February 18, 2026

 

 

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ, ಮುಕ್ತ ಗಂಗೋತ್ರಿಯ 21 ನೇ ವಾರ್ಷಿಕ ಘಟಿಕೋತ್ಸವದಲ್ಲಿ ವಿಧಾನ ಪರಿಷತ್ ಸದಸ್ಯರಾದ ರವಿ ಸಿ. ಟಿ. ಅವರು ಮಾನ್ಯ ರಾಜ್ಯಪಾಲರಾದ ಶ್ರೀ ತಾವರಚಂದ್ ಗೆಹ್ಲೋಟ್ ಅವರಿಂದ ಪಿಹೆಚ್‍ಡಿ ಪದವಿ ಸ್ವೀಕರಿಸಿದರು.

ರವಿ ಅವರು ಮುಕ್ತ ಗಂಗೋತ್ರಿಯ ರಾಜ್ಯಶಾಸ್ತ್ರ ಪ್ರಾಧ್ಯಾಪಕರಾದ ಡಾ. ಕೆ.ಜೆ. ಸುರೇಶ್ ಅವರ ಮಾರ್ಗದರ್ಶನದಲ್ಲಿ “ಭಾರತದಲ್ಲಿ ಸಮ್ಮಿಶ್ರ ಸರ್ಕಾರಗಳ ಸಮಸ್ಯೆಗಳು ಹಾಗೂ ಸವಾಲುಗಳ ಒಂದು ಅಧ್ಯಯನ” ಎಂಬ ವಿಷಯದಲ್ಲಿ ಅಧ್ಯಯನ ನಡೆಸಿ, ಮಹಾಪ್ರಬಂಧ ಮಂಡಿಸಿದ್ದರು.

ಓದುವುದು ನನ್ನ ಪ್ರಮುಖ ಆಸಕ್ತಿ. ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ, ಮುಕ್ತಗಂಗೋತ್ರಿ ಅಡಿಯಲ್ಲಿ ರಾಜಕೀಯ ಶಾಸ್ತ್ರದ ಪ್ರಾಧ್ಯಾಪಕರಾದ ಡಾ.ಕೆ.ಜೆ. ಸುರೇಶ್ ಅವರ ಮಾರ್ಗದರ್ಶನದಲ್ಲಿ “ಭಾರತದಲ್ಲಿ ಸಮ್ಮಿಶ್ರ ಸರ್ಕಾರಗಳ ಸಮಸ್ಯೆಗಳು ಹಾಗೂ ಸವಾಲುಗಳ ಒಂದು ಅಧ್ಯಯನ” ಎಂಬ ಪ್ರಬಂಧವನ್ನು ನಿರಂತರವಾದ 4 ವರ್ಷಗಳ ಅಧ್ಯಯನದೊಂದಿಗೆ 2023 ರಲ್ಲಿ ಪೂರ್ಣಗೊಳಿಸಿ, ಮಂಡಿಸಿದ್ದೇನೆ. ಅಧ್ಯಯನದ ಸಂದರ್ಭದಲ್ಲಿ ತಿದ್ದಿ, ತೀಡಿ ಅತ್ಯುತ್ತಮವಾಗಿ ಮಾರ್ಗದರ್ಶನ ಮಾಡಿದ ಡಾ. ಕೆ.ಜೆ ಸುರೇಶ್ ಅವರಿಗೆ ಮನಪೂರ್ವಕ ಕೃತಜ್ಞತೆಗಳು. ನಾನು ಯುಪಿಎ ಮತ್ತು ಎನ್‍ಡಿಎ ಒಕ್ಕೂಟಗಳ ಮೈತ್ರಿಕೂಟ ಸರ್ಕಾರಗಳನ್ನು ತುಲನಾತ್ಮಕವಾಗಿ ಅಧ್ಯಯನ ಮಾಡಿದ್ದು, ಮಹಾ ಪ್ರಬಂಧ ರಚಿಸಿದ್ದೇನೆ ಎಂದು ರವಿ ವಿವರಿಸಿದರು.

ರಾಜಕೀಯ ಕಾರ್ಯದೊತ್ತಡಗಳ ನಡುವೆ ಪಿಹೆಚ್‍ಡಿ ಅಧ್ಯಯನ ಕೊಂಚ ನಿಧಾನವಾಗಿತ್ತು. ಆದರೆ, ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಮುಕ್ತನಾದ ಬಳಿಕ ಕೊಂಚ ಹೆಚ್ಚಿನ ಸಮಯ ಲಭಿಸಿತು. ಇದನ್ನು ಬಳಸಿಕೊಂಡು, ನಾನು ಪಿಹೆಚ್‍ಡಿ ಅಧ್ಯಯನ ಪೂರ್ಣಗೊಳಿಸಿದೆ ಎಂದು ರವಿ ವಿವರಿಸಿದರು.

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ