suddi3

 

 

ಹೆಣ್ಣು ಮಕ್ಕಳು ತಮ್ಮ ಆತ್ಮರಕ್ಷಣೆಯ ಕಲೆಯನ್ನು ಕರಗತ ಮಾಡಿಕೊಳ್ಳಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳು ಆದ ವಿ.ಹನುಮಂತಪ್ಪ ಸಲಹೆ ನೀಡಿದರು.

ಚಿಕ್ಕಮಗಳೂರು ನಗರದ ಬಸವನಹಳ್ಳಿಯ ಬಾಲಿಕಾ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದಲ್ಲಿ ಬೇಟಿ ಬಚಾವೊ, ಬೇಟಿ ಪಡಾವೋ ಯೋಜನೆಯಡಿ ಹೆಣ್ಣು ಮಕ್ಕಳಿಗೆ ಗುರುವಾರ ಆಯೋಜಿಸಿದ್ದ ಆತ್ಮ ರಕ್ಷಣಾ ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಹೆಣ್ಣು ಮಕ್ಕಳು ಧೈರ್ಯಶಾಲಿಗಳಾಗಬೇಕು. ಇದಕ್ಕೆ ಪೂರಕವಾಗಿ ಇಲ್ಲಿ ನಡೆಯುತ್ತಿರುವ ಕಾರ್ಯಾಗಾರದ ಸದುಪಯೋಗವನ್ನು ಪಡೆದುಕೊಳ್ಳಬೇಕು ಎಂದು ತಿಳಿಸಿದರು.

ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಶ್ರೀನಿವಾಸ ವೈ.ಆಲದಾರ್ತಿ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ತಮ್ಮ ಮೇಲೆ ನಡೆಯುವ ದೌರ್ಜನ್ಯವನ್ನು ಎದುರಿಸಲು ಮುಖ್ಯವಾಗಿ ವಿದ್ಯಾರ್ಥಿನಿಯರು ತಮ್ಮ ಆತ್ಮರಕ್ಷಣೆ ಮಾಡಿಕೊಳ್ಳುವುದು ಅಗತ್ಯ ಎಂದು ತಿಳಿಸಿದರು.

ಬಾಲಿಕಾ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ಉಪಪ್ರಾಂಶುಪಾಲರಾದ ಎಸ್.ಚಂದ್ರಮ್ಮ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಟೆಂಕ್ವಾಂಡೋ ಸಂಸ್ಥೆಯ ತರಬೇತುದಾರರಾದ ಬಿ.ಆರ್.ಯಶವಂತ್ ಹಾಗೂ ಸೋಫಿಯಾ ಹೆಣ್ಣು ಮಕ್ಕಳು ಹೇಗೆ ತಮ್ಮ ಆತ್ಮರಕ್ಷಣೆ ಮಾಡಿಕೊಳ್ಳಬೇಕೆಂಬ ಬಗ್ಗೆ ತರಬೇತಿ ನೀಡಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಜಿಲ್ಲಾ ನಿರೂಪಣಾಧಿಕಾರಿ ಡಿ.ಸಂತೋಷ್, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಸಿ.ರಂಗನಾಥ್, ಅಕ್ಕ ಪಡೆ ಹಾಗೂ ಜಿಲ್ಲಾ ಮಹಿಳಾ ಸಬಲೀಕರಣ ಘಟಕದ ಸಿಬ್ಬಂದಿ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ