kempegowda

 

 

ಆಲ್ದೂರು  ಪಟ್ಟಣದ ವಲಯ ಒಕ್ಕಲಿಗ ಸಂಘದ ಕಚೇರಿ ಕಾರ್ಯಾಲಯದಲ್ಲಿ ಸಂಘದ ಅಧ್ಯಕ್ಷ ಅಶೋಕ್ ಡಿ ಬಿ ರವರ ನೇತೃತ್ವದಲ್ಲಿ ಫೆಬ್ರವರಿ ಎರಡರಂದು ಲೋಕಾರ್ಪಣೆಗೊಳ್ಳಲಿರುವ ಕೆಂಪೇಗೌಡ ಪ್ರತಿಮೆಯ ಆಹ್ವಾನ ಪತ್ರಿಕೆಯನ್ನು ಗುರುವಾರ ಬಿಡುಗಡೆಗೊಳಿಸಲಾಯಿತು.

ಬಳಿಕ ಮಾತನಾಡಿದ ಅಶೋಕ್ ಡಿಬಿ ರವರು, ಕಾರ್ಯಕ್ರಮದ ದಿನದಂದು ಆಯೋಜಿಸಿರುವ ರೂಪರೇಷೆಗಳ ಮಾಹಿತಿ ತಿಳಿಸಿ, ಆದಿಚುಂಚನಗಿರಿ ಮಠಾಧಿಪತಿ ನಿರ್ಮಲಾನಂದ ಸ್ವಾಮೀಜಿ, ಆದಿಚುಂಚನಗಿರಿ ಶೃಂಗೇರಿ ಶಾಖ ಮಠದ ಗುಣಾನಾಥ ಸ್ವಾಮೀಜಿ, ಸಾನಿಧ್ಯದೊಂದಿಗೆ ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಆರ್ ಅಶೋಕ್, ವಿಧಾನ ಪರಿಷತ್ ಉಪಸಭಾಪತಿ ಎಂ ಕೆ ಪ್ರಾಣೇಶ್, ವಿಧಾನ ಪರಿಷತ್ ಸದಸ್ಯರಾದ ಸಿಟಿ ರವಿ, ಎಸ್ ಎಲ್ ಭೋಜೇಗೌಡ, ವಿಧಾನಸಭಾ ಕ್ಷೇತ್ರದ ಶಾಸಕರಾದ ನಯನ ಮೋಟಮ್ಮ, ಮಾಜಿ ಸಂಸದರು ಮತ್ತು ಬೆಂಗಳೂರು ಹಾಲು ಒಕ್ಕೂಟ ಸಹಕಾರ ಸಂಘದ ಅಧ್ಯಕ್ಷರಾದ ಡಿಕೆ ಸುರೇಶ್, ಜಿಲ್ಲಾ ಒಕ್ಕಲಿಗ ಸಂಘದ ಅಧ್ಯಕ್ಷರಾದ ಟಿ.ರಾಜಶೇಖರ್, ಜೆಡಿಎಸ್ ರಾಜ್ಯ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ, ಶಾಸಕರಾದ ಟಿಡಿ ರಾಜೇಗೌಡ, ಇನ್ನಿತರ ಅತಿಥಿ ಗಣ್ಯರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

ಎಲ್ಲಾ ಸಹಕಾರ ಸಂಘಗಳ ಅಧ್ಯಕ್ಷರು ಪದಾಧಿಕಾರಿಗಳು, ಆಟೋ ಮತ್ತು ಗೂಡ್ಸ್ ಮಾಲೀಕರ ಸಂಘ, ವೀರಶೈವ ಲಿಂಗಾಯತ ಸಮುದಾಯ, ಬಿಲ್ಲವ ಸಮಾಜ, ಮುಸಲ್ಮಾನ ಸಮುದಾಯ, ಸ್ವಸಹಾಯ ಸಂಘಗಳ ಪದಾಧಿಕಾರಿಗಳು, ಬ್ಯಾಂಕ್ ಪೊಲೀಸ್ ಇಲಾಖೆ ಮೆಸ್ಕಾಂ ಇಲಾಖೆ ಅರಣ್ಯ ಇಲಾಖೆ, ಆರೋಗ್ಯ ಇಲಾಖೆ, ಸರ್ವ ಇಲಾಖೆಗಳ ಅಧಿಕಾರಿಗಳನ್ನು ಆಮಂತ್ರಿಸಿದ್ದು, ಪ್ರತಿಮೆ ನಿರ್ಮಾಣಕ್ಕೆ ಸ್ಥಳಾವಕಾಶ ಒದಗಿಸಿದ ಪಂಚಾಯಿತಿಯ ಅಧ್ಯಕ್ಷ ಉಪಾಧ್ಯಕ್ಷರು ಸದಸ್ಯರುಗಳು, ಸ್ಥಳೀಯವಾಗಿರುವ ಪಂಚಾಯಿತಿಗಳ ಪದಾಧಿಕಾರಿಗಳು, ದಲಿತ ಸಂಘಟನೆಗಳ, ಸರ್ವರನ್ನು ಪ್ರೀತಿಪೂರ್ವಕವಾಗಿ ಆಮಂತ್ರಿಸಲಿದ್ದೇವೆ.

ಅಂದು ಐದರಿಂದ ಆರು ಸಾವಿರ ಮಂದಿಗೆ ಮಧ್ಯಾಹ್ನ ಮತ್ತು ರಾತ್ರಿ ಉಪಹಾರ ವ್ಯವಸ್ಥೆಯನ್ನು ಏರ್ಪಡಿಸಲಾಗಿದ್ದು, ಪ್ರತಿಮೆ ಅನಾವರಣದ ಬಳಿಕ ಗಣಪತಿ ದೇವಸ್ಥಾನದ ಆವರಣದಲ್ಲಿ ಧಾರ್ಮಿಕ ಸಭಾ ಕಾರ್ಯಕ್ರಮ ನಡೆಯಲಿದೆ ನಂತರ ಹಿನ್ನೆಲೆ ಗಾಯಕಿ ಶಮಿತಾ ಮಲ್ನಾಡ್ ರವರಿಂದ ಸಂಗೀತ ಸಂಜೆ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಮಾಹಿತಿ ನೀಡಿದರು.

ವಲಯ ಒಕ್ಕಲಿಗ ಸಂಘದ ಕಾರ್ಯದರ್ಶಿ ವಸಂತ್ ಕುಮಾರ್ ಡಿಎಸ್, ಸದಸ್ಯರಾದ ಎಚ್ ಕೆ. ರಮೇಶ್ ಹಳಿಯೂರು ಎಪಿ. ಧರ್ಮೇಶ್ ಹಳೆ ಆಲ್ದೂರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ