February 20, 2026

 

 

ಧಾರ್ಮಿಕ ಹಾಗೂ ಲೌಕಿಕ ಶಿಕ್ಷಣವನ್ನು ಸಮನ್ವಯವಾಗಿ ಒದಗಿಸುವ ಸಂಘ–ಸಂಸ್ಥೆಗಳು ಸಮಾಜದಲ್ಲಿ ಹೆಚ್ಚು ಸಕ್ರಿಯವಾಗಬೇಕು. ಶಿಕ್ಷಣದಿಂದ ಯಾರೂ ವಂಚಿತರಾಗದಂತೆ ಜವಾಬ್ದಾರಿಯುತವಾಗಿ ಮುನ್ನಡೆಯುವುದು ಅವಶ್ಯಕ ಎಂದು ಬದ್ರಿಯ್ಯೀನ್ ಕೇಂದ್ರ ಜುಮ್ಮಾ ಮಸೀದಿ ಖತೀಬ್ ಮುಸ್ತಫಾ ಯಮಾನಿ ಹೇಳಿದರು.

ಮೂಡಿಗೆರೆ ಪಟ್ಟಣದ ಬದ್ರಿಯಾ ಜುಮ್ಮಾ ಮಸೀದಿಯಲ್ಲಿ ಬುಧವಾರ ನಡೆದ ಅಭಿನಂದನಾ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಸಮಸ್ತ ಕೇರಳ ಇಸ್ಲಾಂ ಮತ ವಿದ್ಯಾಭ್ಯಾಸ ಬೋರ್ಡ್ ರಾಷ್ಟ್ರೀಯ ಮಂಡಳಿಗೆ ನೂತನ ಸದಸ್ಯರಾಗಿ ಆಯ್ಕೆಯಾದ ಸಿ.ಕೆ. ಇಬ್ರಾಹಿಂ ಹಾಜಿ ಅವರನ್ನು ತಾಲೂಕು ಮದರಸಾ ಮ್ಯಾನೇಜ್ಮೆಂಟ್ ಸಮಿತಿ ಹಾಗೂ ಸಂಯುಕ್ತ ಜಮಾತ್ ಒಕ್ಕೂಟದ ವತಿಯಿಂದ ಸನ್ಮಾನಿಸಲಾಯಿತು.

1954ರಲ್ಲಿ ಕೇರಳದಲ್ಲಿ ಆರಂಭವಾದ ಈ ಬೋರ್ಡ್ ಇಂದು ದೇಶಾದ್ಯಂತ 11 ಸಾವಿರಕ್ಕೂ ಹೆಚ್ಚು ಮದರಸಾ ಹಾಗೂ ಅರೇಬಿಕ್ ಕಾಲೇಜುಗಳನ್ನು ಹೊಂದಿದ್ದು, ಸಾವಿರಾರು ವಿದ್ಯಾರ್ಥಿಗಳಿಗೆ ಧಾರ್ಮಿಕ ಮತ್ತು ಲೌಕಿಕ ಶಿಕ್ಷಣ ಒದಗಿಸುತ್ತಿದೆ. ಆರ್ಥಿಕವಾಗಿ ಹಿಂದುಳಿದ ಕುಟುಂಬಗಳ ಮಕ್ಕಳಿಗೆ ವಸತಿ ವ್ಯವಸ್ಥೆ ಕಲ್ಪಿಸುವ ಮೂಲಕ ಶಿಕ್ಷಣದ ವ್ಯಾಪ್ತಿಯನ್ನು ವಿಸ್ತರಿಸಿದೆ. ಸಂಸ್ಥೆಯ ಚಟುವಟಿಕೆಗಳಿಂದ ವಿದ್ಯಾರ್ಥಿಗಳು ಗುಣಮಟ್ಟದ ಶಿಕ್ಷಣ ಪಡೆಯಲು ಸಾಧ್ಯವಾಗಿದೆ ಎಂದು ಮುಸ್ತಫಾ ಯಮಾನಿ ಹೇಳಿದರು.

ಮದರಸಾಗಳ ಕುರಿತು ತಪ್ಪು ಕಲ್ಪನೆಗಳನ್ನು ಮೂಡಿಸುವುದು ಸರಿಯಲ್ಲ. ಪ್ರತಿ ಮದರಸಾದಲ್ಲೂ ನುರಿತ ಶಿಕ್ಷಕರನ್ನು ನೇಮಿಸಿ ಶಿಸ್ತುಬದ್ಧವಾಗಿ ಶಿಕ್ಷಣ ನೀಡಲಾಗುತ್ತಿದೆ. ದೇಶವಿರೋಧಿ ಚಟುವಟಿಕೆಗಳಿಗೆ ಪ್ರೋತ್ಸಾಹ ನೀಡಲಾಗುತ್ತದೆ ಎಂಬ ಆರೋಪಗಳು ಆಧಾರರಹಿತ. ಅನುಮಾನ ಹೊಂದಿರುವವರು ಮದರಸಾಗಳಿಗೆ ಭೇಟಿ ನೀಡಿ ವಾಸ್ತವ ಸ್ಥಿತಿ ಪರಿಶೀಲಿಸಬಹುದು ಎಂದು ಅವರು ತಿಳಿಸಿದರು.

ನೂತನ ಸದಸ್ಯ ಸಿ.ಕೆ. ಇಬ್ರಾಹಿಂ ಹಾಜಿ ಮಾತನಾಡಿ, ತಮಗೆ ದೊರೆತಿರುವ ಜವಾಬ್ದಾರಿಯನ್ನು ಸಮರ್ಪಕವಾಗಿ ನಿಭಾಯಿಸಲು ಪ್ರಯತ್ನಿಸುವುದಾಗಿ ಹೇಳಿದರು. ಚಿಕ್ಕಮಗಳೂರು ಜಿಲ್ಲೆಯಲ್ಲಿ ಧಾರ್ಮಿಕ ಮತ್ತು ಲೌಕಿಕ ಶಿಕ್ಷಣ ಸಂಸ್ಥೆಯನ್ನು ಸ್ಥಾಪಿಸುವ ಕುರಿತು ಧಾರ್ಮಿಕ ವಿದ್ವಾಂಸರೊಂದಿಗೆ ಚರ್ಚೆ ನಡೆಸಲಾಗುವುದು ಎಂದರು.

ಕಾರ್ಯಕ್ರಮದಲ್ಲಿ ಬದ್ರಿಯಾ ಮಸೀದಿ ಅಧ್ಯಕ್ಷ ಎ.ಎಂ. ಶರೀಫ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ