February 20, 2026

 

 

ಚಿಕ್ಕಮಗಳೂರು  ಜಿಲ್ಲೆಯಲ್ಲಿ ಫೆ.23 ರಂದು ಆಯೋಜಿಸಲಾಗುತ್ತಿರುವ ಕರ್ನಾಟಕ ರಾಜ್ಯ ಸರ್ಕಾರದ ಮಹತ್ವಾ ಕಾಂಕ್ಷಿ ಪಂಚ ಗ್ಯಾರಂಟಿ ಯೋಜನೆಗಳ ಉತ್ಸವವನ್ನು ಅತ್ಯಂತ ಅರ್ಥಪೂರ್ಣವಾಗಿ ಹಾಗೂ ಮಾದರಿಯಾಗಿ ಆಯೋಜಿಸುವಂತೆ ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ (ಮೈಸೂರು ವಿಭಾಗ)ರಾದ ಡಾ.ಪುಷ್ಪಾ ಅಮರನಾಥ್ ತಿಳಿಸಿದರು.

ಅವರು ಬುಧವಾರ ಚಿಕ್ಕಮಗಳೂರು ಜಿಲ್ಲಾ ಪಂಚಾಯತ್ ಮಿನಿ ಸಭಾಂಗಣದಲ್ಲಿ ಆಯೋಜಿಸಿದ್ದ ಗ್ಯಾರಂಟಿ ಉತ್ಸವದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ರಾಜ್ಯದ ಅಭಿವೃದ್ಧಿಯಲ್ಲಿ ಮತ್ತು ಆರ್ಥಿಕ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರ ವಹಿಸಿರುವ ಪಂಚ ಗ್ಯಾರಂಟಿ ಯೋಜನೆಗಳ ಮಾಹಿತಿಯು ಗ್ಯಾರಂಟಿ ಉತ್ಸವದ ಮೂಲಕ ಪ್ರತೀ ಮನೆಗಳಿಗೆ ಮತ್ತು ವ್ಯಕ್ತಿಗಳಿಗೆ ತಲುಪಬೇಕು. ಈ ಹಿನ್ನೆಲೆಯಲ್ಲಿ ಗ್ಯಾರಂಟಿ ಉತ್ಸವವು ಶಿಸ್ತುಬದ್ಧವಾಗಿ ಜರುಗಬೇಕೆಂದು ಹೇಳಿದರು.

ಗ್ಯಾರಂಟಿ ಉತ್ಸವದ ಯಶಸ್ಸಿಗಾಗಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳು ಈಗಾಗಲೇ ಹಲವು ಸಮಿತಿಗಳನ್ನು ರಚಿಸಿ ಕಾರ್ಯಕ್ರಮದ ಸುವ್ಯವಸ್ಥಿತವಾದ ಆಯೋಜನೆಗೆ ಆದೇಶಿಸಿದ್ದಾರೆ. ಇದು ಸರ್ಕಾರದ ಮಹತ್ವದ ಕಾರ್ಯಕ್ರಮವಾಗಿರುವುದರಿಂದ ಅಧಿಕಾರಿಗಳು ಯಾವುದೇ ಕಾರಣಕ್ಕೂ ನಿರ್ಲಕ್ಷ್ಯ ವಹಿಸಬಾರದು. ತಮಗೆ ನೀಡಿರುವ ಜವಾಬ್ದಾರಿಗಳನ್ನು ಎಲ್ಲ ಅಧಿಕಾರಿಗಳು ಕಟ್ಟುನಿಟ್ಟಾಗಿ ನಿರ್ವಹಿಸಬೇಕು ಎಂದರು.

ಕಾರ್ಯಕ್ರಮಕ್ಕೆ ಆಗಮಿಸುವ ಗಣ್ಯರಿಗೆ, ಅತಿಥಿಗಳಿಗೆ ಸರಿಯಾದ ಮಾಹಿತಿ ನೀಡಿ ಕಾರ್ಯಕ್ರಮಕ್ಕೆ ಆಹ್ವಾನಿಸಿ ಯಾವುದೇ ಲೋಪಗಳು ಕಂಡು ಬಂದಲ್ಲಿ ಅಧಿಕಾರಿಗಳೇ ನೇರ ಹೊಣೆಗಾರರಾಗುತ್ತಾರೆ ಎಂದ ಅವರು, ಎಲ್ಲಾ ಇಲಾಖೆಯ ಅಧಿಕಾರಿಗಳು ಒಗ್ಗಟ್ಟಿನಿಂದ ಸಮನ್ವಯದೊಂದಿಗೆ ಪರಸ್ಪರ ಚರ್ಚಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು. ಸಾರಿಗೆ, ಊಟದ ವ್ಯವಸ್ಥೆಯನ್ನು ಸಮರ್ಪಕವಾಗಿ ಮಾಡಬೇಕು ಹಾಗೂ ಕಾರ್ಯಕ್ರಮದಲ್ಲಿ ಯಾವುದೇ ರೀತಿಯ ಲೋಪ ಕಂಡು ಬರಬಾರದು ಎಂದು ತಿಳಿಸಿದರು.

ಜಿಲ್ಲಾ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಂ.ಸಿ.ಶಿವಾನಂದಸ್ವಾಮಿ ಮಾತನಾಡಿ, ಗ್ಯಾರಂಟಿ ಉತ್ಸವದ ಯಶಸ್ವಿಗಾಗಿ ಗ್ಯಾರಂಟಿ ಅನುಷ್ಠಾನ ಸಮಿತಿಗಳ ತಾಲ್ಲೂಕು ಅಧ್ಯಕ್ಷರಿಗೆ ಹಾಗೂ ಯೋಜನೆಗಳ ಮುಖ್ಯಸ್ಥರಿಗೆ ಜವಾಬ್ದಾರಿ ನೀಡಲಾಗಿದೆ. ಈಗಾಗಲೇ ಪೂರ್ವಭಾವಿ ಸಭೆಗಳನ್ನು ಜರುಗಿಸಿ ಸಿದ್ಧತೆಯನ್ನು ಪರಿಶೀಲಿಸಲಾಗಿದೆ. ಯೋಜನೆಗಳ ಮಹತ್ವ ಹಾಗೂ ಲಾಭ ಎಲ್ಲಾ ಸಾರ್ವಜನಿಕರಿಗೂ ಮನವರಿಕೆಯಾಗುವಂತೆ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಜರುಗಿಸಲು ಕೈಜೋಡಿಸಬೇಕು ಎಂದು ತಿಳಿಸಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಹೆಚ್.ಎಸ್.ಕೀರ್ತನಾ ಮಾತನಾಡಿ, ಗ್ಯಾರಂಟಿ ಉತ್ಸವ ಕಾರ್ಯಕ್ರಮದ ಪ್ರತಿಯೊಂದು ಹಂತವನ್ನು ಪೂರ್ವ ಯೋಜನೆಯೊಂದಿಗೆ ಅನುಷ್ಠಾನಗೊಳಿಸಬೇಕು. ವಿವಿಧ ಇಲಾಖೆಗಳ ನಡುವೆ ಸಮನ್ವಯ ಅತ್ಯಂತ ಅಗತ್ಯವಾಗಿದ್ದು, ಸರ್ಕಾರದ ಗ್ಯಾರಂಟಿ ಯೋಜನೆಗಳ ಬಗ್ಗೆ ಜನರಿಗೆ ಸ್ಪಷ್ಟ ಮಾಹಿತಿ ತಲುಪುವಂತೆ ನೋಡಿಕೊಳ್ಳಬೇಕು. ಕಾರ್ಯಕ್ರಮಕ್ಕೂ ಮುನ್ನ ಗ್ಯಾರಂಟಿ ಯೋಜನೆಗಳಿಗೆ ಸಂಬಂಧಿಸಿದಂತೆ ನಗರದ ಆಜಾದ್ ಪಾರ್ಕ್‍ನಿಂದ ಕುವೆಂಪು ಕಲಾಮಂದಿರದವರೆಗೂ ಜಾಥಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು ಎಂದರು.

ಸಭೆಯಲ್ಲಿ ಜಿಲ್ಲಾ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷರುಗಳಾದ ಎಸ್.ಎನ್.ಮಂಜುನಾಥ್, ಕೃಷ್ಣೇಗೌಡ, ತಾಲ್ಲೂಕುಗಳ ಗ್ಯಾರಂಟಿ ಅನುಷ್ಠಾನ ಸಮಿತಿಗಳ ಅಧ್ಯಕ್ಷರುಗಳು ಹಾಗೂ ಜಿ.ಪಂ.ನ ಮುಖ್ಯ ಯೋಜನಾಧಿಕಾರಿ ರಾಜ್‍ಗೋಪಾಲ್, ಉಪ ಕಾರ್ಯದರ್ಶಿ (ಆಡಳಿತ) ಹೆಚ್.ಎಸ್.ಸುಜಾತ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ