ಮಹಿಳೆಯರು ಸಮಾಜಕ್ಕೆ ಉತ್ತಮ ಕೊಡುಗೆಯನ್ನು ಸಲ್ಲಿಸುತ್ತಿದ್ದಾರೆ. ತಮಗೆ ವಹಿಸಿದ ಎಲ್ಲ ಜವಾಬ್ದಾರಿಯನ್ನು ಯಶಸ್ವಿಯಾಗಿ ನಿಭಾಯಿಸುತ್ತಿದ್ದಾಳೆ. ವಿವಿಧ ರಂಗಗಳಲ್ಲಿ ಸೇವೆ ಸಲ್ಲಿಸುತ್ತಿರುವ ಮಹಿಳೆಯರ ಸಾಧನೆ ಅಪಾರ ಎಂದು ಸಮಾಜಸೇವಕಿ ಪಲ್ಲವಿ ಸಿ.ಟಿ.ರವಿ ಹೇಳಿದರು.
ಚಿಕ್ಕಮಗಳೂರು ನಗರದ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ನಗರ ಮಹಿಳಾ ಮೋರ್ಚಾ ವತಿಯಿಂದ ಆಯೋಜಿಸಿದ್ಧ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮವನ್ನು ಬುಧವಾರ ಸಂಜೆ ಉದ್ಘಾಟಿಸಿ ಅವರು ಮಾತ ನಾಡಿದರು.
ಸಮಾಜದ ಬೆಳವಣಿಗೆಯಲ್ಲಿ ಪುರುಷರಿಗಿಂತ ಮಹಿಳೆಯರು ಒಂದು ಹೆಜ್ಜೆ ಮುಂದೆ ಇದ್ದಾರೆ. ಹಾಗಾಗಿ ಮಹಿಳೆಯರು ಸಂಘಟಿತರಾಗಬೇಕು, ಎಲ್ಲರೂ ಒಟ್ಟಾಗಿ ಸೇರಿ ಸಮಾಜವನ್ನು ಬಲವರ್ಧನೆಗೊಳಿಸಿ ಉತ್ತಮ ಮಟ್ಟಕ್ಕೆ ಕೊಂಡೊಯ್ಯಬೇಕು ಎಂದು ತಿಳಿಸಿದರು.
ಮಹಿಳಾ ದಿನಾಚರಣೆಯೂ ಒಂದು ದಿನಕ್ಕೆ ಸಿಮೀತವಾಗಬಾರದು. ಎಲ್ಲಾ ರಂಗದಲ್ಲೂ ತೊಡಗಿಸಿಕೊಂಡು ಸಮಾಜದ ಅಭಿವೃದ್ಧಿಗೆ ಮುಂದಾಗಬೇಕು. ಮಹಿಳೆಯರು ಮಗಳಾಗಿ, ಸಹೋದರಿಯಾಗಿ, ಬಾಳಸಂ ಗತಿಯಾಗಿ, ತಾಯಿಯಾಗಿ, ಅತ್ತೆ, ಅಜ್ಜಿಯಾಗಿ ಹಂತ ಹಂತವಾಗಿ ಈ ಎಲ್ಲ ಪಾತ್ರಗಳನ್ನು ಸಂತಸದಿಂದ ನಿರ್ವಹಿಸುತ್ತಾರೆ ಎಂದರು.
ಬಿಜೆಪಿ ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ಜಸಂತಾ ಅನಿಲ್‍ಕುಮಾರ್ ಮಾತನಾಡಿ ಮಹಿಳೆಯರಿಗೆ ಎದುರಾಗುವ ಸವಾಲುಗಳನ್ನು ಎದುರಿಸಿ ಮುನ್ನುಗ್ಗಿದರೆ ಸಮೃದ್ದಿ ಹಾಗೂ ಯಶಸ್ಸಿನ ಜೀವನ ನಡೆಸಬಹುದು. ಅಲ್ಲದೇ ಸಮಾಜಕ್ಕೆ ಹಾಗೂ ಕುಟುಂಬಕ್ಕೆ ಉತ್ತಮ ದಾರಿದೀಪ ಆಗಬಹುದು ಎಂದು ತಿಳಿಸಿದರು.
ಮಹಿಳೆಯರು ಅಬಲೆಯರಲ್ಲ, ಸಬಲೆಯರು. ಪುರುಷರಂತೆ ರಾಜಕೀಯ, ಶೈಕ್ಷಣಿಕ ಹಾಗೂ ಸಾಮಾ ಜಿಕ ಸೇರಿದಂತೆ ವಿವಿಧ ರಂಗಗಳಲ್ಲಿ ಮಹಿಳೆಯರು ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ. ಕುಟುಂಬಕ್ಕೆ ಕಾವಲಾಗಿ ಹಾಗೂ ಸಮಾಜಕ್ಕೆ ಒಳಿತನ್ನು ಬಯಸುವ ಪ್ರಜೆಗಳಾಗಿ ಮಹಿಳೆಯರು ಮುಂದಿದ್ದಾರೆ ಎಂದರು.
ಇದೇ ವೇಳೆ ಜಿಲ್ಲೆಯ ಹೆಮ್ಮೆಯ ಕಬಡ್ಡಿ ಆಟಗಾರ್ತಿ ರಾಷ್ಟ್ರಮಟ್ಟದಲ್ಲಿ ಚಿನ್ನದ ಪದಕವನ್ನು ಗಳಿಸಿರುವ ಕುಮಾರಿ ಮೋಕ್ಷ ಲೋಕೇಶ್ ಅವರಿಗೆ ಸನ್ಮಾನಿಸಲಾಯಿತು. ಪೆÇೀಕ್ಸೋ ಕಾಯ್ದೆ ಬಗ್ಗೆ ವಕೀಲೆ ಅರುಂಧತಿ ವಿಚಾರವನ್ನು ತಿಳಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ನಗರ ಮೋರ್ಚಾ ಅಧ್ಯಕ್ಷೆ ಪವಿತ್ರ ವಹಿಸಿದ್ದರು.
ಕಾರ್ಯಕ್ರಮದಲ್ಲಿ ನಗರಸಭಾ ಉಪಾಧ್ಯಕ್ಷೆ ಲಲಿತಾ ಬಾಯಿ, ಸದಸ್ಯರಾದ ರೂಪಕುಮಾರ್, ಅನುಮ ಧುಕರ್, ದೀಪಾ ರವಿಕುಮಾರ್ ನಗರ ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿಗಳಾದ ಶ್ರೀಮತಿ ಗಗನ, ಶ್ರೀಮತಿ ಮಧು ನಟರಾಜ್, ಪಕ್ಷದ ಪದಾಧಿಕಾರಿಗಳು, ಎಲ್ಲಾ ವಾರ್ಡಿನ ಕಾರ್ಯಕರ್ತರು ಇದ್ದರು.



