ಕಾಳುಮೆಣಸು ಕೊಯ್ಲು ಮಾಡುವಾಗ ಅಲ್ಯೂಮಿನಿಯಂ ಏಣಿಗೆ ವಿದ್ಯುತ್ ತಂತಿ ತಗುಲಿ ಕಾರ್ಮಿಕ ಸ್ಥಳದಲ್ಲೇ ಸಾವಪ್ಪಿದ ಘಟನೆ ನಡೆದಿದೆ.
ಚಿಕ್ಕಮಗಳೂರು ಜಿಲ್ಲೆ ಎನ್.ಆರ್.ಪುರ ತಾಲ್ಲೂಕಿನಲ್ಲಿ ಶುಕ್ರವಾರ ಈ ದುರ್ಘಟನೆ ಸಂಭವಿಸಿದೆ.
ಎನ್.ಆರ್.ಪುರ ತಾಲ್ಲೂಕಿನ ಕಟ್ಟಿನಮನೆ ಗ್ರಾಮದಲ್ಲಿ ಕಾರ್ಮಿಕ ರಫೀಕ್(25 ವರ್ಷ) ಎಂಬುವವರು ಆಕಸ್ಮಿಕ ವಿದ್ಯುತ್ ಸ್ಪರ್ಶದಿಂದ ಸಾವನ್ನಪ್ಪಿದ್ದಾರೆ.
ಅಲ್ಯೂಮಿನಿಯಂ ಏಣಿ ಹತ್ತಿ ಕಾಳುಮೆಣಸು ಕುಯ್ಯುತ್ತಿದ್ದಾಗ ಈ ದುರಂತ ಸಂಭವಿಸಿದೆ.
ಅಸ್ಸಾಂ ಮೂಲದ ರಫೀಕ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಮೃತ ಕಾರ್ಮಿಕ.ಎನ್.ಆರ್.ಪುರ ತಾಲೂಕಿನ ಕಟ್ಟಿನಮನೆ ಗ್ರಾಮದ ಕಾಫಿ ಎಸ್ಟೇಟ್ ಒಂದರಲ್ಲಿ ಕಾಳುಮೆಣಸು ಕೊಯ್ಯುತ್ತಿದ್ದಾಗ ತೋಟದಲ್ಲಿ ಹಾದುಹೋಗಿದ್ದ ವಿದ್ಯುತ್ ತಂತಿಗೆ ಅಲ್ಯೂಮಿನಿಯಂ ಏಣಿ ತಾಗಿ ಸಾವನ್ನಪ್ಪಿದ್ದಾರೆ.
ಸ್ಥಳಕ್ಕೆ ಎನ್.ಆರ್.ಪುರ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲು ಮಾಡಿದ್ದಾರೆ.



