February 13, 2026

 

 

ಕೇರಳ ರಾಜ್ಯ ಚುನಾವಣೆಯ ಕಾಂಗ್ರೇಸ್ ಉಸ್ತುವಾರಿಯಾಗಿ ಎಐಸಿಸಿ ರಾಷ್ಟ್ರೀಯ ಕಾರ್ಯದರ್ಶಿ ಚಿಕ್ಕಮಗಳೂರಿನ ಬಿ.ಎಂ.ಸಂದೀಪ್ ಅವರನ್ನು ನೇಮಕ ಮಾಡಲಾಗಿದೆ.

ಕೇರಳ ರಾಜ್ಯವು ರಾಜಕೀಯವಾಗಿ ಅತ್ಯಂತ ಮಹತ್ವದ ರಾಜ್ಯವಾಗಿದ್ದು, ಅಲ್ಲಿ ನಡೆಯುವ ಚುನಾವಣೆಗಳು ರಾಷ್ಟ್ರೀಯ ಮಟ್ಟದಲ್ಲಿಯೂ ಪ್ರಭಾವ ಬೀರುತ್ತವೆ. ಉಸ್ತುವಾರಿಯಾಗಿ ನೇಮಕಗೊಂಡಿರುವ ಬಿ.ಎಂ.ಸಂದೀಪ್ ಅವರು ಈಗಾಗಲೇ 20 ರಾಜ್ಯಗಳಲ್ಲಿ ಪಕ್ಷದ ವಿವಿಧ ಸಂಘಟನಾತ್ಮಕ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಮಹಾರಾಷ್ಟ್ರ ರಾಜ್ಯದ ಕಾಂಗ್ರೇಸ್ ಉಸ್ತುವಾರಿಯಾಗಿ ಕಾರ್ಯನಿರ್ವಹಿಸಿದ್ದಾರೆ. ಸಂದೀಪ್ ಅವರು ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ಮೂಲದವರಾಗಿದ್ದು, ಚಿಕ್ಕಮಗಳೂರು ನಗರಸಭಾ ಸದಸ್ಯರಾಗಿಯೂ ಸೇವೆ ಸಲ್ಲಿಸಿದ್ದಾರೆ.

ಮುಂದಿನ ದಿನಗಳಲ್ಲಿ ಕೇರಳದಲ್ಲಿ ನಡೆಯುವ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಸಂಘಟನೆಯನ್ನು ಬಲಪಡಿಸುವುದು, ಕಾರ್ಯಕರ್ತರೊಂದಿಗೆ ಸಮನ್ವಯ ಸಾಧಿಸುವುದು ಹಾಗೂ ಜನಸಾಮಾನ್ಯರ ಸಮಸ್ಯೆಗಳನ್ನು ಗಮನಿಸಿ ಚುನಾವಣಾ ಕಾರ್ಯತಂತ್ರ ರೂಪಿಸುವಲ್ಲಿ ಪ್ರಮುಖ ಪಾತ್ರ ವಹಿಸಲಿದ್ದಾರೆ.

ಈ ನೇಮಕವು ಬಿ.ಎಂ. ಸಂದೀಪ್ ಅವರು ಕಾಂಗ್ರೆಸ್ ಪಕ್ಷದಲ್ಲಿ ಹೊಂದಿರುವ ವಿಶ್ವಾಸ, ನಾಯಕತ್ವದ ಸಾಮರ್ಥ್ಯ ಮತ್ತು ಸಂಘಟನೆಗೆ ಸಲ್ಲಿಸಿದ ಸೇವೆಗೆ ದೊರೆತ ಗೌರವವಾಗಿದೆ.

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ