February 4, 2026

 

 

ಪೊಲೀಸರಿಗೆ ಹುಟ್ಟುಹಬ್ಬ ಮತ್ತು ವಿವಾಹ ವಾರ್ಷಿಕೋತ್ಸವಗಳಿಗೆ ಸಾಂದರ್ಭಿಕ ರಜೆ ಮಂಜೂರು ಮಾಡುವಂತೆ ಸೂಚಿಸಲಾಗಿದೆ.

ಸಾರ್ವಜನಿಕರ ಸುರಕ್ಷತೆ ಹಾಗೂ ಕಾನೂನು ಜಾರಿಯನ್ನು ಖಚಿತಪಡಿಸಿಕೊಳ್ಳಲು ಕಠಿಣ ಪರಿಸ್ಥಿತಿಗಳಲ್ಲಿ ಕೆಲಸ ನಿರ್ವಹಿಸುವ ಪೊಲೀಸ್ ಸಿಬ್ಬಂದಿಗೆ ಹುಟ್ಟುಹಬ್ಬ ಮತ್ತು ವಿವಾಹ ವಾರ್ಷಿಕೋತ್ಸವಗಳಂತಹ ವೈಯಕ್ತಿಕ ಕಾರ್ಯಕ್ರಮಗಳನ್ನು ಆಚರಿಸುವುದು ಬಹಳ ಮಹತ್ವದ್ದಾಗಿದೆ ಎಂದು ಸುತ್ತೋಲೆಯಲ್ಲಿ ತಿಳಿಸಿದ್ದಾರೆ.

ಈ ವಿಶೇಷ ದಿನಗಳಲ್ಲಿ ರಜೆ ಪಡೆಯುವುದರಿಂದ ಅಧಿಕಾರಿಗಳು ಮತ್ತು ಸಿಬ್ಬಂದಿ ಭಾವನಾತ್ಮಕವಾಗಿ ಪುನಶ್ಚತನಗೊಳ್ಳಲು, ಕುಟುಂಬದೊಂದಿಗೆ ಗುಣಮಟ್ಟದ ಸಮಯವನ್ನು ಕಳೆಯಲು ಹಾಗೂ ಕರ್ತವ್ಯ ಮತ್ತು ವೈಯಕ್ತಿಕ ಜೀವನದ ನಡುವೆ ಸಮತೋಲನ ಕಾಪಾಡಿಕೊಳ್ಳಲು ಸಹಾಯವಾಗುತ್ತದೆ ಎಂದು ಅಭಿಪ್ರಾಯಿಸಿದ್ದಾರೆ.

ಇದರಿಂದ ಮನೋಬಲ ವೃದ್ಧಿಯಾಗಿ ಒತ್ತಡ ಕಡಿಮೆಯಾಗಿ  ಒಟ್ಟಾರೆ ಕೆಲಸದ ತೃಪ್ತಿ ಉತ್ಪಾದಕತೆಯನ್ನು ಹೆಚ್ಚಿಸುತ್ತದೆ ಎನ್ನಲಾಗಿದೆ. ಈ ಮಾನವೀಯ ಕಾರ್ಯವು ಅವರ ತ್ಯಾಗಗಳನ್ನು ಗುರುತಿಸುವುದರ ಜೊತೆಗೆ ನಿಷ್ಠೆಯನ್ನು ಬೆಳೆಸುತ್ತದೆ ಮತ್ತು ಪೊಲೀಸ್ ಪಡೆಯ ಬದ್ಧತೆಯನ್ನು ಬಲಪಡಿಸಿ, ಸೇವೆಯಲ್ಲಿ ಉತ್ತಮ ಶಿಸ್ತು ಮತ್ತು ಕಾರ್ಯಕ್ಷಮತೆಗೆ ಸಹಕಾರಿಯಾಗುತ್ತದೆ ಎಂದು ಉಲ್ಲೇಖಿಸಿದ್ದಾರೆ.

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ