February 20, 2026

 

 

ಹೊರನಾಡು ಶ್ರೀ ಅನ್ನಪೂರ್ಣೇಶ್ವರಿದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವವು ಭಕ್ತಿಭಾವ ಮತ್ತು ಸಂಭ್ರಮದ ವಾತಾವರಣದಲ್ಲಿಆರಂಭಗೊಂಡಿದೆ. ಜಾತ್ರಾ ಮಹೋತ್ಸವದ ಅಂಗವಾಗಿ ಗುರುವಾರ ಮಧ್ಯಾಹ್ನಧ್ವಜಾರೋಹಣ ಸಮಾರಂಭ ಭಕ್ತರ ಜಯಘೋಷಗಳ ನಡುವೆ ಭಕ್ತಿಪೂರ್ವಕವಾಗಿ ನೆರವೇರಿತು.

ಜಾತ್ರೆಗೆ ಮುನ್ನಾದಿನವಾದ ಬುಧವಾರ ರಥೋತ್ಸವಾಂಗ, ಗಣಪತಿ ಪೂಜೆ, ಮಹಾಗಣಪತಿ ಹೋಮ ಹಾಗೂ ಮಹಾ ರಂಗಪೂಜೆಯಂತಹಧಾರ್ಮಿಕ ವಿಧಿವಿಧಾನಗಳ ಮೂಲಕ ಉತ್ಸವಕ್ಕೆ ಭಕ್ತಿಪೂರ್ಣ ಚಾಲನೆ ನೀಡಲಾಯಿತು. ಗುರುವಾರ ಬೆಳಿಗ್ಗೆಯಿಂದಲೇ ದೇವಸ್ಥಾನದಲ್ಲಿ ವಿವಿಧ ಪೂಜಾ ಕಾರ್ಯಕ್ರಮಗಳು ಕ್ರಮಬದ್ಧವಾಗಿ ನಡೆಯುತ್ತಿದ್ದು, ಮಧ್ಯಾಹ್ನದೇವಸ್ಥಾನದಧರ್ಮಕರ್ತರಾದ ಜಿ. ಭೀಮೇಶ್ವರಜೋಷಿಯವರ ನೇತೃತ್ವದಲ್ಲಿಧ್ವಜಾರೋಹಣ ನೆರವೇರಿತು. ರಾತ್ರಿ ಪುಷ್ಪಕಾರೋಹಣಕಾರ್ಯಕ್ರಮ ಭಕ್ತರ ಮನಸೆಳೆಯಿತು.

ಜಾತ್ರಾ ಮಹೋತ್ಸವದ ಹಿನ್ನೆಲೆಯಲ್ಲಿರಾಜ್ಯದ ವಿವಿಧ ಭಾಗಗಳಿಂದ ಸಾವಿರಾರು ಭಕ್ತರು ಆಗಮಿಸಿ ದೇವಿಯದರ್ಶನ ಪಡೆದು ಆಶೀರ್ವಾದ ಪಡೆದರು. ಶುಕ್ರವಾರ ಮಧ್ಯಾಹ್ನ ಶ್ರೀ ಬ್ರಹ್ಮರಥೋತ್ಸವ ಹಾಗೂ ರಾತ್ರಿ ಶ್ರೀಮನ್ ಮಹಾರಥೋತ್ಸವನಡೆಯಲಿದ್ದು, ಈ ಕಾರ್ಯಕ್ರಮಗಳಿಗೆ ಭಾರೀ ಸಂಖ್ಯೆಯಲ್ಲಿ ಭಕ್ತರು ಭಾಗವಹಿಸುವ ನಿರೀಕ್ಷೆಯಿದೆ.

ದೇವಸ್ಥಾನ ಪರಿಸರದಲ್ಲಿ ಸಮಗ್ರ ಸ್ವಚ್ಛತಾಕಾರ್ಯ ಕೈಗೊಳ್ಳಲಾಗಿದೆ. ವಿದ್ಯುತ್ ದೀಪಾಲಂಕಾರ, ಹೂವಿನ ಅಲಂಕಾರ ಹಾಗೂ ತಳಿರು ತೋರಣಗಳಿಂದ ದೇವಸ್ಥಾನ ಸೊಬಗು ತುಂಬಿಕೊಂಡಿದೆ. ಜಾತ್ರೆಯ ಅಂಗವಾಗಿ ರಸ್ತೆಯ ಇಕ್ಕೆಲಗಳಲ್ಲಿ ವಿವಿಧಅಂಗಡಿ ಮಾರುಕಟ್ಟೆಗಳು ತೆರೆಯಲ್ಪಟ್ಟಿದ್ದು, ಭಕ್ತರಿಗೆಅಗತ್ಯ ಸೌಲಭ್ಯಗಳು ಒದಗಿಸಲಾಗಿದೆ. ಭಕ್ತರ ಸುರಕ್ಷತೆ ಮತ್ತು ಶಿಸ್ತಿನ ದೃಷ್ಟಿಯಿಂದ ಮುಂಜಾಗ್ರತಾಕ್ರಮವಾಗಿ ಸಮರ್ಪಕ ಭದ್ರತಾ ವ್ಯವಸ್ಥೆಕೂಡಕಲ್ಪಿಸಲಾಗಿದೆ.

Leave a Reply

Your email address will not be published. Required fields are marked *

Related News

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ