Suddi1 (11)

 

 

ಕ್ಕಮಗಳೂರು ಜಿಲ್ಲೆಯಲ್ಲಿ ಅನುಸೂಚಿತ ಜಾತಿ, ಅನುಸೂಚಿತ ಪಂಗಡಗಳಿಗೆ ಸೇರಿದ ಕುಟುಂಬಗಳ ಮೇಲಿನ ದೌರ್ಜನ್ಯ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ ವ್ಯಾಜ್ಯಗಳನ್ನು ಶೀಘ್ರ ಇತ್ಯರ್ಥಪಡಿಸಲು ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಎನ್.ಎಂ.ನಾಗರಾಜ್ ಅವರು ಹೇಳಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಇಂದು ನಡೆದ ಅನುಸೂಚಿತ ಜಾತಿ, ಅನುಸೂಚಿತ ಪಂಗಡಗಳ ಜಿಲ್ಲಾ ಮಟ್ಟದ ಜಾಗೃತಿ ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು

ದೌರ್ಜನ್ಯ ಪ್ರಕರಣಗಳಲ್ಲಿ ನೊಂದ ಸಂತ್ರಸ್ತರ ಪರವಾಗಿ ಸಾಕ್ಷಿಗಳು ಸಮರ್ಪಕವಾಗಿ ಹೇಳಿಕೆಗಳನ್ನು ದಾಖಲಿಸಲು ಅವರಿಗೆ ಸರಿಯಾದ ಮಾರ್ಗದರ್ಶನ ಮಾಡಬೇಕು. ಅವರಿಗೆ ಸರ್ಕಾರದಿಂದ ಸಿಗುವ ಸೌಲಭ್ಯಗಳನ್ನು ಸಕಾಲದಲ್ಲಿ ದೊರೆಯುವಂತೆ ನೋಡಿಕೊಳ್ಳಬೇಕು ಎಂದ ಅವರು, ಜಾತಿ ನಿಂದನೆ ಪ್ರಕರಣಗಳನ್ನು ಹೂಡುವ ಸರ್ಕಾರದ ನಿಯಮಗಳನ್ನು ಪರಿಶೀಲಿಸಿ ಕ್ರಮ ಕೈಗೊಳ್ಳಬೇಕು. ಇದಕ್ಕೆ ಜಿಲ್ಲೆಯ ಎಲ್ಲಾ ಪೆÇಲೀಸ್ ಠಾಣೆಗಳಲ್ಲಿ ಸ್ಪಂದಿಸಿ ಕಾರ್ಯ ನಿರ್ವಹಿಸಬೇಕು ಎಂದರು.

ಒತ್ತಾಯಕ್ಕೆ ಮಣಿದು ಯಾವುದೇ ದೌರ್ಜನ್ಯ ಪ್ರಕರಣಗಳು ದಾಖಲಾಗಬಾರದು. ನೈಜ ವಿಷಯಗಳನ್ನು ಗಮನದಲ್ಲಿಟ್ಟುಕೊಂಡು ಪ್ರಕರಣ ದಾಖಲಿಸಬೇಕು ಹಾಗೂ ಪ್ರಥಮ ವರ್ತಮಾನ ವರದಿ ಆಧಾರದ ಮೇಲೆ ಸೂಕ್ತ ಕ್ರಮ ವಹಿಸಬೇಕು. ಜಿಲ್ಲೆಯಲ್ಲಿ ಅನುಸೂಚಿತ ಜಾತಿ, ಪಂಗಡಗಳ ಜನರು ವಾಸಿಸುವ ಪ್ರದೇಶಕ್ಕೆ ಅಗತ್ಯವಾದ ಮೂಲಭೂತ ಸೌಲಭ್ಯಗಳು ಸೇರಿದಂತೆ ಅವರಿಗೆ ನಿಯಮಾನುಸಾರ ವಸತಿ ನಿವೇಶನಗಳ ಹಕ್ಕುಪತ್ರಗಳನ್ನು ನೀಡಲು ಕ್ರಮ ಕೈಗೊಳ್ಳಬೇಕು. ಈ ಸಂಬಂಧ ವಿವಿಧ ಇಲಾಖೆಯ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಿ ಹಕ್ಕುಪತ್ರ ವಿತರಿಸಲು ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿತೇಂದ್ರ ಕುಮಾರ್ ದಯಾಮ ಮಾತನಾಡಿ, ಅನುಸೂಚಿತ ಜಾತಿ, ಅನುಸೂಚಿತ ಪಂಗಡಗಳಿಗೆ ಸೇರಿದ ಕುಟುಂಬಗಳ ಮೇಲಿನ ದೌರ್ಜನ್ಯ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದೆ. ಬಾಕಿ ಇರುವ ದೋಷಾರೋಪಣ ಪಟ್ಟಿಗೆ ಸಂಬಂಧಪಟ್ಟಂತೆ ಸಂಬಂಧಿಸಿದ ಅಧಿಕಾರಿಗಳಿಂದ ಮಾಹಿತಿ ಪಡೆದು ಕ್ರಮ ಕೈಗೊಳ್ಳಲಾಗುವುದು ಎಂದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಹೆಚ್.ಎಸ್.ಕೀರ್ತನಾ, ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕಿ ಮಾಲತಿ, ಸರ್ಕಾರಿ ಅಭಿಯೋಜಕರು ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ