ಕುಕ್ಕನೂರಿನಿಂದ – ಧರ್ಮಸ್ಥಳಕ್ಕೆ ತೆರಳುತ್ತಿದ್ದ ಕಲ್ಯಾಣ ಕರ್ನಾಟಕ ಸಾರಿಗೆ (KKRTC) ಬಸ್ ಚಿಕ್ಕಮಗಳೂರು ಮೂಡಿಗೆರೆ ರಸ್ತೆಯ ಕಬ್ಬಿಣಸೇತುವೆ ಸಮೀಪದ ಕೊಡಾಳ್ ಬಳಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ಪಲ್ಟಿಯಾಗಿದೆ. ಶುಕ್ರವಾರ ರಾತ್ರಿ ಈ ಅಪಘಾತ ಸಂಭವಿಸಿದೆ.
ಅಪಘಾತದಲ್ಲಿ ಹಲವು ಪ್ರಯಾಣಿಕರು ಗಾಯಗೊಂಡಿದ್ದಾರೆ. ಗಾಯಗೊಂಡ ಪ್ರಯಾಣಿಕರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಮಾಡಲಾಗುತ್ತಿದೆ. ಬಸ್‍ನಲ್ಲಿ 40ಕ್ಕೂ ಹೆಚ್ಚು ಪ್ರಯಾಣಿಕರು ಪ್ರಯಾಣಿಸುತ್ತಿದ್ದರು. ಅಪಘಾತಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ.
ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಅಪಘಾತ ಸಂಭವಿಸಿದೆ.


