ಮೂಡಿಗೆರೆ ತಾಲ್ಲೂಕಿನ ಬಾಳೂರು ಗ್ರಾಮದ ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದ ಅಸ್ಸಾಂ ಮೂಲದ ಮಹಿಳೆಗೆ ಹೆರಿಗೆ ನೋವು ಆರಂಭವಾದ ಹಿನ್ನೆಲೆಯಲ್ಲಿ ಆಂಬುಲೆನ್ಸ್ ಮೂಲಕ ಮೂಡಿಗೆರೆ ಸರ್ಕಾರಿ ಆಸ್ಪತ್ರೆಗೆ ಕರೆತರಲಾಗುತ್ತಿತ್ತು.
ಆದರೆ ಆಸ್ಪತ್ರೆಗೆ ತಲುಪುವ ಮಾರ್ಗಮಧ್ಯೆಯಲ್ಲೇ ಆಂಬುಲೆನ್ಸ್ ನಲ್ಲಿಯೇ ಮಹಿಳೆ ಗಂಡು ಮಗುವಿಗೆ ಜನ್ಮ ನೀಡಿದ್ದಾಳೆ. ಹೆರಿಗೆ ನೋವಿನಿಂದ ಬಳಲುತ್ತಿದ್ದ ತಾಯಿಗೆ ಆಂಬುಲೆನ್ಸ್ ಚಾಲಕ ಆರೀಫ್ ಸಮಯಪ್ರಜ್ಞೆ ತೋರಿಸಿ ತಾಯಿ ಮತ್ತು ಮಗುವನ್ನು ಸುರಕ್ಷಿತವಾಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ.



