suddi4 (1)

 

 

ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ ಸೀರೆ ನೀಡುವ ಬದಲು, 15000 ರೂ.ಗಳು ಗೌರವಧನ ಹೆಚ್ಚಿಸಬೇಕು ಎಂದು ಒತ್ತಾಯಿಸಿ ಎಐಟಿಯುಸಿ ಪದಾಧಿಕಾರಿಗಳು ಮಂಗಳವಾರ ಜಿಲ್ಲಾಡಳಿತ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.

ಈ ವೇಳೆ ಎಐಟಿಯುಸಿ ಜಿಲ್ಲಾಧ್ಯಕ್ಷೆ ಗ್ರೆಟ್ಟಾ ಫರ್ನಾಂಡೀಸ್ ಮಾತನಾಡಿ ರಾಜ್ಯ ಸರ್ಕಾರ ಮಂಡಿಸಿರುವ ಬಜೆಟ್‍ನಲ್ಲಿ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರ ಗೌರವಧನ ಹೆಚ್ಚಿಸದೇ ನಿರಾಸೆಯುನ್ನು ಂಟು ಮಾಡಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ರಾಜ್ಯಸರ್ಕಾರ ಅಧಿಕಾರಕ್ಕೆ ಬರುವ ಪೂರ್ವದಲ್ಲಿ ಚುನಾವಣಾ ಪ್ರಣಾಳಿಕೆಯ ಭರವಸೆಯಂತೆ ಆರನೇ ಗ್ಯಾರಂಟಿಯಾಗಿ ಪ್ರಿಯಾಂಕಾಗಾಂಧಿ ಘೋಷಿಸಿರುವಂತೆ ಅಂಗನವಾಡಿ, ಬಿಸಿಯೂಟ, ಆಶಾ ಕಾರ್ಯಕರ್ತೆ ರಯರಿಗೆ ಗೌರವಧನ ಹೆಚ್ಚಿಸುವ ಪ್ರಸ್ತಾವನೆ ಮಾಡಿದ್ದರು ಎಂದರು.

ಸರ್ಕಾರ ಬಂದು ಮೂರು ವರ್ಷಗಳು ಕಳೆದರೂ ಕಾರ್ಯಕರ್ತೆಯರ ಗೌರವಧನ ಹೆಚ್ಚಿಸುವ ಮತ್ತು ಇಡುಗಂಟು ನೀಡುವ ಭರವಸೆ ಈಡೇರಿಸಿಲ್ಲ. ಹಿಂದಿನ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ನೇತೃತ್ವ ದ ಬಿಜೆಪಿ ಸರ್ಕಾರ ತನ್ನ ಕೊನೆಯ ಬಜೆಟ್‍ನಲ್ಲಿ ಸಾವಿರ ರೂ. ಹೆಚ್ಚಿಸುವುದಾಗಿ ಘೋಷಿಸಿತು. ಆದರೆ ಈ ಘೋಷಣೆ ಅನುಷ್ಟಾನಕ್ಕೆ ಬಂದಿಲ್ಲ. ಈಗಿನ ಸರ್ಕಾರವು ಬಜೆಟ್‍ನಲ್ಲಿ ಒಂದು ರೂ. ಗೌರವ ಹೆಚ್ಚಿಸಿಲ್ಲ ಎಂ ದು ತಿಳಿಸಿದರು.

ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪುಷ್ಪ ಬಸವರಾಜ್ ಮಾತನಾಡಿ 2011ನೇ ಸಾಲಿನಿಂದ ಅಂಗನವಾಡಿ ಗಳಲ್ಲಿ ದುಡಿದು ನಿವೃತ್ತರಾಗಿರುವ ವಯೋವೃದ್ದ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ ಗ್ರಾಚ್ಯುಟಿ ಸೌಲಭ್ಯ ಜಾರಿ ಮಾಡಿಲ್ಲ. ಆನಂತರ ನಿವೃತ್ತಿಯಾದವರಿಗೆ ಅನ್ವಯವಾಗುವಂತೆ ಗ್ರಾಚ್ಯುಟಿ ಜಾರಿಗೊಳಿಸುತ್ತೀ ರಿ. ಇದರಿಂದಾಗಿ ಸುಮಾರು 15 ರಿಂದ 20 ಸಾವಿರದಷ್ಟು ನಿವೃತ್ತ ವಯೋವೃದ್ದ ಕಾರ್ಯಕರ್ತೆಯರು, ಸಹಾಯಕರಿಗೆ ಬದ್ಧ ಗ್ರಾಚ್ಯುಟಿ ಸೌಲಭ್ಯ ಒದಗಿಸಬೇಕು ಎಂದರು.

ಎಐಟಿಯುಸಿ ಕಾರ್ಯಕರ್ತೆಯರ ಶ್ರಮಕ್ಕೆ ತಕ್ಕ ಪ್ರತಿಫಲ ನೀಡುವ ಸಂಭಾವನೆಯನ್ನು ಹೆಚ್ಚಳ ಮಾಡ ದೇ ಸೀರೆಯನ್ನು ನೀಡುವುದಾಗಿ ಘೋಷಿಸುವ ಮೂಲಕ ನಮ್ಮ ದುಡಿಮೆಗೆ ತಕ್ಕ ಪ್ರತಿಫಲ ನೀಡುತ್ತಿಲ್ಲ. ಮಹಿಳಾ ಕಾರ್ಮಿಕರಿಗೆ ಕನಿಷ್ಟ ವೇತನದ ನಿರಾಕರಣೆ ಮಾಡಿದಂತಾಗಿದೆ. ಕೂಡಲೇ ಮುಖ್ಯಮಂತ್ರಿಗಳು ಸೀರೆ ನೀಡುವ ಬದಲು, ಅನುದಾನದಲ್ಲಿ ಗೌರವಧನವಾಗಿ ಹೆಚ್ಚಿಸಬೇಕು ಎಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಎಐಟಿಯುಸಿ ಚಿಕ್ಕಮಗಳೂರು ತಾಲ್ಲೂಕು ಅಧ್ಯಕ್ಷೆ ಶೈಲಾ ಬಸವರಾಜ್, ಕಡೂರು ಅಧ್ಯಕ್ಷೆ ಪಾರ್ವ ತಿ, ಮೂಡಿಗೆರೆ ಅಧ್ಯಕ್ಷೆ ಕೆ.ಆರ್.ಶೈಲಾ, ಸದಸ್ಯರಾದ ವಸಂತ ಧರ್ಮೇಗೌಡ, ವನಜಾಕ್ಷಿ, ದೀಪಿಕಾ, ಸುಖನ್ಯ ಮತ್ತಿತರರು ಹಾಜರಿದ್ದರು.

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ