sanvi1

 

 

ಮೂಡಿಗೆರೆ ತಾಲ್ಲೂಕಿನ ಊರುಬಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಂಬರಡಿ ಗ್ರಾಮದ ಕುಮಾರಿ ಕೆ.ಎಸ್. ಸಾನ್ವಿ ಅವರು ಚಾರ್ಟರ್ಡ್ ಅಕೌಂಟೆಂಟ್ (ಸಿಎ) ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ಸಾಧನೆ ಮಾಡಿದ್ದಾರೆ.

ಕುಂಬರಡಿ ಗ್ರಾಮದ ಕೆ.ಬಿ. ಸುಧಾಕರ್ ಮತ್ತು ಪವಿತ್ರಾ ದಂಪತಿಗಳ ಪುತ್ರಿಯಾಗಿರುವ ಸಾನ್ವಿ ಅವರು The Institute of Chartered Accountant of India ಸಂಸ್ಥೆ ನಡೆಸಿದ ಪರೀಕ್ಷೆಯಲ್ಲಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಸಾನ್ವಿ ಉಡುಪಿಯ ತ್ರಿಶಾ ವಿದ್ಯಾ ಕಾಲೇಜಿನಲ್ಲಿ ಬಿ.ಕಾಂ ಪದವಿ ಗಳಿಸಿದ್ದಾರೆ.

ಸಾನ್ವಿ ಅವರು ಎಸ್.ಎಸ್.ಎಲ್.ಸಿ. ಯಲ್ಲಿ ಶೇಕಡಾ 90 ಮತ್ತು ಮತ್ತು ದ್ವಿತೀಯ ಪಿಯುಸಿಯಲ್ಲಿ ಶೇಕಡಾ 97 ಅಂಕಗಳೊಂದಿಗೆ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದರು.

ಗ್ರಾಮೀಣ ವಿದ್ಯಾರ್ಥಿ ಸಾನ್ವಿಯವರ ಸಾಧನೆಗೆ ಕುಟುಂಬದವರು ಮತ್ತು ಬಂಧುಗಳು, ಸಹಪಾಠಿಗಳು, ಉಪನ್ಯಾಸಕರು ಅಭಿನಂದನೆ ಸಲ್ಲಿಸಿದ್ದಾರೆ.

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ