February 17, 2026

 

 

ಟಿವಿ ನೋಡುವುದು ಕಡಿಮೆ ಮಾಡು ಅಂತಾ ತಾಯಿ ಬೈದಿದ್ದಕ್ಕೆ ಮನನೊಂದ ಬಾಲಕಿಯೊಬ್ಬಳು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನಲ್ಲಿ ನಡೆದಿದೆ.

ಮೃತಳನ್ನುಕೊಪ್ಪ ತಾಲ್ಲೂಕು ಜಯಪುರದ ಏಳನೇ ತರಗತಿ ವಿದ್ಯಾರ್ಥಿನಿ ಸುಪ್ರಿತಾ ಎಂದು ಗುರುತಿಸಲಾಗಿದೆ. ಭಾನುವಾರ ಕೆಲಸಕ್ಕೆ ಹೋಗಿದ್ದ ತಾಯಿ ಮಧ್ಯಾಹ್ನ ಊಟಕ್ಕೆ ಮನೆಗೆ ಬಂದಿದ್ದರು. ಈ ವೇಳೆ ಊಟ ಮಾಡುತ್ತಿದ್ದ ಸುಪ್ರಿತಾ, ಟಿವಿ ನೋಡುತ್ತಾ ತಟ್ಟೆ ಬೀಳಿಸಿ ಅನ್ನವನ್ನು ಚೆಲ್ಲಿದ್ದಾಳೆ.

ಅದಕ್ಕೆ ತಾಯಿ ಟಿವಿ ನೋಡುವುದು ಕಡಿಮೆ ಮಾಡು, ಚೆಲ್ಲಿರುವ ಅನ್ನವನ್ನು ಕ್ಲೀನ್ ಮಾಡು ಎಂದು ಹೇಳಿ ಮತ್ತೆ ಕೆಲಸಕ್ಕೆ ಹೋಗಿದ್ದರು. ತಾಯಿ ಕೆಲಸಕ್ಕೆ ಹೋದ ಬೆನ್ನಲ್ಲೇ ತಾಯಿ ತನಗೆ ಬೈದಳೆಂದು ಬಾಲಕಿ ಸುಪ್ರಿತಾ ತನ್ನದೇ ವೇಲ್ ನಿಂದ ಮನೆಯ ಮೇಲ್ಛಾವಣಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ ಎಂದು ತಿಳಿದುಬಂದಿದೆ.

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ