದೆ. ಈ ಸಂಬ ಂಧ ಕರ್ನಾಟಕ ರಾಜ್ಯ ಸೇರಿದಂತೆ ವಿಧಾನಸಭೆಯಲ್ಲಿ ಬದಲಾವಣೆ ವಿರುದ್ಧ ಕರಾವು ಮಂಡಿಸಲಾಗಿದೆ ಎಂ ದು ಹೇಳಿದರು.

ಕೇಂದ್ರ ಸರ್ಕಾರದ ದ್ವಂದ ನಿಲುವಿನಿಂದ ಜನರಿಗೆ ಅನುಕೂಲವಾಗಿದ್ಧ ಮನರೇಗ ಕಾಯ್ದೆಯ ವಿಚಾರ ಗಳು ಬದಲಾವಣೆಯಾಗಿ ಭಾರೀ ಅನಾಹುತಕ್ಕೆ ಕಾರಣವಾಗುತ್ತಿದೆ. ಈ ಬಗ್ಗೆ ಗ್ರಾಮ ಪಂಚಾಯಿತಿಯಿಂದ, ಜಿಲ್ಲಾ ಮಟ್ಟದವರೆಗೂ ಹಂತ ಹಂತವಾಗಿ ಚಳುವಳಿ ನಡೆಸಲು ಕರೆ ನೀಡಲಾಗಿದೆ ಎಂದರು.

ಮಾಜಿ ಮಂತ್ರಿ, ಕೆಪಿಸಿಸಿ ಉಪಾಧ್ಯಕ್ಷ ರಮನಾಥ್ ರೈ ಮಾತನಾಡಿ ಮತದಾರರಿಗೆ ಸಂಬಂಧಪಟ್ಟ ಎಸ್. ಐ.ಆರ್. ಬಗ್ಗೆ ಬೂತ್‍ಮಟ್ಟದಲ್ಲಿ ಕಾಂಗ್ರೆಸ್ ಪಕ್ಷದ ಬಿ.ಎಲ್.ಎ-2 ಗಳಿಗೆ ತಿಳುವಳಿಕೆ ನೀಡಿ ಅವರುಗಳು ಪಕ್ಷದ ಮತದಾರರನ್ನು ಮತದಾರರ ಪಟ್ಟಿಯಿಂದ ಕೈಬೀಟ್ಟು ಹೋಗದಂತೆ ನಿರ್ದೇಶನ ನೀಡಬೇಕು ಎಂದು ತಿಳಿಸಿದರು.

ಈ ಪ್ರಯತ್ನದಿಂದ ಪಕ್ಷವು ಮುಂಬರುವ ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ, ಗ್ರಾಮ ಪಂ ಚಾಯಿತಿ ಸೇರಿದಂತೆ ಪ್ರತಿಯೊಂದು ಚುನಾವಣೆಗಳಲ್ಲಿ ಅಭೂತಪೂರ್ವ ಗೆಲುವು ಸಾಧಿಸಲು ಸಾಧ್ಯವಾಗು ತ್ತದೆ. ಜೊತೆಗೆ ಪಕ್ಷವು ರಾಜ್ಯ ಹಾಗೂ ದೇಶದಲ್ಲಿ ಗಟ್ಟಿಯಾಗಿ ನೆಲೆಯೂರಲು ಸಾಧ್ಯ ಎಂದು ವಿವರಿಸಿದರು.

ಶಾಸಕರಾದ ಹೆಚ್.ಡಿ.ತಮ್ಮಯ್ಯ, ಜಿ.ಎಸ್.ಶ್ರೀನಿವಾಸ್ ಮಾತನಾಡಿ ಜಿಲ್ಲಾ ಕಾಂಗ್ರೆಸ್ ಕೈಗೊಳ್ಳುವ ಪ್ರತಿ ಯೊಂದು ಚಟುವಟಿಕೆ, ಹೋರಾಟಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವುದಾಗಿ ಭರವಸೆ ನೀಡಿದ ಅವರು ಪಕ್ಷ ವು ಜಿಲ್ಲೆಯಲ್ಲಿ ಅತ್ಯಂತ ಸಕ್ರಿಯ, ಗಟ್ಟಿಯಾಗಿರುವಂತೆ ಸಂಪೂರ್ಣ ಸಹಕಾರ ನೀಡಲಾಗುವುದು ಎಂದು ತಿಳಿಸಿದರು.

ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಪಿ.ಅಂಶುಮಂತ್ ಫೆ.2 ರಂದು ಜಿಲ್ಲಾ ಕೇಂದ್ರದಲ್ಲಿ ನರೇಗಾ ವಿಚಾರವಾಗಿ ಉಪವಾಸ ಸತ್ಯಾಗ್ರಹ ಚಳುವಳಿ ನಡೆಸುವ ನಿರ್ಣಯವನ್ನು ಕೈಗೊಂಡರು. ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಎಂ.ಸಿ.ಶಿವಾನಂದಸ್ವಾಮಿ ಸ್ವಾಗತಿಸಿ, ಪ್ರಾಸ್ತಾವಿಕ ವಾಗಿ ಮಾತನಾಡಿ ಸಭೆ ನಡೆಸಿಕೊಟ್ಟರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಹೆಚ್.ಪಿ.ಮಂಜೇಗೌಡ, ಹೆಚ್.ಜಿ.ಸುರೇಂದ್ರ, ಪದಾಧಿಕಾರಿಗಳಾದ ಚಂ ದ್ರಪ್ಪ, ಕೆ.ವಿ.ಮಂಜುನಾಥ್, ರವೀಶ್ ಕ್ಯಾತನಬೀಡು, ಅನಂತ್, ಸೋಮೇಶ್ ಸೇರಿದಂತೆ ಅನೇಕರು ಕಾರ್ಯ ಕಾರಿ ಸಭೆಯಲ್ಲಿ ತಮ್ಮ ಅಭಿಪ್ರಾಯವನ್ನು ಹಂಚಿಕೊಂಡರು.

ಇದೇ ವೇಳೆ ನೂತನವಾಗಿ ಇಂದಿರಾ ಕ್ಯಾಂಟೀನ್ ಗುಣಮಟ್ಟ ಪರಿಶೀಲನಾ ಮತ್ತು ಅನುಷ್ಟಾನ ಸಮಿತಿ ರಾಜ್ಯಾಧ್ಯಕ್ಷರಾಗಿ ನೇಮಕಗೊಂಡಿರುವ ಪಂಚನಹಳ್ಳಿ ಪ್ರಸನ್ನ ಅವರನ್ನು ಸಭೆಯಲ್ಲಿ ಅಭಿನಂದಿಸಲಾಯಿತು. ಈ ಸಂದರ್ಭದಲ್ಲಿ ವಿಧಾನ ಪರಿಷತ್ ಮಾಜಿ ಸದಸ್ಯೆ ಎ.ವಿ.ಗಾಯತ್ರಿ ಶಾಂತೇಗೌಡ, ಮಾಜಿ ಶಾಸಕ ಎಂ.ಪಿ. ಕುಮಾರಸ್ವಾಮಿ, ಸಿಡಿಎ ಅಧ್ಯಕ್ಷ ಮೊಹಮ್ಮದ್ ನಯಾಜ್, ಜಿಲ್ಲಾ ಕಾಂಗ್ರೆಸ್ ಭವನ ನಿರ್ಮಾಣ ಉಪ ಸಮಿ ತಿ ಅಧ್ಯಕ್ಷ ಡಾ|| ಡಿ.ಎಲ್.ವಿಜಯ್‍ಕುಮಾರ್, ಉಪಸಮಿತಿ ಅಧ್ಯಕ್ಷ ಕೆ.ಎಸ್.ಶಾಂತೇಗೌಡ, ಕೆಪೆಕ್ಸ್ ನಿಗಮದ ಅಧ್ಯಕ್ಷ ಬಿ.ಹೆಚ್.ಹರೀಶ್ ಹಾಗೂ ಮುಖಂಡರುಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ