kps

 

 

ಕಳಸ ಕರ್ನಾಟಕ ಪಬ್ಲಿಕ್ ಶಾಲೆ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗಾಗಿ 2.07 ಕೋಟಿ ರೂಪಾಯಿಗಳ ಬೃಹತ್ ಅನುದಾನ ಬಿಡುಗಡೆ ಮಾಡಿದ ಶಿಕ್ಷಣ ಸಚಿವ  ಮಧು ಬಂಗಾರಪ್ಪ ಅವರಿಗೆ ಶಾಲಾ ಅಭಿವೃದ್ಧಿ ಸಮಿತಿ ಹಾಗೂ ಶಿಕ್ಷಕ ವೃಂದದ ವತಿಯಿಂದ ಅಭಿನಂದನೆ ಸಲ್ಲಿಸಲಾಯಿತು.

ವಿಧಾನ ಪರಿಷತ್ತಿನ ಸಭಾಪತಿಗಳಾದ  ಬಸವರಾಜ್ ಹೊರಟ್ಟಿ ಅವರ ಸಮ್ಮುಖದಲ್ಲಿ ಹಾಗೂ ಮೂಡಿಗೆರೆ ಕ್ಷೇತ್ರದ ಶಾಸಕಿ ಶ್ರೀಮತಿ ನಯನ ಮೋಟಮ್ಮ ಅವರ ನೇತೃತ್ವದಲ್ಲಿ ಸಚಿವರನ್ನು ಭೇಟಿ ಮಾಡಿ ಕೃತಜ್ಞತೆ ಸಲ್ಲಿಸಲಾಯಿತು.

ಈ ಹಿಂದೆ ಕಳಸ ಕೆಪಿಎಸ್ ಶಾಲೆಯಲ್ಲಿ ನಡೆದ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮಕ್ಕೆ ಸಚಿವರು ಭೇಟಿ ನೀಡಿದ್ದ ಸಂದರ್ಭದಲ್ಲಿ, ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಹಾಗೂ ಶಿಕ್ಷಕರು ಶಾಲೆಯ ಮೂಲಭೂತ ಸೌಲಭ್ಯಗಳ ಕೊರತೆಯ ಬಗ್ಗೆ ಗಮನ ಸೆಳೆದಿದ್ದರು. ಈ ಮನವಿಗೆ ತಕ್ಷಣ ಸ್ಪಂದಿಸಿದ್ದ ಸಚಿವರು, ಅನುದಾನ ಒದಗಿಸುವ ಭರವಸೆ ನೀಡಿದ್ದರು. ಅದರಂತೆ 2025-26ನೇ ಸಾಲಿನಲ್ಲಿ 2 ಕೋಟಿ 7 ಲಕ್ಷ ರೂಪಾಯಿಗಳನ್ನು ವಿಶೇಷ ಆಸಕ್ತಿಯಿಂದ ಮಂಜೂರು ಮಾಡಿದ್ದಾರೆ.

ಅಭಿನಂದನೆ ಸ್ವೀಕರಿಸಿ ಮಾತನಾಡಿದ ಸಚಿವ ಮಧು ಬಂಗಾರಪ್ಪನವರು, ಕಳಸ ಕೆಪಿಎಸ್ ಶಾಲೆಯ ಶೈಕ್ಷಣಿಕ ಪ್ರಗತಿ ಮತ್ತು ಸರ್ವಾಂಗೀಣ ಅಭಿವೃದ್ಧಿಯ ಕುರಿತು ಸಭಾಪತಿ ಬಸವರಾಜ್ ಹೊರಟ್ಟಿ ಅವರಿಗೆ ಅತ್ಯಂತ ಮೆಚ್ಚುಗೆಯಿಂದ ವಿವರಿಸಿದರು. ಮಲೆನಾಡು ಭಾಗದ ಗ್ರಾಮೀಣ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡಲು ಸರ್ಕಾರ ಬದ್ಧವಾಗಿದೆ ಎಂದು ಈ ಸಂದರ್ಭದಲ್ಲಿ ಪುನರುಚ್ಚರಿಸಿದರು.

ಕೆಪಿಎಸ್ ಕಳಸ ಶಾಲಾ ಅಭಿವೃದ್ಧಿ ಸಮಿತಿ. ಕಾರ್ಯಾಧ್ಯಕ್ಷ ಮಹಮ್ಮದ್ ರಫೀಕ್, ಸದಸ್ಯರಾದ ಸುರೇಶ್ ಕೆ.ಸಿ. ಹಾಗೂ ಶೂಕ್ತ ಗೌಡ, ಶಿಕ್ಷಕರಾದ ಸತೀಶ್, ಲೋಕೇಶ್ ಮತ್ತು ಶಿವಕುಮಾರ್

ಈ ಅನುದಾನದ ಮೂಲಕ ಶಾಲೆಯ ಕಟ್ಟಡ, ಸುಸಜ್ಜಿತ ಕೊಠಡಿಗಳು ಹಾಗೂ ಇತರ ಅಗತ್ಯ ಸೌಲಭ್ಯಗಳನ್ನು ಮೇಲ್ದರ್ಜೆಗೇರಿಸಲು ಯೋಜಿಸಲಾಗಿದೆ ಎಂದು ಶಾಲಾ ಸಮಿತಿ ತಿಳಿಸಿದೆ.

CREATOR: gd-jpeg v1.0 (using IJG JPEG v62), quality = 82

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ