kottigehara

 

 

ಕೊಟ್ಟಿಗೆಹಾರ ಸಮೀಪದ ತರುವೆ ಏಕಲವ್ಯ ವಸತಿ ಶಾಲೆಯಲ್ಲಿ ಮಕ್ಕಳಿಗೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಬಣಕಲ್ ಪೊಲೀಸ್ ಠಾಣೆಯಲ್ಲಿ ಜಾತಿನಿಂದನೆ(ಅಟ್ರಾಸಿಟಿ) ಪ್ರಕರಣ ದಾಖಲಾಗಿದೆ.
ಘಟನೆಯಲ್ಲಿ, ವಿದ್ಯಾರ್ಥಿಗಳ ಮೇಲೆ ಕ್ರೂರವಾಗಿ ಥಳಿತ ನಡೆಸಿರುವುದರ ಜೊತೆಗೆ ಜಾತಿ ನಿಂದನೆ ಮಾಡಿದ ಆರೋಪ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ಪ್ರಾಂಶುಪಾಲ ಸತೀಶ್ ಪ್ರಸಾದ್‌ ಜೈಸ್ವಾಲ್ ಹಾಗೂ ಸಿಬ್ಬಂದಿ ಶುಭಂ ವಿರುದ್ಧ ಜಾತಿನಿಂದನೆ(ಅಟ್ರಾಸಿಟಿ) ಪ್ರಕರಣ ದಾಖಲಿಸಲಾಗಿದೆ.
ವಿದ್ಯಾರ್ಥಿ ಪ್ರೀತಮ್ ಅವರ ತಂದೆ, ಕಡೂರು ಮೂಲದ ರಮೇಶ್ ನಾಯಕ್ ನೀಡಿದ ದೂರಿನ ಮೇರೆಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಘಟನೆ ಬಹಿರಂಗವಾಗುತ್ತಿದ್ದಂತೆ ಸ್ಥಳೀಯರು ಹಾಗೂ ಪೋಷಕರಲ್ಲಿ ಆಕ್ರೋಶ ವ್ಯಕ್ತವಾಗಿದ್ದು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಲಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ