ಟಿಟಿ ವಾಹನ ಪಲ್ಟಿಯಾಗಿ ಒಂಬತ್ತು ಮಂದಿ ಗಂಭೀರ ಗಾಯಗೊಂಡು, ಓರ್ವ ವ್ಯಕ್ತಿ ಸಾವನ್ನಪ್ಪಿರುವ ಘಟನೆ ಚಾರ್ಮಾಡಿ ಘಾಟ್ ನಲ್ಲಿ ನಡೆದಿದೆ.
ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಘಾಟ್ ನ ಒಂಬತ್ತನೇ ತಿರುವಿನಲ್ಲಿ ಬ್ರೇಕ್ ಫೈಲ್ ಆಗಿ ಟಿಟಿ ವಾಹನ ಪಲ್ಟಿಯಾಗಿದೆ. ಶಿವಮೊಗ್ಗ ಜಿಲ್ಲೆಯ ಭದ್ರಾವತಿಯ ಮೇಲನಹಳ್ಳಿಯಿಂದ 13 ಮಂದಿ ಟಿಟಿ ವಾಹನದಲ್ಲಿ ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ. ಮಾರ್ಚ್ 21 ಶನಿವಾರ ಮುಂಜಾನೆ ಟಿಟಿ ವಾಹನ ಅಪಘಾತಕ್ಕೀಡಾಗಿದೆ.
ಟಿಟಿ ವಾಹನಲ್ಲಿ ಒಂದೇ ಕುಟುಂಬದ 13 ಮಂದಿಯಲ್ಲಿ 9 ಮಂದಿಗೆ ಗಂಭೀರ ಗಾಯವಾಗಿದ್ದು. ಮಲೇನಹಳ್ಳಿ ನಿವಾಸಿ ಶೇಖರಪ್ಪ (59) ಸಾವನ್ನಪ್ಪಿದ್ದಾರೆ. ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನಾ ಸ್ಥಳಕ್ಕೆ ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯ ಸಬ್ ಇನ್ಸ್‌ಪೆಕ್ಟರ್ ಕಿಶೋರ್ ಪಿ ಮತ್ತು ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.



