ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ವತಿಯಿಂದ ಫೆ.23ರಂದು ಬೆಳಗ್ಗೆ 10 ಗಂಟೆಗೆ ಚಿಕ್ಕಮಗಳೂರಿನ ಕುವೆಂಪು ಕಲಾ ಮಂದಿರದಲ್ಲಿ ರಾಜ್ಯ ಸರಕಾರದ ಪಂಚ ಗ್ಯಾರಂಟಿ ಯೋಜನೆಗಳ ಕಾರ್ಯಾಗಾರ ನಡೆಯಲಿದೆ ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ತಾಲೂಕು ಅಧ್ಯಕ್ಷ ಬಿ.ಎಸ್.ಜಯರಾಂಗೌಡ ಹೇಳಿದರು.
ಅವರು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕಾರ್ಯಕ್ರಮದ ಉದ್ಘಾಟನೆಯನ್ನು ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ.ಜಾರ್ಜ್ ನೇರವೇರಿಸಲಿದ್ದು, ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಚ್.ಎಂ.ರೇವಣ್ಣ, ಉಪಾಧ್ಯಕ್ಷೆ ಡಾ. ಪುಷ್ಪಾ ಅಮರನಾಥ್, ಶಾಸಕಿ ನಯನಾ ಮೋಟಮ್ಮ ಸೇರಿದಂತೆ ಜಿಲ್ಲೆಯ ಎಲ್ಲಾ ಕ್ಷೇತ್ರದ ಶಾಸಕರು ಹಾಗೂ ಎಲ್ಲಾ ತಾಲೂಕು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಸದಸ್ಯರುಗಳು ಭಾಗವಹಿಸಲಿದ್ದಾರೆ. ಅಲ್ಲದೇ ಮೂಡಿಗೆರೆ ತಾಲೂಕಿನಲ್ಲಿ ಪಂಚ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳನ್ನು ಕರೆದೊಯ್ಯಲು ಬಸ್ ವ್ಯವಸ್ಥೆ ಕಲ್ಪಿಸಲಾಗಿದ್ದು, ಫಲಾನುಭವಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಬೇಕೆಂದು ಮನವಿ ಮಾಡಿದರು.
ರಾಜ್ಯದಲ್ಲಿ ಅನುಷ್ಠಾನಗೊಳಿಸಿರುವ ಪಂಚ ಗ್ಯಾರಂಟಿ ಯೋಜನೆ ಜನರಿಗೆ ಅತ್ಯಂತ ಅನುಕೂಲವಾಗಿದೆ ಇದನ್ನು ವಿಶ್ವ ಸಂಸ್ಥೆ ಕೂಡ ಕೊಂಡಾಡಿದ್ದು, ಅಮೇರಿಕಾದ ಅಧ್ಯಕ್ಷ ಟ್ರಂಪ್ ಕೂಡ ಈ ಯೋಜನೆ ತನ್ನ ದೇಶದಲ್ಲೂ ಕಾರ್ಯರೂಪಕ್ಕೆ ತರುವ ಬಗ್ಗೆ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಇತರೇ ರಾಜ್ಯದಲ್ಲಿ ಗ್ಯಾರಂಟಿ ಯೋಜನೆ ರೂಪಿಸಲು ಚಿಂತನೆ ನಡೆಸಿರುವುದು ನಮ್ಮ ರಾಜ್ಯ ಮಾದರಿಯಾಗಿದೆ ಎಂದು ಹೇಳಿದರು.
ಗೋಷ್ಠಿಯಲ್ಲಿ ಸಮತಿ ಸದಸ್ಯರಾದ ಶ್ರೀನಿವಾಸ್ ಕುನ್ನಳ್ಳಿ, ಹರ್ಷ ಮೆಲ್ವಿನ್, ನಾರಾಯಣ ಜನ್ನಾಪುರ, ಅರುಣ್ ಗುತ್ತಿ, ಬಿ.ಕೆ.ಜಯಮ್ಮ



