suddi-1 (3)

 

 

ಎಸ್‍ಎಸ್‍ಎಲ್‍ಸಿ ಪರೀಕ್ಷೆ ಎದುರಿಸುವ ವಿದ್ಯಾರ್ಥಿಗಳಿಗೆ ಆತ್ಮವಿಶ್ವಾಸ ಮೂಡಿಸಿದರೆ ನಿರ್ಭಯವಾಗಿ ಪರೀಕ್ಷೆ ಎದುರಿಸಲು ಸಹಕಾರಿಯಾಗುತ್ತದೆ ಎಂದು ಮೂಡಿಗೆರೆ  ಪಟ್ಟಣದ ಸರಕಾರಿ ಪದವಿಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗ ಶಾಲೆಯ ಎಸ್‍ಡಿಎಂಸಿ ಅಧ್ಯಕ್ಷ ಎಂ.ಎಸ್. ಅನಂತ್ ಹೇಳಿದರು.

ಅವರು ಬುಧವಾರ ಪಟ್ಟಣದ ಪದವಿ ಪೂರ್ವ ಕಾಲೇಜು ಆವರಣದಲ್ಲಿ ಎಸ್‍ಎಸ್‍ಎಲ್‍ಸಿ ಪರೀಕ್ಷೆ ಎದುರಿಸಲು ಆಗಮಿಸಿದ ವಿದ್ಯಾರ್ಥಿಗಳಿಗೆ ಹೂಗುಚ್ಛ, ಸಿಹಿ ನೀಡಿ, ಪರೀಕ್ಷಾ ಕೊಠಡಿಗೆ ಆತ್ಮೀಯವಾಗಿ ವಿದ್ಯಾರ್ಥಿಗಳನ್ನು  ಸ್ವಾಗತಿಸುವ ಸಂದರ್ಭದಲ್ಲಿ ಮಾತನಾಡಿದರು. ಎಸ್‍ಎಸ್‍ಎಲ್‍ಸಿ ಪರೀಕ್ಷೆ ಎಂದರೆ ವಿದ್ಯಾರ್ಥಿಗಳಲ್ಲಿ ಯಾವುದೇ ಭಯವಿರಬಾರದು. ವಿದ್ಯಾರ್ಥಿಗಳ ಮನಸಲ್ಲಿರುವ ಗೊಂದಲ ಮರೆ ಮಾಚಿ ಆತ್ಮವಿಶ್ವಾಸ ಮೂಡಿಸಲು  ಕಳೆದ ಎರಡು ವರ್ಷದಿಂದ ವಿದ್ಯಾರ್ಥಿಗಳಿಗೆ ಹೂಗುಚ್ಛ ನೀಡಿ, ಅವರನ್ನು ಹುರಿದುಂಬಿಸುವ ಕಾರ್ಯ ನಡೆಸಿಕೊಂಡು ಬರಲಾಗಿದೆ ಎಂದು ಹೇಳಿದರು.

ಉಪ ಪ್ರಾಂಶುಪಾಲ ಎಂ.ಜಗದೀಶ್ ನಾಯಕ್ ಮಾತನಾಡಿ, ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಎದುರಿಸುವ ಸಂದರ್ಭದಲ್ಲಿ ವಿದ್ಯಾರ್ಥಿಗಳು ಆತಂಕಕ್ಕೆ ಒಳಗಾಗಬಾರದೆಂಬ ದೃಷ್ಟಿಯಿಂದ ಇಲ್ಲಿಗೆ ಬರುವ ವಿದ್ಯಾರ್ಥಿಗಳು ವಿಶ್ವಾಸದಿಂದ ಪರೀಕ್ಷೆ ಎದುರಿಸಲು ದೈರ್ಯ ತುಂಬುವ ಕಾರ್ಯ ಮಾಡಲಾಗುತ್ತಿದೆ ಎಂದು ಹೇಳಿದರು. ಇದಕ್ಕೆ ಇದಕ್ಕೆ ಎಸ್‍ಡಿಎಂಸಿ ಪದಾಧಿಕಾರಿಗಳು, ಶಿಕ್ಷಕವೃಂದ ನೀಡುತ್ತಿರುವ ಸಹಕಾರ ಶ್ಲಾಘನಿಯ ಎಂದರು

ಈ ಸಂದರ್ಭದಲ್ಲಿ ಎಸ್‍ಡಿಎಂಸಿ ಉಪಾಧ್ಯಕ್ಷ ಪರಮೇಶ್, ಸದಸ್ಯರಾದ ರವಿ, ನರಸಿಂಹ ಸೇರಿದಂತೆ ಶಾಲೆ ಶಿಕ್ಷಕರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ