ಚಿಕ್ಕಮಗಳೂರು ಕಾಫಿನಾಡಲ್ಲಿ ಕಾಡಾನೆ ದಾಳಿಗೆ ಮಹಿಳೆ ಬಲಿ ಪ್ರಕರಣ
ಸರ್ಕಾರ, ಅರಣ್ಯ ಇಲಾಖೆ ವಿರುದ್ಧ ಪ್ರತಿಭಟನೆ ನಡೆಸಿದ ಹೋರಾಟಗಾರರ ಮೇಲೆ ಲಾಠಿಚಾರ್ಜ್ ಗೆ ಖಂಡನೆ
ಇಂದು ಸೋಮವಾರ ಶೃಂಗೇರಿ ವಿಧಾನಸಭಾ ಕ್ಷೇತ್ರದ ಬಂದ್ ಗೆ ಕರೆ ಹಿನ್ನೆಲೆ
ಶೃಂಗೇರಿ ಕ್ಷೇತ್ರದ ಶೃಂಗೇರಿ, ಎನ್. ಆರ್.ಪುರ, ಕೊಪ್ಪ ತಾಲೂಕು, ಚಿಕ್ಕಮಗಳೂರು ತಾಲೂಕಿನ ಖಾಂಡ್ಯ ಹೋಬಳಿ ವ್ಯಾಪ್ತಿಯಲ್ಲಿ ಬಂದ್
ಅಗತ್ಯ ಸೇವೆಗಳನ್ನು ಹೊರತುಪಡಿಸಿ ಇನ್ನುಳಿದಂತೆ ಎಲ್ಲಾ ಚಟುವಟಿಕೆಗಳು ಬಂದ್ ಆಗುವ ಸಾಧ್ಯತೆ
ಬೆಳಗ್ಗೆ 8 ರಿಂದ ಸಂಜೆ 5ರ ತನಕ ಬಂದ್ ಗೆ ಕರೆ ನೀಡಿರುವ ರೈತ ಸಂಘಟನೆಗಳು
ನಾಗರಿಕ ಹಿತ ರಕ್ಷಣಾ ವೇದಿಕೆ, ರೈತ ಒಕ್ಕೂಟ, ಆಟೋಚಾಲಕರು, ಮಾಲೀಕರ ಸಂಘ, ಬಿಜೆಪಿಯಿಂದ ಬಂದ್ ಗೆ ಬೆಂಬಲ
ಬೆಳಿಗ್ಗೆ 11 ಗಂಟೆಗೆ ಬಾಳೆಹೊನ್ನೂರಿನಲ್ಲಿ ಬೃಹತ್ ಪ್ರತಿಭಟನಾ ಸಭೆ
ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಡಳಿತದಿಂದ ಬಿಗಿ ಪೊಲೀಸ್ ಭದ್ರತೆ
ಸರ್ಕಾರದ ವಿರುದ್ಧ ಇಂದೂ ಮುಂದುವರೆಯಲಿರುವ ಹೋರಾಟ.
ಭಾನುವಾರ ಕಡಬಗೆರೆ ಸಮೀಪದ ಹುಣಸೆಹಳ್ಳಿಯಲ್ಲಿ ಕಾಡಾನೆ ದಾಳಿಗೆ ಮಹಿಳೆ ಬಲಿಯಾದ ಪ್ರಕರಣ ನಡೆದಿತ್ತು. ಕಾಡಾನೆ ಹಾವಳಿ ತಡೆಗೆ ಆಗ್ರಹಿಸಿ ಬಾಳೆಹೊನ್ನೂರಿನಲ್ಲಿ ರೈತರು ಬೃಹತ್ ಪ್ರತಿಭಟನೆ ನಡೆಸಿದರು. ಈ ಸಂದರ್ಭದಲ್ಲಿ ಪ್ರತಿಭಟನಾಕಾರರು ಮತ್ತು ಪೊಲೀಸರ ನಡುವೆ ಚಕಮಕಿ ನಡೆದು ಲಾಠಿ ಚಾರ್ಜ್ ನಡೆಸಲಾಗಿತ್ತು ಮತ್ತು ಹಲವು ಪ್ರತಿಭಟನಾಕಾರರನ್ನು ಬಂಧಿಸಲಾಗಿತ್ತು.



