suddi-3(A)

 

 

ಚಿಕ್ಕಮಗಳೂರು ತಾಲೂಕಿನ ಮುತ್ತೋಡಿ ಅರಣ್ಯ ವಲಯದಲ್ಲಿ ಕಳೆದ 2 ದಿನಗಳಿಂದ ಭಾರೀ ಪ್ರಮಾಣದಲ್ಲಿ ಕಾಡ್ಗಿಚ್ಚು ಕಾಣಿಸಿಕೊಂಡಿದ್ದು, ಅಪರೂಪದ ಅರಣ್ಯ ಸಂಪತ್ತು ನಾಶವಾಗೋದ್ರ ಜೊತೆ ಜೀವ ಸಂಕುಲಕ್ಕೂ ಸಂಚಕಾರ ಎದುರಾಗಿದೆ. ಭದ್ರಾ ಅಭಯಾರಣ್ಯ ವ್ಯಾಪ್ತಿಗೆ ಕಾಡ್ಗಿಚ್ಚು ಹಬ್ಬಿರೋದು ಸ್ಥಳಿಯರು ಹಾಗೂ ಪರಿಸರ ಪ್ರೇಮಿಗಳಲ್ಲಿ ಆತಂಕ ಮೂಡಿಸಿದೆ.

ಮುತ್ತೋಡಿ ಅಭಯಾರಣ್ಯದ ವ್ಯಾಪ್ತಿಯ ಎಮ್ರಹಳ್ಳಿ ಮತ್ತು ಹೊಸಖಾನ್ ಸುತ್ತಮುತ್ತಲಿನ ಅರಣ್ಯ ಪ್ರದೇಶಗಳಲ್ಲಿ ಬೆಂಕಿ ಕಾಣಿಸಿಕೊಂಡದ್ದು ಬಿಸಿಲ ಬೇಗೆಗೆ ಒಣಗಿದ ತರಗೆಲೆಗಳು ಮತ್ತು ಹುಲ್ಲಿನಿಂದಾಗಿ ಕ್ಷಣಾರ್ಧದಲ್ಲೇ ಕಿ.ಮೀ.ಗಳಷ್ಟು ದೂರ ಬೆಂಕಿ ವ್ಯಾಪಿಸಿದ ಪರಿಣಾಮವಾಗಿ ಅಪರೂಪದ ಸಸ್ಯ ಸಂಪತ್ತು ಸುಟ್ಟು ಕರಕಲಾಗಿದೆ. ಬೆಂಕಿಯ ಕೆನ್ನಾಲಿಗೆಗೆ ಅಭಯಾರಣ್ಯದಲ್ಲಿನ ಜೀವಂಕುಲಕ್ಕೂ ಸಂಚಕಾರ ಎದುರಾಗಿದೆ.

ಕಾಡಿಗೆ ಬೆಂಕಿ ಬೀಳುತ್ತಿದ್ದಂತೆ ಪ್ರಾಣಿಗಳು ಬೆಂಕಿಯಿಂದ ತಪ್ಪಿಸಿಕೊಳ್ಳಲು ಕಾಡಂಚಿನ ಗ್ರಾಮ ಹಾಗೂ ತೋಟಗಳಿಗೆ ಓಡಿರುವ ಸಾಧ್ಯತೆ ಇದೆ ಅಂತಾರೆ ತಜ್ಞರು. ಆದ್ರೀಗ, ಬೆಂಕಿಯನ್ನ ನಿಯಂತ್ರಣಕ್ಕೆ ತರಲು ಅರಣ್ಯ ಇಲಾಖೆ ಸಿಬ್ಬಂದಿಗಳು ಹರಸಾಹಸ ಪಡುತ್ತಿದ್ದಾರೆ. ಆದರೆ, ಅರಣ್ಯ ಇಲಾಖೆಯಲ್ಲಿ ವಾಚರ್‍ಗಳ ಕೊರತೆ ಇರುವುದರಿಂದ ಬೆಂಕಿಯನ್ನು ನಿಯಂತ್ರಿಸಲು ತೊಂದರೆಯಾಗುತ್ತಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.

ಬೇಸಿಗೆಯಲ್ಲಿ ಸೂಕ್ಷ್ಮ ಪ್ರದೇಶದಲ್ಲಿ ಅರಣ್ಯ ಇಲಾಖೆ ಫೈರ್ ಲೈನ್‍ಗಳನ್ನು ಮಾಡಿಲ್ಲ ಎಂದು ಸಾರ್ವಜನಿಕರು ಅಸಮಾಧಾನ ಹೊರಹಾಕಿದ್ದಾರೆ. ಮುತ್ತೋಡಿ ಭಾಗದ ಜೇನುಕಲ್ಲುಗಿರಿ, ಕಾಗೆಮನೆಗಿರಿ ಹಾಗೂ ಗೆಸ್ಟ್ ಹೌಸ್ ರಸ್ತೆಯ ಭಾಗಗಳಲ್ಲಿ ಫೈರ್ ಲೈನ್ ಮಾಡದಿರುವುದು ಬೆಂಕಿ ವೇಗವಾಗಿ ಹರಡುವುದಕ್ಕೆ ಕಾರಣವಾಗಿದೆ ಎಂಬ ಆರೋಪಗಳು ಕೇಳಿಬಂದಿವೆ. ಸ್ಥಳೀಯರು ಹಾಗೂ ಪರಿಸರ ಪ್ರೇಮಿಗಳು ತಕ್ಷಣವೇ ಹೆಚ್ಚಿನ ಸಿಬ್ಬಂದಿ ಹಾಗೂ ಅಗ್ನಿ ನಿಯಂತ್ರಣ ಸಾಧನಗಳನ್ನು ನಿಯೋಜಿಸಿ ಕಾಡ್ಗಿಚ್ಚನ್ನು ಸಂಪೂರ್ಣವಾಗಿ ನಂದಿಸಬೇಕು ಎಂದು ಆಗ್ರಹಿಸಿದ್ದಾರೆ.

ಬೆಂಕಿ ಇಟ್ಟವರ ಪತ್ತೆಗೆ ಶ್ವಾನದಳದ ಸಿಬ್ಬಂದಿ ಹುಡುಕಾಟ

ಕಾಡಿಗೆ ಬೆಂಕಿ ಕೊಟ್ಟವರ ಪತ್ತೆಗಾಗಿ ಕಾಡಿನಲ್ಲಿ ಎರಡು ಅರಣ್ಯ ಸಂಚಾರಿ ದಳದ ಶ್ವಾನಗಳು ಹುಡುಕಾಟ ನಡೆಸುತ್ತಿವೆ. ಶಿರವಾಸೆ ಗ್ರಾಮದ ಹಿಡುವಳಿ ಮಾಡದ ಜಮೀನಿನಿಂದ ಬೆಂಕಿ ಹರಡಿದೆ ಎನ್ನಲಾಗುತ್ತಿದೆ. ಥರ್ಮಲ್ ಡ್ರೋನ್ ಮೂಲಕ ಬೆಂಕಿ ಕೊಡುವವರ ಶೋಧಕ್ಕೆ ಅರಣ್ಯ ಇಲಾಖೆ ಮುಂದಾಗಿದೆ. ಇದರ ಜೊತೆ ಮುತ್ತೋಡಿ ಅರಣ್ಯದಂಚಿನ ಗ್ರಾಮಗಳ ಜನರಿಗೆ ಇಲಾಖೆ ಸಿಬ್ಬಂದಿ ಜಾಗೃತಿ ಮೂಡಿಸುತ್ತಿದ್ದಾರೆ.
ಮುತ್ತೋಡಿ ಅರಣ್ಯದ ಸುತ್ತಲೂ ಬೆಂಕಿ ಹರಡದಂತೆ ವ್ಯವಸ್ಥೆ ಸಹ ಮಾಡಲಾಗಿದೆ. ಬಿಸಿಲ ಧಗೆಯಿಂದ ಅರಣ್ಯ ರಕ್ಷಿಸಲು ಅರಣ್ಯ ಇಲಾಖೆ ಸಿಬ್ಬಂದಿಗಳು ಹರಸಾಹಸಪಡುತ್ತಿದ್ದಾರೆ. ಇನ್ನೂ ತಂತ್ರಜ್ಞಾನ ಹಾಗೂ ಸಿಬ್ಬಂದಿ ಕೊರತೆಯನ್ನು ಜಿಲ್ಲೆಯಲ್ಲಿ ಅರಣ್ಯ ಇಲಾಖೆ ಎದುರಿಸುತ್ತಿದೆ ಎಂದು ಗ್ರಾಮಸ್ಥರು ಹೇಳಿದ್ದಾರೆ.

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ