February 17, 2026

 

 

ಮೂಡಿಗೆರೆ ತಾಲೂಕಿನ ಗೊಣಿಬೀಡು ಹೋಬಳಿಯ ಕಣಚೂರು ಗ್ರಾಮದ ಹಿರಿಯ ಕಾಫಿ ಬೆಳೆಗಾರ ಕೆ.ಕೆ. ಮೋಟೇಗೌಡರು (95 ವರ್ಷ) (ಕೆ. ಎಂ. ಸತೀಶ್ ಅವರ ತಂದೆ) ನಿಧನ ಹೊಂದಿದ್ದಾರೆ.

ಅಲ್ಪಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು 16-2-2026, ಸೋಮವಾರ ಮುಂಜಾನೆ ಕೊನೆಯುಸಿರೆಳೆದಿದ್ದಾರೆ.

ಮೋಟೇಗೌಡರು ಮಾದರಿ ಕೃಷಿಕರಾಗಿ ಹೆಸರು ಮಾಡಿದ್ದರು. ಮೃತರು ಪತ್ನಿ, ಓರ್ವ ಪುತ್ರ, ಓರ್ವ ಪುತ್ರಿ ಹಾಗೂ ಅಪಾರ ಬಂಧುಗಳನ್ನು ಅಗಲಿದ್ದಾರೆ.

ಮೃತರ ಅಂತ್ಯಕ್ರಿಯೆಯನ್ನು ಇಂದು ಸೋಮವಾರ ಸಂಜೆ ಸ್ವಗ್ರಾಮ ಕಣಚೂರಿನಲ್ಲಿ ನೆರವೇರಿಸಲಾಗುವುದೆಂದು ಕುಟುಂಬಸ್ಥರು ತಿಳಿಸಿರುತ್ತಾರೆ.

ಮೋಟೇಗೌಡರ ನಿಧನಕ್ಕೆ ಜಿಲ್ಲಾ ಮತ್ತು ತಾಲ್ಲೂಕು ಒಕ್ಕಲಿಗರ ಸಂಘ, ಕರ್ನಾಟಕ ಬೆಳೆಗಾರರ ಒಕ್ಕೂಟ, ಮೂಡಿಗೆರೆ ಬೆಳೆಗಾರರ ಸಂಘ, ಕೆಂಪೇಗೌಡ ಒಕ್ಕಲಿಗರ ವೇದಿಕೆ ಸೇರಿದಂತೆ ವಿವಿಧ ಸಂಘಸಂಸ್ಥೆಗಳ ಹಾಗೂ ರಾಜಕೀಯ ಪಕ್ಷಗಳ ಪದಾಧಿಕಾರಿಗಳು ತಮ್ಮ ಸಂತಾಪ ವ್ಯಕ್ತಪಡಿಸಿದ್ದಾರೆ.

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ