ಮೂಡಿಗೆರೆ ತಾಲ್ಲೂಕು ಜಕ್ಕಳಿ ಗ್ರಾಮದ ಕಾಫಿ ಬೆಳೆಗಾರರು, ಮೂಡಿಗೆರೆ ಎಪಿಎಂಸಿ ಮಾಜಿ ನಿರ್ದೇಶಕ ಜೆ.ಆರ್. ಜಗದೀಶ್ ಗೌಡ (66 ವರ್ಷ) ನಿಧನರಾಗಿದ್ದಾರೆ.
ಕೆಲ ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೇ ಇಂದು ದಿನಾಂಕ : 26-02-2026ರ ಗುರುವಾರ ಮುಂಜಾನೆ ಸ್ವಗೃಹದಲ್ಲಿ ಕೊನೆಯುಸಿರೆಳೆದಿದ್ದಾರೆ.
ಉತ್ತಮ ಕೃಷಿಕರಾಗಿದ್ದ ಜಗದೀಶ್ ಅವರು ಕಾಫಿ, ಕಾಳುಮೆಣಸು, ಅಡಿಕೆ ಬೆಳೆಗಾರರಾಗಿ ಹೆಸರು ಮಾಡಿದ್ದರು. ಸಾರ್ವಜನಿಕ ಕ್ಷೇತ್ರದಲ್ಲಿಯೂ ಸಕ್ರಿಯವಾಗಿದ್ದರು. ಸಹಕಾರ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸಿದ್ದರು. ಬಿ.ಹೊಸಳ್ಳಿ ಸಹಕಾರ ಸಂಘ ಪಲ್ಗುಣಿ ಇದರ ನಿರ್ದೇಶಕ ಮತ್ತು ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು. ಮೂಡಿಗೆರೆ ಎಪಿಎಂಸಿ ನಿರ್ದೇಶಕರಾಗಿ ಕಾರ್ಯನಿರ್ವಹಿಸಿದ್ದರು
ಮೃತರು ಪತ್ನಿ, ಓರ್ವ ಪುತ್ರ, ಓರ್ವ ಪುತ್ರಿ, ಓರ್ವ ಸಹೋದರ, ಮೂವರು ಸಹೋದರಿಯರು ಮತ್ತು ಅಪಾರ ಬಂಧುಗಳನ್ನು ಅಗಲಿದ್ದಾರೆ.
ಮೃತರ ಅಂತ್ಯಕ್ರಿಯೆಯು ಇಂದು ಗುರುವಾರ ಸಂಜೆ 5 ಗಂಟೆಗೆ ನೆರವೇರಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.
ಸಹೃದಯಿಯಾಗಿದ್ದ ಜಗದೀಶ್ ಗೌಡ ಅವರು ಅಪಾರ ಸ್ನೇಹ ಬಳಗವನ್ನು ಹೊಂದಿದ್ದರು. ಜಕ್ಕಳ್ಳಿ ಜಗಣ್ಣ ಎಂದೇ ಪ್ರೀತಿಯಿಂದ ಕರೆಸಿಕೊಳ್ಳುತ್ತಿದ್ದರು.
ಜಗದೀಶ್ ಅವರ ನಿಧನಕ್ಕೆ ಕರ್ನಾಟಕ ಬೆಳೆಗಾರರ ಒಕ್ಕೂಟ, ಮೂಡಿಗೆರೆ ಬೆಳೆಗಾರರ ಸಂಘ, ಒಕ್ಕಲಿಗರ ಸಂಘ, ಕೆಂಪೇಗೌಡ ಒಕ್ಕಲಿಗರ ವೇದಿಕೆ ಸೇರಿದಂತೆ ವಿವಿಧ ಸಂಘ ಸಂಸ್ಥೆಗಳು, ರಾಜಕೀಯ ಪಕ್ಷಗಳ ಮುಖಂಡರು ತಮ್ಮ ಸಂತಾಪ ವ್ಯಕ್ತಪಡಿಸಿದ್ದಾರೆ.



