ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿ ವತಿಯಿಂದ ಬೆಂಗಳೂರಿನಲ್ಲಿ ಹಮ್ಮಿಕೊಂಡಿದ್ದ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮೂಡಿಗೆರೆ ತಾಲ್ಲೂಕಿನ ಬಣಕಲ್ ಹೋಬಳಿ ಬಾನಳ್ಳಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ ಶ್ರೀಮತಿ ಇಂಪಾ ಸವಿನ್ ಅವರು ರಾಜ್ಯಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿ ಸ್ವೀಕರಿಸಿದರು.

ಈ ಸಂದರ್ಭದಲ್ಲಿ ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿ ಜಿಲ್ಲಾ ಅಧ್ಯಕ್ಷರಾದ ಮುಗುಳಿಕಟ್ಟೆ ಲೋಕೇಶ್ ಹಾಗೂ ತಾಲೂಕ್ ಅಧ್ಯಕ್ಷರಾದ ಆರ್ ಪ್ರಕಾಶ್ ಉಪಸ್ಥಿತರಿದ್ದರು. ಇಂಪಾ ಅವರ ಪತಿ ಸವೀನ್ ಹಾಗೂ ಸಹೋದರ ಪಿಡಿಒ ಇಂತೇಶ್, ಭಾವ ರವಿ ಅವರು ಭಾಗವಹಿಸಿದ್ದರು.




