thawar chand

 

 

ನೇಮಕಾತಿ ಪ್ರಕ್ರಿಯೆಗೆ ತೊಡಕಾಗಿದ್ದ ಒಳ ಮೀಸಲಾತಿ ವಿಧೇಯಕ   ‘ಕರ್ನಾಟಕ ಪರಿಶಿಷ್ಟ ಜಾತಿಗಳ ಉಪ ವರ್ಗೀಕರಣ ವಿಧೇಯಕ 2025’ಕ್ಕೆ  ರಾಜ್ಯಪಾಲರು ಸಹಿ ಹಾಕಿದ್ದಾರೆ.

ಸಚಿವರ ನಿಯೋಗ ಇಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್‌ರನ್ನು ಭೇಟಿಯಾಗಿ ವಿಧೇಯಕಕ್ಕೆ ಸಹಿ ಹಾಕುವಂತೆ ಮನವಿ ಮಾಡಿದ್ದರು. ಸರ್ಕಾರದ ಮನವಿ ಮೇರೆಗೆ ರಾಜ್ಯಪಾಲರು ಸಹಿ ಹಾಕಿದ್ದಾರೆ.

ಧಾರವಾಡದಲ್ಲಿ ಉದ್ಯೋಗಾಂಕ್ಷಿಗಳು ನೇಮಕಾತಿ ಆಗುತ್ತಿಲ್ಲ ಅಂತ ದೊಡ್ಡ ಮಟ್ಟದ ಹೋರಾಟ ನಡೆಸಿದ್ದರು. ಈ ಹಿನ್ನಲೆಯಲ್ಲಿ ಸರ್ಕಾರ ನೇಮಕಾತಿ ಪ್ರಕ್ರಿಯೆಗೆ ಕ್ರಮ ತೆಗೆದುಕೊಳ್ಳಲು ಮುಂದಾಗಿದೆ. ಆದರೆ ಕೋರ್ಟ್ ಕೇಸ್ ಹಾಗೂ ರಾಜ್ಯಪಾಲರು ಬಿಲ್‌ಗೆ ಸಹಿ ಹಾಕದ ಹಿನ್ನೆಲೆಯಲ್ಲಿ ನೇಮಕಾತಿ ಪ್ರಕ್ರಿಯೆಗೆ ತಡೆ ಆಗಿತ್ತು. ಈ ಹಿನ್ನಲೆಯಲ್ಲಿ ಇಂದು ಸಿಎಂ ಸಿದ್ದರಾಮಯ್ಯ ನಿವಾಸ ಕಾವೇರಿಯಲ್ಲಿ ಕಾನೂನು ಸಚಿವರು ಮತ್ತು ದಲಿತ ಸಚಿವರ ಜೊತೆ ಸಿಎಂ ಸಭೆ ನಡೆಸಿದ ಮುಂದಿನ ತೀರ್ಮಾನದ ಬಗ್ಗೆ ಚರ್ಚೆ ನಡೆಸಿದರು. ಸಭೆಯಲ್ಲಿ ಬಿಲ್‌ಗೆ ರಾಜ್ಯಪಾಲರ ಸಹಿ ಹಾಕಿಸಲು ಮನವಿ ಮಾಡುವ ನಿರ್ಧಾರ ಮಾಡಲಾಯಿತು.

ಅದರಂತೆ ಮಧ್ಯಾಹ್ನ ರಾಜ್ಯಪಾಲರನ್ನ ಭೇಟಿಯಾಗಿ ಸಚಿವರ ನಿಯೋಗ ವಿವರಣೆ ಮತ್ತು ಸಹಿ ಹಾಕುವ ಅಗತ್ಯತೆ ಬಗ್ಗೆ ಮನವರಿಕೆ ಮಾಡಿ ಬಿಲ್‌ಗೆ ಸಹಿ ಹಾಕುವಂತೆ ಮನವಿ ಮಾಡಿದ್ರು. ಸರ್ಕಾರದ ಮನವಿ ಮೇರೆಗೆ ರಾಜ್ಯಪಾಲರು ಸಹಿ ಹಾಕಿದ್ದಾರೆ. ಸರ್ಕಾರ ಒಳ ಮೀಸಲಾತಿ ಸಂಬಂಧ ನಿ.ನ್ಯಾ. ನಾಗಮೋಹನ್ ದಾಸ್ ನೇತೃತ್ವದ ಸಮಿತಿ ರಚನೆ ಮಾಡಿ ವರದಿ ಪಡೆದಿತ್ತು. ನಾಗಮೋಹನ್ ಸಮಿತಿಯು 5 ವಿಭಾಗ ಮಾಡಿ ಒಳ ಮೀಸಲಾತಿ ವರ್ಗೀಕರಣ ಮಾಡಿತ್ತು. ಆದರೆ ಸರ್ಕಾರ ವರದಿ ಅನುಷ್ಠಾನ ಮಾಡದೇ 3 ವಿಭಾಗ ಎ.ಬಿ.ಸಿ ಅಂತ ವಿಂಗಡಿಸಿ ಕ್ರಮವಾಗಿ 6-6-5% ಮೀಸಲಾತಿ ಹಂಚಿಕೆ ಮಾಡಿ ಬಿಲ್ ಉಭಯ ಸದನದಲ್ಲಿ ಪಾಸ್ ಆಗಿತ್ತು. ರಾಜ್ಯಪಾಲರು ಬಿಲ್‌ಗೆ ಸಹಿ ಹಾಕದೇ ಹಾಗೇ ಇಟ್ಟುಕೊಂಡಿದ್ದರು. ಈಗ ರಾಜ್ಯಪಾಲರು ಬಿಲ್‌ಗೆ ಸಹಿ ಹಾಕಿದ್ದು, ನೇಮಕಾತಿ ಪ್ರಕ್ರಿಯೆಗೆ ಅನುಕೂಲ ಆಗಲಿದೆ.

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ