ಚಿಕ್ಕಮಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಎಚ್.ಪಿ .ಮಂಜೇಗೌಡ ನೇಮಕಗೊಂಡಿದ್ದಾರೆ.
ಬೀಕನಹಳ್ಳಿ ಗ್ರಾಮ ಪಂಚಾಯತಿ ಸದಸ್ಯರಾಗಿ, ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿರುವ ಇವರು ಕಳೆದ ಎರಡು ದಶಕಗಳಿಂದ ಕಾಂಗ್ರೆಸ್ ಪಕ್ಷದಲ್ಲಿ ಸಕ್ರಿಯವಾಗಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ. ಪ್ರಸ್ತುತ ಚಿಕ್ಕಮಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿದ್ದಾರೆ.
ಎರಡು ದಶಕಗಳ ಕಾಲ ಪಕ್ಷಕ್ಕಾಗಿ ನಿಷ್ಠೆಯಿಂದ ದುಡಿದ ಕಾರಣ ಈ ಹುದ್ದೆ ಲಭಿಸಿರುವುದು ಸಂತೋಷ ತಂದಿದೆ ಎಂದು ಹೇಳಿದ್ದಾರೆ.



