February 20, 2026

 

 

ಪರಿಚಿತ ಕುಟುಂಬದ ಮುಸ್ಲೀಂ ಬಾಲಕಿಯನ್ನು ಮನೆಗೆ ಬಿಡಲು ಬೈಕಿನಲ್ಲಿ ಕೂರಿಸಿಕೊಂಡು ಹೋಗುತ್ತಿದ್ದ ಅಪ್ರಾಪ್ತ ದಲಿತ ಕ್ರಿಶ್ಚಿಯನ್   ಬಾಲಕನ ಮೇಲೆ  ಹಲ್ಲೆ ನಡೆಸಿರುವ ಆರೋಪದ ಮೇಲೆ ನಾಲ್ವರು ಮುಸ್ಲೀಂ  ಯುವಕರನ್ನು ಬಂಧಿಸಿರುವ ಘಟನೆ ಚಿಕ್ಕಮಗಳೂರು ನಗರದಲ್ಲಿ ನಡೆದಿದೆ.

ಬಾಲಕನ ಮೇಲೆ ಹಲ್ಲೆಗೈದ ಆರೋಪದ ಮೇಲೆ ಚಿಕ್ಕಮಗಳೂರು ನಗರ ಠಾಣೆಯಲ್ಲಿ  8 ಜನರ ಮೇಲೆ ಅಟ್ರಾಸಿಟಿ ಕೇಸ್ ದಾಖಲಾಗಿದೆ. 8 ಜನರಲ್ಲಿ ನಾಲ್ವರನ್ನು ಬಂಧಿಸಲಾಗಿದ್ದು, ಬಂಧಿತರನ್ನು ನಯಾಜ್, ತಬ್ರೀಜ್ ಮತ್ತು ಹನೀಫ್ ಎಂದು ಗುರುತಿಸಲಾಗಿದೆ. ಉಳಿದ ನಾಲ್ವರಿಗಾಗಿ ಶೋಧ ನಡೆಸಲಾಗುತ್ತಿದೆ.

ಅಪ್ರಾಪ್ತ ದಲಿತ ಕ್ರಿಶ್ಚಿಯನ್ ಬಾಲಕ, ಮುಸ್ಲಿಂ ಯುವತಿಯನ್ನು ಬೈಕ್​​ನಲ್ಲಿ ಕರೆದುಕೊಂಡು ಹೋಗುತ್ತಿದ್ದಾಗ ಚಿಕ್ಕಮಗಳೂರಿನ ಮಾರ್ಕೆಟ್ ರಸ್ತೆಯಲ್ಲಿ ಅಡ್ಡಗಟ್ಟಿದ್ದಾರೆ. ಬಳಿಕ  ಬಾಲಕನ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಬಾಲಕನ ತಾಯಿ, ಆ ಹುಡುಗಿ ನಮಗೆ ಗೊತ್ತು, ನಮ್ಮ ಮನೆಗೆ ಬರುತ್ತಿದ್ದಳು. ಹುಷಾರಿಲ್ಲ ಎಂದು ಅವಳು ಹೇಳಿದ್ದಕ್ಕೆ ಆಕೆಯನ್ನ ಮನೆಗೆ ಬಿಡಲು ನಮ್ಮ ಮಗ ಹೋಗಿದ್ದ. ಆಗ ರಸ್ತೆ ಮಧ್ಯೆ ಕೆಲವರು ಅಡ್ಡ ಹಾಕಿ ಪ್ರಶ್ನೆ ಮಾಡಿದ್ದಾರೆ. ರಸ್ತೆಯಲ್ಲಿ ಬೇಡ ಅಂತ ನಾನೇ ಮಾತನಾಡೋದಕ್ಕೆ ಮನೆಗೆ ಕರೆತಂದೆ. ಆಗ ಮನೆ ಬಳಿ 60 ಜನ ಹುಡುಗರು ಬಂದಿದ್ದರು. ಅವರಲ್ಲಿ 2-3 ಜನ ನನ್ನ ಮಗನ ಮೇಲೆ ಹಲ್ಲೆ ಮಾಡಿದ್ದರು ಎಂದು ಆರೋಪಿಸಿದ್ದಾರೆ.

ನಗರ ಪೊಲೀಸ್ ಠಾಣೆಯಲ್ಲೇ ಎಸ್ಪಿ ಹಾಗೂ ಎಎಸ್ಪಿ ತಡರಾತ್ರಿಯವರೆಗೂ  ಮೊಕ್ಕಾಂ ಹೂಡಿದ್ದರು. ಈ ಬಗ್ಗೆ ಪ್ರತಿಕ್ರಿಯಿಸಿರುವ ಎಸ್‌ಪಿ, ನೈತಿಕ ಪೊಲೀಸ್‌ಗಿರಿಯನ್ನು ಸಹಿಸುವ ಮಾತೇ ಇಲ್ಲ, ತಪ್ಪು ಮಾಡಿದವರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

Leave a Reply

Your email address will not be published. Required fields are marked *

Related News

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ