ಮದುವೆ ಜಾತಕ ಹೇಳುವ ನೆಪದಲ್ಲಿ ಎಸ್‍ಸಿ ಸಮುದಾಯದ ಯುವತಿಗೆ ದೇವಾಲಯದ ಅರ್ಚಕನಿಂದ ಲೈಂಗಿಕ ದೌರ್ಜನ್ಯ ನಡೆದಿದೆ ಎಂದು ಆರೋಪಿಸಿ ದೂರು ದಾಖಲಾಗಿದೆ.
ಮೂಡಿಗೆರೆ ತಾಲ್ಲೂಕ ಬಣಕಲ್ ಹೋಬಳಿ ಹೊರಟ್ಟಿ ಗ್ರಾಮದ ಪಾರ್ವತಿ ಈಶ್ವರ ದೇವಸ್ಥಾನದ ಅರ್ಚಕ ಕೃಷ್ಣರಾವ್ ವಿರುದ್ಧ ಬಣಕಲ್ ಪೊಲೀಸ್ ಠಾಣೆಯಲ್ಲಿ ಗಂಭೀರ ಪ್ರಕರಣ ದಾಖಲಾಗಿದೆ.
23 ವರ್ಷದ ದಲಿತ ಸಮುದಾಯದ ಯುವತಿ ನೀಡಿರುವ ದೂರಿನಂತೆ, ಮದುವೆಯಲ್ಲಿ ತೊಂದರೆ ಆಗುತ್ತದೆ ಎಂದು ಹೆದರಿಸಿ ಜಾತಕ ನೋಡುವ ನೆಪದಲ್ಲಿ ಆರೋಪಿ ಬಲವಂತವಾಗಿ ಅತ್ಯಾಚಾರ ಎಸಗಿದ್ದಾನೆ. 2025ರ ನವೆಂಬರ್ 23ರಿಂದ 2026ರ ಫೆಬ್ರವರಿ 2ರವರೆಗೆ ಹಲವು ಬಾರಿ ಲೈಂಗಿಕ ದೌರ್ಜನ್ಯ ನಡೆದಿರುವುದಾಗಿ ದೂರಿನಲ್ಲಿ ಉಲ್ಲೇಖಿಸಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ದೂರಿಗೆ ಸಂಬಂಧಿಸಿದಂತೆ ಕಲಂ 64(2)(m) ಹಾಗೂ ಎಸ್‍ಸಿ/ಎಸ್‍ಟಿ ಅತ್ಯಾಚಾರ ತಡೆ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿ ಪೊಲೀಸರು ತನಿಖೆ ಆರಂಭಿಸಿದ್ದಾರೆ.



