February 18, 2026

 

 

ಚಿಕ್ಕಮಗಳೂರು ನಗರದ ವಿಜಯಪುರ ಬಡಾವಣೆಯ ತಿಲಕ್ ಪಾರ್ಕ್ ಸಮೀಪ ಮನೆಯೊಂದರ ಮೇಲೆ ಕಳೆದ ಒಂದು ವಾರದಿಂದ ಕಿಡಿಗೇಡಿಗಳು ರಾತ್ರಿ ವೇಳೆ ನಿರಂತರ ಕಲ್ಲುತೂರಾಟ ನಡೆಸುತ್ತಿದ್ದಾರೆ ಎಂದು ಆರೋಪದ ಮೇಲೆ ಇಬ್ಬರು ಮುಸ್ಲಿಂ ಯುವಕರನ್ನು ಬಜರಂಗದಳ ಕಾರ್ಯಕರ್ತರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಘಟನೆಯಿಂದ ಸ್ಥಳದಲ್ಲಿ ಸೋಮವಾರ ರಾತ್ರಿ ಉದ್ವಿಗ್ನ ಪರಿಸ್ಥಿತಿ ಉಂಟಾಗಿದೆ.

ಈ ನಡುವೆ ಕಲ್ಲು ತೂರಾಟಕ್ಕೊಳಗಾದ ಮನೆಯ ಸದಸ್ಯರು ಪೊಲೀಸರಿಗೆ ದೂರು ನೀಡಿದ್ದು, ದೂರಿನಲ್ಲಿ ಮಧ್ಯಾಹ್ನ ಹಾಗೂ ರಾತ್ರಿ ವೇಳೆ ಮನೆ ಮೇಲೆ ಕಲ್ಲು ಎಸೆಯಲಾಗುತ್ತಿದೆ. ನಾವು ಭಯದಲ್ಲಿ ಜೀವನ ನಡೆಸುವಂತಾಗಿದೆ ಎಂದು ಹೇಳಿದ್ದಾರೆ.

ನಮ್ಮ ಮನೆಯ ಮೇಲೆ ಕಲ್ಲು ತೂರಾಟ ಮಾಡಲಾಗಿದೆ. ಕಳೆದ ಒಂದು ವಾರದಿಂದ ನಿರಂತರವಾಗಿ ಕಲ್ಲು ತೂರಾಟ ಮಾಡುತ್ತಿದ್ದಾರೆ. ಅವರನ್ನು ಸ್ಥಳೀಯರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ನಾನು ಕೆಲಸಕ್ಕೆ ಹೋಗುತ್ತೇನೆ. ತಾಯಿ, ತಂಗಿ ಇಬ್ಬರೇ ಮನೆಯಲ್ಲಿ ಇರುತ್ತಾರೆ. ಮಧ್ಯಾಹ್ನ ರಾತ್ರಿ ವೇಳೆಯಲ್ಲಿ ಕಲ್ಲು ಎಸೆಯುತ್ತಾರೆ. ನಾವು ಪೊಲೀಸರಿಗೆ ದೂರು ನೀಡಿದ್ದೆವು.

ಸೋಮವಾರ ರಾತ್ರಿ ಕೂಡ ಮನೆಗೆ ಕಲ್ಲು ಎಸೆದಿದ್ದಾರೆ. ಅದನ್ನು ಹೊರಗೆ ಇದ್ದ ತಾಯಿ ಹಾಗೂ ತಂಗಿ ಪ್ರಶ್ನೆ ಮಾಡಿದ್ದಾರೆ. ಆಗ ಅವರ ಜೊತೆ ಯುವಕರು ಜಗಳ ಮಾಡಿದ್ದಾರೆ ಎಂದು ಮನೆ ಮಾಲೀಕ ಗಗನ್ ಎಂಬವರು ಆರೋಪಿಸಿದ್ದಾರೆ.

ಇದಕ್ಕೆ ಸಂಬಂಧಿಸಿದಂತೆ ಕೆಲ ಮುಸ್ಲಿಂ ಯುವಕರನ್ನು ಬಜರಂಗದಳ ಕಾರ್ಯಕರ್ತರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆಂದು ತಿಳಿದುಬಂದಿದೆ.

ಮತ್ತೊಂದೆಡೆ, ಘರ್ಷಣೆ ವೇಳೆ ಇಬ್ಬರು ಮುಸ್ಲಿಂ ಯುವಕರು ಗಾಯಗೊಂಡಿದ್ದು, ಅವರನ್ನು ಮಲ್ಲೇಗೌಡ ಸರ್ಕಾರಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಬಜರಂಗದಳ ಹಾಗೂ ಬಿಜೆಪಿ ಕಾರ್ಯಕರ್ತರಿಂದ ಹಲ್ಲೆ ನಡೆದಿದೆ ಎಂಬ ಆರೋಪವನ್ನು ಗಾಯಾಳುಗಳು ಮತ್ತು ಸಮುದಾಯದ ಮುಖಂಡರು ಮಾಡುತ್ತಿದ್ದಾರೆ.

ಇದೇ ರೀತಿ ಹಿಂದೂ ಸಂಘಟನೆಗಳೂ ಕೂಡ ಮನೆ ಮೇಲೆ ಕಲ್ಲು ಎಸೆದವರನ್ನು ತಕ್ಷಣ ಬಂಧಿಸಿ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿವೆ.

ಇದರಿಂದಾಗಿ ಸ್ಥಳೀಯ ಪೊಲೀಸ್ ಠಾಣೆ ಎದುರು ಕೆಲಕಾಲ ಹೈಡ್ರಾಮಾವೇ ನಡೆದಿದೆ. ಸೋಮವಾರ ರಾತ್ರಿ ಎರಡೂ ಸಮುದಾಯದ ಯುವಕರು ಜಮಾವಣೆಗೊಂಡು ಕೆಲಕಾಲ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು.

ಪ್ರಕರಣದ ತನಿಖೆಯನ್ನು ಬಸವನಹಳ್ಳಿ ಪೊಲೀಸ್ ಠಾಣೆ ಪೊಲೀಸರು ಕೈಗೊಂಡಿದ್ದಾರೆ.

ಕಲ್ಲು ತೂರಾಟ ಮಾಡಿದವರ ಹಾಗೂ ಅವರನ್ನು ಹಿಡಿದು ಪೊಲೀಸರಿಗೊಪ್ಪಿಸಿದವರ ವಿರುದ್ಧವೂ ಬಸವನಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್ ದಾಖಲಿಸಲಾಗಿದೆ.  ಮನೆಯ ಮೇಲೆ ಕಲ್ಲು ಎಸೆದ ಆರೋಪದ ಮೇರೆಗೆ ಹುಸೇನ್ ಮತ್ತು ರಿಯಾನ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಕಲ್ಲು ತೂರಾಟ ನಡೆಸಿದವರನ್ನು ಹಿಡಿದ ಶಾಮ್ ಮತ್ತು ಸಂತೋಷ್ ಮೇಲೂ ಹಲ್ಲೆ ಆರೋಪದಲ್ಲಿ ಎಫ್​ಐಆರ್ ದಾಖಲಿಸಲಾಗಿದೆ. ಶಾಮ್ ಅವರು ಬಜರಂಗದಳ ಹಾಸನ ವಿಭಾಗದ ಸಹ ಸಂಚಾಲಕರಾಗಿದ್ದು, ಸಂತೋಷ್ ಬಿಜೆಪಿ ಯುವ ಮೋರ್ಚಾ ಚಿಕ್ಕಮಗಳೂರು ಜಿಲ್ಲಾಧ್ಯಕ್ಷರಾಗಿದ್ದಾರೆ.

ಸದ್ಯ ನಗರದಲ್ಲಿ ಹೆಚ್ಚುವರಿ ಪೊಲೀಸ್ ಪಡೆ ನಿಯೋಜಿಸಲಾಗಿದ್ದು, ಠಾಣೆ ಮತ್ತು ಆಸ್ಪತ್ರೆ ಸುತ್ತಮುತ್ತ ಬಿಗಿ ಭದ್ರತೆ ಕೈಗೊಳ್ಳಲಾಗಿದೆ.

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ