ಪಿಎಂ ವಿಶ್ವಕರ್ಮ ವಸ್ತು ಪ್ರದರ್ಶನ ಮತ್ತು ವ್ಯಾಪಾರ ಮೇಳವು ಮಾರ್ಚ್ 13, 14 ಮತ್ತು 15 ರಂದು ನಗರದ ಆಜಾದ್ ಪಾರ್ಕ್‍ನಲ್ಲಿ ನಡೆಯಲಿದೆ.
ಇಂಧನ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಕೆ.ಜೆ.ಜಾರ್ಜ್ ಅವರು ಮೇಳವನ್ನು ಉದ್ಘಾಟಿಸುವರು. ವಿಧಾನ ಪರಿಷತ್ ಮಾನ್ಯ ಉಪ ಸಭಾಪತಿ ಎಂ.ಕೆ.ಪ್ರಾಣೇಶ್, ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ಶಾಸಕರಾದ ಟಿ.ಡಿ.ರಾಜೇಗೌಡ, ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಎಂ.ಶ್ರೀನಿವಾಸ್ ಭಾಗವಹಿಸುವರು.
ಚಿಕ್ಕಮಗಳೂರು ಕ್ಷೇತ್ರದ ಶಾಸಕ ಹೆಚ್.ಡಿ.ತಮ್ಮಯ್ಯ ಅಧ್ಯಕ್ಷತೆ ವಹಿಸಲಿದ್ದು, ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ, ರಾಜ್ಯಸಭೆ ಸದಸ್ಯರಾದ ಜೈರಾಮ್ ರಮೇಶ್, ಹಾಸನ ಲೋಕಸಭಾ ಕ್ಷೇತ್ರದ ಸಂಸದರಾದ ಶ್ರೇಯಸ್ ಎಂ.ಪಟೇಲ್, ವಿಧಾನ ಪರಿಷತ್ ಸದಸ್ಯರಾದ ಎಸ್.ಎಲ್.ಭೋಜೇಗೌಡ, ಶಾಸಕರುಗಳಾದ ಜಿ.ಹೆಚ್.ಶ್ರೀನಿವಾಸ್, ಕೆ.ಎಸ್.ಆನಂದ್, ನಯನ ಮೋಟಮ್ಮ, ವಿಧಾನ ಪರಿಷತ್ ಸದಸ್ಯರುಗಳಾದ ಸಿ.ಟಿ.ರವಿ, ಡಾ.ಧನಂಜಯ ಸರ್ಜಿ, ಡಾ.ಆರತಿ ಕೃಷ್ಣ, ಭದ್ರಾ ಕಾಡಾ ಅಧ್ಯಕ್ಷ ಡಾ.ಕೆ.ಪಿ.ಅಂಶುಮಂತ್, ಕ.ರಾ.ಕೃಷಿ ಉತ್ಪನ್ನ ಸಂಸ್ಕರಣೆ ಮತ್ತು ರಫ್ತು ನಿಗಮದ ಅಧ್ಯಕ್ಷ ಬಿ.ಹೆಚ್.ಹರೀಶ್, ನಗರಸಭೆ ಅಧ್ಯಕ್ಷೆ ಬಿ.ಶೀಲಾ ದಿನೇಶ್ ಪಾಲ್ಗೊಳ್ಳುವರು.
ಜಿಲ್ಲಾಧಿಕಾರಿ ಎನ್.ಎಂ.ನಾಗರಾಜ್, ಜಿ.ಪಂ. ಮುಖ್ಯ ಕಾರ್ಯಾ ನಿರ್ವಹಣಾಧಿಕಾರಿ ಹೆಚ್.ಎಸ್.ಕೀರ್ತನಾ, ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಜಿತೇಂದ್ರ ಕುಮಾರ್ ದಯಾಮ, ಅಪರ ಜಿಲ್ಲಾಧಿಕಾರಿ ನಾರಾಯಣರಡ್ಡಿ ಕನಕರಡ್ಡಿ, ಪೌರಾಯುಕ್ತ ಬಿ.ಸಿ.ಬಸವರಾಜು, ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆಯ ರಾಷ್ಟ್ರೀಯ ಸ್ಟೀರಿಂಗ್ ಸಮಿತಿ ಸದಸ್ಯರುಗಳಾದ ರವೀಂದ್ರ ಬೆಳವಾಡಿ, ಎನ್.ಭಾಸ್ಕರ್, ಸಂತೋಷ್ ಕೋಟ್ಯಾನ್, ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಮೇಲ್ವೀಚಾರಣಾ ಸಮಿತಿ ಸದಸ್ಯರುಗಳಾದ ಹೆಚ್.ಸಿ.ಕಲ್ಮರುಡಪ್ಪ, ಹೆಚ್.ಕೆ.ಮನೋಜ್, ರಾಜೇಶ್ವರಿ ರಾಜಶೇಖರ್ ಹಾಗೂ ಕೆ.ಮಣಿಕಂಠನ್ ಭಾಗವಹಿಸುವರು.



