IMG-20260311-WA0004

 

 

ಮೂಡಿಗೆರೆ ಜೇಸಿಐ ಸಂಸ್ಥೆಯ ಮಾಜಿ ಅಧ್ಯಕ್ಷ ಹಾಗೂ ಹಿರಿಯ ಕಾಫಿ ಬೆಳೆಗಾರ ಎಂ.ಡಿ. ಗೋಪಾಲ್(79 ವರ್ಷ) ಮಾಕೋನಹಳ್ಳಿ ಇಂದು ದಿನಾಂಕ : 11-03-2026 ರ ಬುಧವಾರ ಮುಂಜಾನೆ ನಿಧನರಾಗಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಅವರು ಚಿಕ್ಕಮಗಳೂರು ಹೋಲಿಕ್ರಾಸ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ಎಂ.ಡಿ. ಗೋಪಾಲ್ ಅವರು ಮೂಡಿಗೆರೆ ತಾಲ್ಲೂಕಿನ ಮಾಕೋನಹಳ್ಳಿ ಗ್ರಾಮದವರು, ಮೂಡಿಗೆರೆ ಸಮೀಪದ ನಡುವಿನ ಮಾಡ್ಕಲ್ ಗ್ರಾಮದ ಸೋಮೇಶ್ವರ ಎಸ್ಟೇಟ್ ಮಾಲೀಕರಾಗಿದ್ದರು. ಉತ್ತಮ ಕಾಫಿ ಬೆಳೆಗಾರರಾಗಿ ಹೆಸರು ಮಾಡಿದ್ದರು.

ಕೃಷಿಯೊಂದಿಗೆ ವಿವಿಧ ಸಂಘ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸಿದ್ದರು. ಮೂಡಿಗೆರೆ ಜೇಸಿಐ ಸಂಸ್ಥೆಯ ಪದಾಧಿಕಾರಿಯಾಗಿ, ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಮೃತರು ಪತ್ನಿ ಸುಧಾ, ಪುತ್ರರಾದ ವಿಕಾಶ್ ಮತ್ತು ವರುಣ್, ಅಪಾರ ಬಂಧುಗಳನ್ನು ಅಗಲಿದ್ದಾರೆ.

ಮೃತರ ಅಂತ್ಯ ಸಂಸ್ಕಾರವು ಇಂದು ಬುಧವಾರ ಸಂಜೆ 4 ಗಂಟೆಗೆ ನಡುವಿನ ಮಾಡ್ಕಲ್ ಗ್ರಾಮದಲ್ಲಿ ನೆರವೇರಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ