February 4, 2026

 

 

ಖ್ಯಾತ  ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಮತ್ತು ಸಂಸ್ಥಾಪಕ ಸಿಜೆ ರಾಯ್ ಅವರು ಶುಕ್ರವಾರ ತಮ್ಮ ಕಚೇರಿಯಲ್ಲಿಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಕಳೆದ ಮೂರು ದಿನಗಳಿಂದ ಹೊಸೂರು ರಸ್ತೆಯ ಲ್ಯಾಂಗ್ ಫರ್ಡ್ ಟೌನ್ ನಲ್ಲಿರುವ ಕಾನ್ಫಿಡೆಂಟ್ ಗ್ರೂಪ್ ಕಂಪನಿಯಲ್ಲಿ ಶೋಧ ನಡೆಸುತ್ತಿದ್ದರು. ಈ ವೇಳೆ ರಾಯ್ ಅವರು ತಮ್ಮ ಪರವಾನಗಿ ಪಡೆದ ಬಂದೂಕಿನಿಂದ ಗುಂಡು ಹಾರಿಸಿಕೊಂಡಿದ್ದಾರೆ ಎಂದು ಪೊಲೀಸ್ ಆಯುಕ್ತರು ಹೇಳಿದ್ದಾರೆ.

ಗುಂಡೇಟಿನ ಸದ್ದು ಕೇಳಿದ ಕೂಡಲೇ ಸಿಬ್ಬಂದಿ ಅವರ ಕೋಣೆಗೆ ಧಾವಿಸಿ ನೋಡಿದಾಗ ಅವರು ರಕ್ತದ ಮಡುವಿನಲ್ಲಿ ಬಿದ್ದಿರುವುದು ಕಂಡುಬಂದಿದೆ ಎಂದು ಮೂಲಗಳು ತಿಳಿಸಿವೆ.

ಅವರನ್ನು ತಕ್ಷಣ ಆಸ್ಪತ್ರೆಗೆ ಕರೆದೊಯ್ಯಲಾಯಿತು, ಅಲ್ಲಿ ವೈದ್ಯರು ಅವರು ಮೃತಪಟ್ಟಿದ್ದಾರೆ ಎಂದು ಘೋಷಿಸಿದರು.

ರಾಯ್ ಅವರ ಕಚೇರಿಯಲ್ಲಿ ಐಟಿ ಶೋಧ ಕಾರ್ಯ ಸುಮಾರು ಎರಡು ತಿಂಗಳ ಹಿಂದೆ ಪ್ರಾರಂಭವಾಗಿತ್ತು ಎಂದು ಐಟಿ ಮೂಲಗಳು ತಿಳಿಸಿವೆ.

“ನಮ್ಮ ಆರಂಭಿಕ ವರದಿಗಳ ಪ್ರಕಾರ, ಕಳೆದ ಮೂರು ದಿನಗಳಿಂದ ಶೋಧ ಕಾರ್ಯ ನಡೆಯುತ್ತಿದೆ. ಇಂದು ಸೇರಿದಂತೆ ಐ-ಟಿ ತಂಡ ಅವರನ್ನು ವಿಚಾರಣೆ ನಡೆಸುತ್ತಿದೆ. ಪೊಲೀಸ್ ತನಿಖೆಯಿಂದ ಮಾತ್ರ ನಿಜವಾಗಿಯೂ ಅಲ್ಲಿ ಏನಾಯಿತು ಎಂಬುದನ್ನು ಬಹಿರಂಗಪಡಿಸಲು ಸಾಧ್ಯ” ಎಂದು ಬೆಂಗಳೂರು ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ತಿಳಿಸಿದ್ದಾರೆ.

ದೇಶದ ಅತ್ಯಂತ ಶ್ರೀಮಂತ ಉದ್ಯಮಿಗಳಲ್ಲಿ ಒಬ್ಬರಾಗಿದ್ದ ಸಿಜೆ ರಾಯ್ ಅವರ ಮನೆ, ಕಚೇರಿಗಳ ಮೇಲೆ ಈ ಹಿಂದೆ ಹಲವು ಬಾರಿ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದರು. ಅದರಂತೆ ಶುಕ್ರವಾರವೂ ಸಹ ಅವರ ಕಂಪನಿಯ ಮೇಲೆ ಐಟಿ ದಾಳಿ ನಡೆದಿದ್ದು, ಇದರಿಂದ ಮನನೊಂದು ತಮ್ಮ ಪಿಸ್ತೂಲ್​​ನಿಂದಲೇ ಗುಂಡು ಹಾರಿಸಿಕೊಂಡು ಸಾವಿಗೆ ಶರಣಾಗಿದ್ದಾರೆ.

ಐಟಿ ಇಲಾಖೆ ಅಧಿಕಾರಿಗಳು ಶುಕ್ರವಾರ ಬೆಳಗ್ಗೆ ಹೊಸೂರು ರಸ್ತೆಯ ಲ್ಯಾಂಗ್ ಫರ್ಡ್ ಟೌನ್ ನಲ್ಲಿರುವ ಕಾನ್ಫಿಡೆಂಟ್ ಗ್ರೂಪ್ ಕಂಪನಿಯ ಕಚೇರಿ ಮೇಲೆ ದಾಳಿ ಮಾಡಿದ್ದರು. ಎರಡು ಇನ್ನೋವಾ ಕಾರುಗಳಲ್ಲಿ 8 ಅಧಿಕಾರಿಗಳ ತಂಡ ಬಂದಿತ್ತು.

ಶುಕ್ರವಾರ ಮಧ್ಯಾಹ್ನ ತಮ್ಮ ಕಚೇರಿಗೆ ಬಂದಿದ್ದ ಸಿ.ಜೆ.ರಾಯ್, 1 ಗಂಟೆ ಐಟಿ ವಿಚಾರಣೆ ಎದುರಿಸಿದ್ದಾರೆ. ಅಧಿಕಾರಿಗಳಿಗೆ ಕೆಲ ದಾಖಲೆ ಸಹ ಕೊಟ್ಟಿದ್ದಾರೆ. ಮತ್ತಷ್ಟು ದಾಖಲೆ ತರಲು ರೂಮ್‌ಗೆ ಹೋಗಿದ್ದಾರೆ. ಈ ವೇಳೆ ಪಿಸ್ತೂಲ್​ನಿಂದ ಎದೆಗೆ ಗುಂಡು ಹಾರಿಸಿಕೊಂಡಿದ್ದಾರೆ. ಒಂದು ಸುತ್ತು ಗುಂಡು ಹಾರಿಸಿಕೊಳ್ಳುತ್ತಿದ್ದಂತೆ ಗನ್‌ ಕಿತ್ತುಕೊಂಡಿರುವ ಐಟಿ ಅಧಿಕಾರಿಗಳು, ರಕ್ಷಣೆಗೆ ಪ್ರಯತ್ನಿಸಿದ್ದಾರೆ. ಅಷ್ಟರಲ್ಲಿ ರಾಯ್‌ ಸಾವನ್ನಪ್ಪಿದ್ದಾರೆ ನಂತರ ಎಚ್‌ಎಸ್‌ಆರ್ ಲೇಔಟ್ ನ ನಾರಾಯಣ ಆಸ್ಪತ್ರೆಗೆ ಮೃತದೇಹ ಶಿಫ್ಟ್ ಮಾಡಲಾಗಿತ್ತು.

ಸಾವಿರಾರು ಕೋಟಿ ರೂ. ಸಾಮ್ರಾಜ್ಯ ಕಟ್ಟಿದ ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಮತ್ತು ಸಂಸ್ಥಾಪಕ ಸಿಜೆ ರಾಯ್ ಅವರು   ಆತ್ಮಹತ್ಯೆ ಮಾಡಿಕೊಂಡಿದ್ದು, ಉದ್ಯಮ ವಲಯಕ್ಕೆ ತೀವ್ರ ಆಘಾತ ಉಂಟು ಮಾಡಿದೆ.

ಈ ಸಂಬಂಧ ಕಾನ್ಫಿಡೆಂಟ್ ಗ್ರೂಪ್‌ನ ನಿರ್ದೇಶಕರು ದೂರು ದಾಖಲಿಸಿದ್ದಾರೆ. ಅದರ ಆಧಾರದ ಮೇಲೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಸುತ್ತಿದ್ದಾರೆ ಎಂದರು.

ಸಿಜೆ ರಾಯ್ ಬಿಲಿಯನೇರ್ ಆಗಿದ್ದೇ ರೋಚಕ.

ಡಾ. ಚಿರಿಯನ್ ಕಂಡತ್ ಜೋಸೆಫ್ ರಾಯ್ ಅಲಿಯಾಸ್ ಸಿಜೆ ರಾಯ್ ಬಿಲಿಯನೇರ್ ಆಗಿದ್ದೇ ರೋಚಕ. ಹೆಚ್‌ಪಿ ಕಂಪನಿಯಲ್ಲಿ ಕೆಲಸ ಮಾಡ್ತಿದ್ದ ಸಾಮಾನ್ಯ ಉದ್ಯೋಗಿಯೊಬ್ಬ ನೋಡ ನೋಡ್ತಿದ್ದಂತೆ ಸಾವಿರಾರು ಕೋಟಿ ಮೌಲ್ಯದ ಉದ್ಯಮ ಕಟ್ಟಿ ಹೆಮ್ಮರವಾಗಿ ಬೆಳೆಸಿ ಬಿಟ್ಟಿದ್ದು ಸುಲಭದ ಮಾತಲ್ಲ.

ಕೇರಳದ ಕೊಚ್ಚಿಯಲ್ಲಿ ಹುಟ್ಟಿ ಬೆಂಗಳೂರಲ್ಲಿ ಬೆಳೆದ ಸಿಜೆ ರಾಯ್, ಹೆಚ್‌ಪಿ ಕಂಪನಿಯಲ್ಲಿ ಕೆಲಸ ಬಿಟ್ಟು ಉದ್ಯಮ ಆರಂಭಿಸಿದರು. 2006ರಲ್ಲಿ ರಿಯಲ್ ಎಸ್ಟೇಟ್ ಉತ್ತುಂಗದಲ್ಲಿದ್ದ ಸಾಲ-ಮುಕ್ತ ನೀತಿಯಡಿ ಉದ್ಯಮವನ್ನು ಬೆಂಗಳೂರು, ಕೇರಳ, ದಕ್ಷಿಣ ಭಾರತದ ಪ್ರಮುಖ ನಗರಗಳಲ್ಲಿ ಹಲವಾರು ನಿವಾಸ, ವಾಣಿಜ್ಯ, ಟೌನ್‌ಶಿಪ್ ನಿರ್ಮಾಣ ಮಾಡಿದರು. ಅಮೆರಿಕಾ ಮತ್ತು ಯುಎಇಗೆ ಬಿಸಿನೆಸ್ ವಿಸ್ತರಿಸಿದರು. ಕಾನ್ಪಿಡೆಂಡ್ ಗ್ರೂಪ್ 159ಕ್ಕೂ ಹೆಚ್ಚು ಯೋಜನೆಗಳನ್ನು ಪೂರ್ಣಗೊಳಿಸಿ, ಕೋಟ್ಯಂತರ ಗ್ರಾಹಕರಿಗೆ ಮನೆಗಳನ್ನು ಒದಗಿಸಿತು.

ರಿಯಲ್ ಎಸ್ಟೇಟ್ ಜೊತೆ ಜೊತೆಗೆ ಹಾಸ್ಪಿಟಾಲಿಟಿ, ನಿರ್ಮಾಣ ಕ್ಷೇತ್ರ, ಶಿಕ್ಷಣ, ಸಿನಿಮಾ ಮೊದಲಾದ ವ್ಯವಹಾರಗಳಲ್ಲಿ ವ್ಯಾಪಕವಾಗಿ ಬಿಸಿನೆಸ್ ಮಾಡಿದರು. ಸಿಜೆ ರಾಯ್ ಅಂದಾಜು ಆಸ್ತಿ ಮೌಲ್ಯವೇ 8,500 ಕೋಟಿ ಎಂದು ಅಂದಾಜಿಸಲಾಗಿದೆ. ರೋಲ್ಸ್ ರಾಯ್, ಲ್ಯಾಂಬೋರ್ಗಿನಿ, ಬುಗಾಟಿ ಸೇರಿದಂತೆ ಲಕ್ಸುರಿ ಕಾರುಗಳ ಸಂಗ್ರಹವನ್ನ ಹೊಂದಿದ್ದರು.

ಮಲಯಾಳಂ ಸೇರಿದಂತೆ ಹಲವು ಕನ್ನಡ ಸಿನಿಮಾಗಳಲ್ಲಿ ಸಹ ಹೂಡಿಕೆ ಮಾಡಿ ಸಕ್ಸೆಸ್ ಕಂಡಿರು. 2012ರಲ್ಲಿ ಮೋಹನ ಲಾಲ್ ನಟನೆಯ ಕ್ಯಾಸನೋವಾ ಚಿತ್ರವು ಹಣ, ಕೀರ್ತಿ ಎರಡನ್ನೂ ಗಳಿಸಿಕೊಟ್ಟಿತ್ತು. ಬಹಳ ಕಾಲದವರೆಗೆ ಬಿಗ್‌ಬಾಸ್ ಮಲಯಾಳಂ ಮತ್ತು ಇತರ ರಿಯಾಲಿಟಿ ಶೋ ಗಳಿಗೆ ಪ್ರಾಯೋಜಕತವ ನೀಡಿದ್ದರು.

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ