ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳ ಮುಖ್ಯ ಸಮಸ್ಯೆ ಯಾದ ಮಾನ್ಯತೆ ನವೀಕರಣ ವಿಚಾರವನ್ನು ಚರ್ಚಿಸಿ, ಒಂದು ವಾರದಲ್ಲಿ ರಾಜ್ಯಮಟ್ಟದಲ್ಲಿ ತೀರ್ಮಾನಿಸಲಾಗುವುದು ಎಂದು ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಬೋಜೇಗೌಡ ಹೇಳಿದರು.
ಚಿಕ್ಕಮಗಳೂರು ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಮಂಗಳವಾರ ಜಿಲ್ಲೆಯ ಶಿಕ್ಷಕರ ಸಭೆಯಲ್ಲಿ ಪಾಲ್ಗೊಂಡು ಅವರ ಮಾತನಾಡಿ ನಾಡಿಗೆ ಜ್ಞಾನ ದಾಸೋಹವನ್ನು ಉಣಬಡಿಸುವ ಶಿಕ್ಷಕರಿಗೆ ಯಾವುದೇ ಸಮಸ್ಯೆಗ ಳಿಂದ ಬಳಲಬಾರದಂತೆ ಸೂಕ್ತ ಕ್ರಮ ವಹಿಸಲಾಗುವುದು ಎಂದರು.
ನಗರ ಹಾಗೂ ಗ್ರಾಮೀಣ ಭಾಗದ ಶಾಲಾ ಶಿಕ್ಷಕರು 10 ರಿಂದ 20 ವರ್ಷದ ಬಾಂಡ್‍ಗಳಿಗೆ ಕ್ಷೇತ್ರ ಶಿ ಕ್ಷಣಾಧಿಕಾರಿ ಹಾಗೂ ಡಿಡಿಪಿಐ ಕಚೇರಿಗೆ ಅಲೆಯುವುದನ್ನು ತಪ್ಪಿಸಲು ನೆರೆದಿದ್ದ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡುವ ಮೂಲಕ ಶಿಕ್ಷಕರಿಗೆ ತೊಂದರೆಯಾಗದಂತೆ ಕ್ರಮ ವಹಿಸಬೇಕು ಎಂದು ತಿಳಿಸಿದರು.
ಸರ್ಕಾರಿ ಕಚೇರಿಗಳಲ್ಲಿ ಶಿಕ್ಷಕರಿಗೆ ಗೌರವ ಸೂಚಿಸುವುದು ಅಧಿಕಾರಿಗಳ ಕರ್ತವ್ಯ. ಆ ನಿಟ್ಟಿನಲ್ಲಿ ಶಿಕ್ಷಕ ರಿಗೆ ಅಗೌರವ ತೋರುವ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದ ಅವರು ಕೆಲವೊಂ ದು ಶಾಲೆಗಳ ಸಮಸ್ಯೆಗಳಿಗೆ ಸ್ಥಳಿಯವಾಗೇ ಸಂಬಂಧಿಸಿದ ಅಧಿಕಾರಿಗಳೊಂದಿಗೆ ಚರ್ಚಿಸಿ ಬಗೆಹರಿಸಿದರು.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾದಿಕಾರಿ ಹೆಚ್.ಎಸ್.ಕೀರ್ತನಾ ಮಾತನಾಡಿ ಗ್ರಾಮೀ ಣ ಭಾಗದಲ್ಲಿ ಕೆಲವು ಸರ್ಕಾರಿ ಶಾಲೆಗಳಲ್ಲಿ ಸ್ಥಳೀಯ ಕೆಲ ಪುಂಡರ ಮದ್ಯ ಬಾಟಲಿಗಳನ್ನು ಶಾಲಾವರಣ ದಲ್ಲೇ ಬಿಸಾಡಿ ಹೋಗುತ್ತಿದ್ದಾರೆ. ಈ ಬಗ್ಗೆ ಸ್ಥಳೀಯವಾಗಿ ಕ್ರಮ ಕೈಗೊಳ್ಳಲು ತೀರ್ಮಾನಿಸಲಾಗಿದೆ ಎಂ ದರು.
ಸರ್ಕಾರಿ ಶಾಲೆಗಳಲ್ಲಿ ಸಿಸಿ ಕ್ಯಾಮರಾ ಅಳವಡಿಸುವ ಸಂಬಂಧ ಕೆಲ ಶಿಕ್ಷಕರ ಆಗ್ರಹದ ಮೇರೆಗೆ ಸಿಇಓ ಉತ್ತರಿಸಿ ಶಾಲಾವರಣದಲ್ಲಿ ಸಿಸಿ ಕ್ಯಾಮರಾ ಅವಶ್ಯವಾಗಿದೆ. ಇದು ಅನೈತಿಕ ಚಟುವಟಿಕೆಗಳನ್ನು ಮಟ್ಟಹಾಕ ಲು ಸಹಕಾರಿ. ಆದ್ದರಿಂದ ಮುಂದೆ ಈ ನಿರ್ಧಾರವನ್ನು ಕೈಗೊಂಡು ಶಾಲಾವರಣ ಸ್ವಚ್ಚತೆ ಕಾಪಾಡಲು ಶ್ರ ಮಿಸಲಾಗುವುದು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಡಿಡಿಪಿಐ ಅಭಿವೃದ್ದಿ ವೈ.ಬಿ.ಸುಂದ್ರೇಶ್, ಆಡಳಿತ ತಿಮ್ಮರಾಜು, ಶಿಕ್ಷಣಾಧಿಕಾರಿ ನಾ ಗರಾಜ್, ವಿವಿಧ ಇಲಾಖೆ ಅಧಿಕಾರಿಗಳು ಹಾಗೂ ಅನುದಾನಿತ, ಅನುದಾನ ರಹಿತ ಶಾಲಾ ಮುಖ್ಯಶಿಕ್ಷಕರು ಉ ಪಸ್ಥಿತರಿದ್ದರು.



