February 4, 2026

 

 

ವಿಕಸಿತ ಭಾರತ ನಿರ್ಮಣಕ್ಕಾಗಿ ಕೇಂದ್ರ ಸರಕಾರದ ಮಹತ್ವವಾದ ವಿಬಿ-ಜಿ ರಾಮ್‍ಜಿ ಯೋಜನೆ ಬಗ್ಗೆ ಕಾಂಗ್ರೆಸ್ಸಿಗರು ಅಪಪ್ರಚಾರ ಮಾಡಲಾರಂಭಿಸಿದ್ದಾರೆಂದು ಬಿಜೆಪಿ ಮೂಡಿಗೆರೆ ತಾಲೂಕು ಅಧ್ಯಕ್ಷ ಗಜೇಂದ್ರ ಕೊಟ್ಟಿಗೆಹಾರ ಹೇಳಿದರು.
ಅವರು ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕೇಂದ್ರ ಸರಕಾರ 2047ರ ವಿಕಸಿತ ಭಾರತದತ್ತ ದೂರದೃಷ್ಟಿ ಇಟ್ಟುಕೊಂಡು ಈ ಯೋಜನೆ ಜಾರಿಗೆ ತರಲಾಗಿದೆ. ಇದರಿಂದ ಗ್ರಾಮೀಣ ಬಾಗದ ಜನರಿಗೆ ಉದ್ಯೋಗ ಅವಕಾಶ ಸಿಗುತ್ತದೆ. ತಂತ್ರಜ್ಞಾನದ ಮೂಲಕ ತಪಾಸಣೆ, ದೂರುಗಳು ಹಾಗೂ ಕಾರ್ಮಿಕರ ನಿರ್ವಹಣೆ ಭ್ರಷ್ಟಾಚಾರ ರಹಿತವಾಗಿ ಅತ್ಯಂತ ಪರಿಣಾಮಕಾರಿಯಾಗಿ ನಡೆಯಲಿದೆ. ಇದನ್ನು ಸಹಿಸಿಕೊಳ್ಳದ ಕಾಂಗ್ರೆಸಿಗರು ಅಪ ಪ್ರಚಾರ ಮಾಡುತ್ತಾ ಜನರ ದಿಕ್ಕು ತಪ್ಪಿಸುತ್ತಿದ್ದಾರೆ. ಇದಕ್ಕೆ ಜನರು ಕಿವಿಕೊಡಬಾರದಂದು ಹೇಳಿದರು.
ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಜೆ.ಎಸ್.ರಘು ಮಾತನಾಡಿ,  ದೇಶದಲ್ಲಿ ಕೇವಲ 4 ರಾಜ್ಯದಲ್ಲಿ ಆಡಳಿತ ಹಿಡಿದಿರುವ ಕಾಂಗ್ರೆಸಿಗರು ಮಾತ್ರ ಈ ವಿಬಿ-ಜಿ ರಾಮ್‍ಜಿ ಯೋಜನೆ ಬಗ್ಗೆ ಅಪಸ್ವರ ಎತ್ತುತ್ತಿದ್ದು, ಬೇರೆಲ್ಲಾ ರಾಜ್ಯದಲ್ಲಿ ಸ್ವಾಗತಿಸಿದ್ದಾರೆ. ಇಲ್ಲಿನ ಕಾಂಗ್ರೆಸ್  ಸರಕಾರಕ್ಕೆ ಆಡಳಿತ ನಡೆಸಲು ಹಾಗೂ ಅಭಿವೃದ್ಧಿ ಮಾಡಲು ಹಣವಿಲ್ಲ. ಗ್ರಾಮೀಣ ಪ್ರದೇಶದ ರಸ್ತೆಗಳೆಲ್ಲಾ ಗುಂಡಿಮಯವಾಗಿದೆ. ಚುನಾವಣೆ ಬರುವಷ್ಟರಲ್ಲಿ ಯಾವ ರಸ್ತೆಯೂ ಉಳಿದಿರುವುದಿಲ್ಲ. ಇದರಿಂದ ಜನ ಕಾಂಗ್ರೆಸ್‍ನ್ನು ದಿಕ್ಕರಿಸುತ್ತಾರೆಂಬ ಭಯದಿಂದ ಈ ಯೋಜನೆ ಬಗ್ಗೆ ಅಪ ಪ್ರಚಾರ ಮಾಡುತ್ತಿದ್ದಾರೆಂದು ದೂರಿದರು.
ಗೋಷ್ಠಿಯಲ್ಲಿ ಬಿಜೆಪಿ ಜಿಲ್ಲಾ ವಕ್ತಾರ  ನಯನ ತಳವಾರ, ತಾಲೂಕು ವಕ್ತಾರ ವಿನಯ್ ಹಳೆಕೋಟೆ, ಪ್ರಧಾನ ಕಾರ್ಯದರ್ಶಿ  ಪ್ರಶಾಂತ್ ಬಿಳಗುಳ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ