ಹುತಾತ್ಮ ದಿನದ ಅಂಗವಾಗಿ ಚಿಕ್ಕಮಗಳೂರು ಜಿಲ್ಲಾಡಳಿತದ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಒಳಾವರಣದ ಉದ್ಯಾನವನದಲ್ಲಿರುವ ರಾಷ್ಟ್ರಪಿತ ನೆನಪಿನಂಗಳದಲ್ಲಿ ಶುಕ್ರವಾರ ಹುತಾತ್ಮರ ದಿನಾಚರಣೆ ನಡೆಯಿತು.
ಮಹಾತ್ಮ ಗಾಂಧೀಜಿ ಪ್ರತಿಮೆಗೆ ಗಣ್ಯರು ಪುಷ್ಪ ನಮನ ಸಲ್ಲಿಸಿದ ನಂತರ ಟಿ.ಎಂ.ಎಸ್. ಪ್ರೌಢಶಾಲೆಯ ವಿದ್ಯಾರ್ಥಿಗಳು ಹಾಗೂ ಸುರೇಂದ್ರ ನಾಯಕ್ ಮತ್ತು ಲಾಲಿತ್ಯ ತಂಡದವರು ಮಹಾತ್ಮಾ ಗಾಂಧೀಜಿಯವರಿಗೆ ಪ್ರಿಯವಾದ ರಘುಪತಿ ರಾಘವ ರಾಜಾರಾಂ, ವೈಷ್ಣವ ಜನತೋ ಮತ್ತಿತರ ಭಜನೆಗಳನ್ನು ಹಾಡಿದರು. ಒಂದು ನಿಮಿಷ ಮೌನಾಚರಣೆ ಮಾಡಲಾಯಿತು.
ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಂ.ಸಿ.ಶಿವಾನಂದಸ್ವಾಮಿ, ಚಿಕ್ಕಮಗಳೂರು ತಾಲ್ಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷ ಎಂ.ಮಲ್ಲೇಶ್‍ಸ್ವಾಮಿ, ಕಲಾ ಸಂಘದ ಅಧ್ಯಕ್ಷ ಮೋಹನ್, ಚಿಕ್ಕಮಗಳೂರು ಬ್ರಾಹ್ಮಣ ಮಹಾಸಭಾದ ಅಧ್ಯಕ್ಷ ಪಿ.ಮಂಜುನಾಥ ಜೋಷಿ, ಮುಖಂಡರಾದ ರಾಧಾ ಸುಂದ್ರೇಶ್, ಜಿಲ್ಲಾಧಿಕಾರಿ ಎನ್.ಎಂ.ನಾಗರಾಜ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಹೆಚ್.ಎಸ್.ಕೀರ್ತನಾ, ಅಪರ ಜಿಲ್ಲಾಧಿಕಾರಿ ನಾರಾಯಣ ರಡ್ಡಿ ಕನಕರಡ್ಡಿ, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಟಿ.ಜಯಕುಮಾರ್, ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕ ಡಾ.ಸಿ.ರಮೇಶ್, ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಿಬ್ಬಂದಿ ಕಾರ್ಯಕ್ರಮದಲ್ಲಿದ್ದರು.



