February 10, 2026

 

 

ಚಿಕ್ಕಮಗಳೂರು ಜಿಲ್ಲಾಡಳಿತದ ವತಿಯಿಂದ ಸವಿತಾ ಮಹರ್ಷಿಗಳ ಜಯಂತಿಯನ್ನು ನಗರದ ಕುವೆಂಪು ಕಲಾಮಂದಿರದಲ್ಲಿ ಆಚರಿಸಲಾಯಿತು.

ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದರಾದ ಕೋಟ ಶ್ರೀನಿವಾಸ್ ಪೂಜಾರಿ ರವರು ಉದ್ಘಾಟಿಸಿದರು.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಸಂಸದರಾದ ಕೋಟ ಶ್ರೀನಿವಾಸ್ ಪೂಜಾರ್ ರವರು ಸರ್ಕಾರದ ಆಶಯ ಸಣ್ಣ ಸಣ್ಣ ಸಮುದಾಯಗಳನ್ನು ಗುರುತಿಸಿ ಅವರಿಗೂ ಪ್ರಾತಿನಿಧ್ಯ ನೀಡಿ ಸಂಘಟಿತರಾಗಿ ಸಮಾಜದ ಮುಖ್ಯ ವಾಹಿನಿಯಲ್ಲಿ ತಲೆಯೆತ್ತಿ ಬದುಕುವ ನಿಟ್ಟಿನಲ್ಲಿ ಈ ಜಯಂತಿಗಳನ್ನು ಆಚರಿಸುತ್ತಿದ್ದು ಎಲ್ಲರೂ ಸಂಘಟಿತರಾಗಿ ಸವಿತಾ ಮಹರ್ಷಿಗಳ ಆಶಯವನ್ನು ಎತ್ತಿ ಹಿಡಿಯಬೇಕಾಗಿದೆ ಎಂದರು.

ನಿವೃತ್ತ ಉಪನ್ಯಾಸಕರಾದ ಬಿ. ತಿಪ್ಪೇರುದ್ರಪ್ಪರವರು ಸವಿತಾ ಮಹರ್ಷಿಗಳ ಕುರಿತು ಉಪನ್ಯಾಸ ನೀಡಿದರು. ನಾಗಮಣಿ ರವರು ನಿರೂಪಿಸಿದರು. ಲಾಲಿತ್ಯ ಅನ್ವೇಕರ್ ಹಾಗೂ ಸುರೇಂದ್ರ ನಾಯಕ್ ರವರ ಗಾಯನ ಕಾರ್ಯಕ್ರಮ ಪ್ರೇಕ್ಷಕರನ್ನ ಮನರಂಜಿಸಿತು.

ಚಿಕ್ಕಮಗಳೂರು ನಗರಸಭೆಯ ಅಧ್ಯಕ್ಷರಾದ ಶೀಲಾ ದಿನೇಶ್ ರವರು ಅಧ್ಯಕ್ಷತೆ ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ನಗರಸಭೆಯ ಉಪಾಧ್ಯಕ್ಷರಾದ ಲಲಿತಾ ರವಿ ನಾಯಕ್, ಚಿಕ್ಕಮಗಳೂರು ಡೆಪ್ಯುಟಿ ತಹಶೀಲ್ದಾರ್ ರಾಮರಾವ್ ದೇಸಾಯಿ ಆರ್ಯ ನಯನಜ ಸವಿತಾ ಸಮಾಜದ ಜಿಲ್ಲಾಧ್ಯಕ್ಷರಾದ ಮಹಾಲಿಂಗಪ್ಪ ಜಿಲ್ಲಾ ಸಂವಿಧಾನ ಸಮಾಜದ ಅಧ್ಯಕ್ಷರಾದ ವಿಶ್ವನಾಥ್ ಸಂಕಲ್ಪ ಕಾರ್ಯದರ್ಶಿಗಳಾದ ಸತ್ಯನಾರಾಯಣ ನಗರ ಆರ್ಯ ನಯನಜ ದ ಅಧ್ಯಕ್ಷರಾದ ಯೋಗಿಶ್ ಮುಖಂಡರಾದ ಧನಂಜಯ್ ಹರೀಶ್ ರವರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ