suddi-6

 

 

ಬಡವರ ಬದುಕನ್ನು ಉತ್ತಮಗೊಳಿಸುವ ನಿಟ್ಟಿನಲ್ಲಿ ಶ್ರಮಿಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯಸರ್ಕಾರದ ವಿವಿಧ ಸೌಲಭ್ಯಗಳನ್ನು ಪಡೆದು ಕುಶಲಕರ್ಮಿಗಳು ಸ್ವಾವಲಂಬಿ, ಸ್ವಾಭಿಮಾನಿ ವ್ಯಕ್ತಿಗಳಾಗಿ ಸಮಾಜದ ಮುನ್ನಲೆಗೆ ಬರಬೇಕೆಂದು ಶಾಸಕ ಹೆಚ್.ಡಿ ತಮ್ಮಯ್ಯ ಕರನೀಡಿದರು.

ಅವರು ನಗರದ ಇಲ್ಲಿನ ಕೈಗಾರಿಕಾ ಕೇಂದ್ರದಲ್ಲಿ 2025-26ನೇ ಸಾಲಿನ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯಲ್ಲಿ ಗ್ರಾಮೀಣ ಕೈಗಾರಿಕೆಗಳು ಇವರುಗಳ ಸಂಯುಕ್ತಾಶ್ರಯದಲ್ಲಿ 14.48 ಲಕ್ಷ ರೂ. ವೆಚ್ಚದ ವೃತ್ತಿಪರ ಕುಶಲಕರ್ಮಿಗಳಿಗೆ ಉಚಿತ ಸುಧಾರಿತ ಉಪಕರಣಗಳ ವಿತರಣಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

181 ಫಲಾನುಭವಿಗಳಿಗೆ 14.48 ಲಕ್ಷ ರೂ. ವೆಚ್ಚದ ಆಧುನಿಕ ಉಪಕರಣಗಳನ್ನು ಪಡೆದುಕೊಂಡ ವತ್ತಿಪರರು ಇದರ ಸದುಪಯೋಗ ಪಡೆದುಕೊಂಡು ನಿಮ್ಮ ಬೆವರಿನ ಫಲವಾಗಿ ಬರುವ ಹಣವನ್ನು ನಿಮ್ಮ ಮಕ್ಕಳ ವಿದ್ಯಾಭ್ಯಾಸಕ್ಕೆ ಬಳಸಿ ಉತ್ತಮ ಶಿಕ್ಷಣ ಕೊಡಿಸಬೇಕೆಂದು ಸಲಹೆ ನೀಡಿದರು.

12ನೇ ಶತಮಾನದಲ್ಲಿ ಜಗಜ್ಯೋತಿ ಬಸವಣ್ಣನವರು ಕಾಯಕವೇ ಕೈಲಾಸ ಎಂದು ಹೇಳಿದರು, ಅದನ್ನು 19ನೇ ಶತಮಾನದಲ್ಲಿ ಡಾ. ಬಿ.ಆರ್ ಅಂಬೇಡ್ಕರ್ ಅವರು ಸಂವಿಧಾನದ ಮೂಲಕ ಬಡವರು ಮಾಡುವ ವಿವಿಧ ಕಾಯಕಗಳಿಗೆ ಸರ್ಕಾರದಿಂದ ಸಹಾಯಧನ ಕೊಡುವಂತೆ ಮಾಡಿದ್ದರು. ಆದರೆ, ಈಗ ಉಚಿತ ಸೌಲಭ್ಯಗಳನ್ನು ನೀಡುವ ಮೂಲಕ ವೃತ್ತಿಪರ ಕಸುಬುಗಳಿಗೆ ಉತ್ತೇಜನ ನೀಡಲಾಗುತ್ತಿದೆ ಎಂದು ಹೇಳಿದರು.

ಉತ್ತಮ ಶಿಕ್ಷಣ ಪಡೆದ ಮಕ್ಕಳು ಈ ದೇಶದ ಸಂಸ್ಕಾರವಂತ ಪ್ರಜೆಗಳಾಗುತ್ತಾರೆ. ಶಿಕ್ಷಣ ಕೇವಲ ಸರ್ಕಾರಿ ಉದ್ಯೋಗಕ್ಕೆ ಸೀಮಿತವಾಗಬಾರದು, ಬದಲಾಗಿ ಸುಸಂಸ್ಕøತ ಸಮಾಜದಲ್ಲಿ ಬದುಕು ಕಟ್ಟಿಕೊಳ್ಳಲು ಸಹಕಾರಿಯಾಗಬೇಕೆಂದು ತಿಳಿಸಿದರು.

ಶ್ರಮಿಕರಾಗಿರುವ ನೀವು ಪುರುಷ ಮಹಿಳೆ ಎಂಬ ಬೇಧ ಭಾವವಿಲ್ಲದೆ ಎಲ್ಲರೂ ಸರಿಸಮಾನವಾಗಿರುವ ಕುಶಲಕರ್ಮಿಗಳು ಯಾವುದೇ ದುಶ್ಚಟಗಳಿಗೆ ಬಲಿಯಾಗದೆ ಮಾದರಿ ಜೀವನ ನಡೆಸಿದಾಗ ಮಾತ್ರ ನಿಮ್ಮ ಮಕ್ಕಳು ಉತ್ತಮ ಸಂಸ್ಕಾರ ಪಡೆಯುತ್ತಾರೆ ಎಂದರು.

ಶಿಕ್ಷಣ ಸಂಸ್ಥೆಗಳ ಅಕ್ಕಪಕ್ಕದಲ್ಲಿ ಮಾದಕ ವಸ್ತುಗಳ ಮಾರಾಟವನ್ನು ನಿಷೇಧಿಸುವಂತೆ ಜಿಲ್ಲಾ ಪೊಲೀಸ್ ಮುಖ್ಯಾಧಿಕಾರಿಗಳ ಮೂಲಕ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದೇವೆ ಎಂದು ಹೇಳಿದರು.

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಉತ್ತಮ ಶಿಕ್ಷಣ ಪಡೆದವರಿಗೆ ಸಮಾನ ಅವಕಾಶಗಳು ಲಭ್ಯವಿದೆ ಎಂಬುದನ್ನು ಮನಗಾಣಬೇಕಿದೆ. ಈ ನಿಟ್ಟಿನಲ್ಲಿ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಬೇಕೆಂದರು.

ಚುನಾವಣಾ ಪೂರ್ವದಲ್ಲಿ ಕಾಂಗ್ರೆಸ್ ಪಕ್ಷ ಘೋಷಿಸಿದ್ದ ಪಂಚ ಗ್ಯಾರಂಟಿ ಯೋಜನೆಗಳನ್ನು ಅಧಿಕಾರಕ್ಕೆ ಬಂದ ಆರು ತಿಂಗಳಲ್ಲಿ ರಾಜ್ಯಸರ್ಕಾರ ಅನುಷ್ಠಾನಕ್ಕೆ ತಂದು ವಾರ್ಷಿಕ 57 ಸಾವಿರ ಕೋಟಿ ರೂ. ವ್ಯಯಿಸಲಾಗುತ್ತಿದೆ ಎಂದು ತಿಳಿಸಿದರು.

ಕಾರ್ಯಕ್ರಮವನ್ನು ಉದ್ಘಾಟಿಸಿದ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಹೆಚ್.ಪಿ ಮಂಜೇಗೌಡ ಮಾತನಾಡಿ, ವೃತ್ತಿಪರ ಕುಶಲಕರ್ಮಿಗಳು ಉದ್ಯೋಗವನ್ನು ಉತ್ತೇಜಿಸಲು ಸರ್ಕಾರ ಹಲವಾರು ಜನಪರ ಯೋಜನೆಗಳನ್ನು ಕೈಗೊಂಡಿದ್ದು, ಜೀವನೋಪಾಯಕ್ಕೆ ಅನುಕೂಲವಾಗುವ ಈ ಆಧುನಿಕ ಉಪಕರಣಗಳನ್ನು ಪಡೆದುಕೊಂಡು ಹೆಚ್ಚಿನ ರೀತಿಯಲ್ಲಿ ಆರ್ಥಿಕ ಸದೃಢರಾಗಬೇಕೆಂದು ಕರೆನೀಡಿದರು.

ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರದಲ್ಲಿ ಸರ್ವರನ್ನೂ ಸಮಾನವಾಗಿ ಕಂಡು ವಿವಿಧ ಸೌಲಭ್ಯಗಳನ್ನು ಒದಗಿಸುವಲ್ಲಿ ಶಾಸಕ ಹೆಚ್.ಡಿ ತಮ್ಮಯ್ಯನವರ ಶ್ರಮ ಪ್ರಶಂಸನೀಯ ಎಂದರು.

ಗ್ರಾಮೀಣ ಕೈಗಾರಿಕಾ ಇಲಾಖೆಯ ಉಪನಿರ್ದೇಶಕ ಚಂದ್ರಶೇಖರ್ ಪ್ರಾಸ್ತಾವಿಕವಾಗಿ ಮಾತನಾಡಿ, ಚಿಕ್ಕಮಗಳೂರು ತಾಲ್ಲೂಕಿನ ವೃತ್ತಿಪರ ಕುಶಲಕರ್ಮಿಗಳಿಗೆ ಗ್ರಾಮೀಣ ಕೈಗಾರಿಕೆ ಇಲಾಖೆ ವತಿಯಿಂದ ಉಚಿತ ಕೈಗಾರಿಕಾ ಉಪಕರಣಗಳನ್ನು ನೀಡಲಾಗುತ್ತಿದೆ ಎಂದು ಹೇಳಿದರು.

ಮರಗೆಲಸ, ಗಾರೆ, ಎಲೆಕ್ಟ್ರಿಷಿಯನ್, ಜನರಲ್ ಇಂಜಿನಿಯರಿಂಗ್, ಬುಟ್ಟಿ ಹೆಣೆಯುವುದು ಸೇರಿದಂತೆ ಒಟ್ಟು ಈ ಐದು ಸಾಂಪ್ರದಾಯಿಕ ವೃತ್ತಿ ಕಸುಬಿಗೆ ಅನುಕೂಲವಾಗಲೆಂದು ತಲಾ 8 ಸಾವಿರ ರೂ. ಮೌಲ್ಯದ ಉಪಕರಣಗಳನ್ನು ಇಂದು ಫಲಾನುಭವಿಗಳಿಗೆ ವಿತರಿಸಲಾಗುತ್ತಿದೆ ಎಂದರು.

ಜಿಲ್ಲೆಗೆ 484 ವಿವಿಧ ಕಸುಬುಗಳಿಗೆ ಗುರಿ ಹೊಂದಿದ್ದು, ಈ ಪೈಕಿ 636 ಅರ್ಜಿಗಳು ನೊಂದಣಿಯಾಗಿವೆ. ಟೆಂಡರ್ ಹಾಕಿರುವವರು ಕಡಿಮೆ ದರಕ್ಕೆ ಹಾಕಿದ್ದರಿಂದ ಎಲ್ಲರಿಗೂ ಉಪಕರಣ ನೀಡಲು ಸಹಕಾರಿಯಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಅಶೋಕ್, ವಿವಿಧ ಕಸುಬುಗಳ ವೃತ್ತಿಪರ ಫಲಾನುಭವಿಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ