ಮೂಡಿಗೆರೆ ತಾಲ್ಲೂಕು ಗೋಣಿಬೀಡು ಬಳಿ ಜಿ.ಹೊಸಳ್ಳಿ ಗ್ರಾಮದಲ್ಲಿ ಕಾಡಾನೆ ದಾಳಿಯಿಂದ ಕಾರ್ಮಿಕ ಮಹಿಳೆಯೋರ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.
ಜಿ.ಹೊಸಳ್ಳಿ ಗ್ರಾಮದ ಟಾಟಾ ಎಸ್ಟೇಟ್ ನಲ್ಲಿ ಇಂದು ಸೋಮವಾರ ಬೆಳಗ್ಗೆ ಸುಮಾರು 9:00 ಸಮಯದಲ್ಲಿ ಒಂಟಿ ಕಾಡಾನೆ ಒಂದು ತೋಟದಲ್ಲಿ ಕಾಪಿ ಒಡಕಲು ಅರಸುತ್ತಿದ್ದ ಮಹಿಳೆಯ ಮೇಲೆ ಏಕಾಏಕಿ ದಾಳಿ ನಡೆಸಿದೆ
ಈ ಸಂದರ್ಭದಲ್ಲಿ ಪಕ್ಕದಲ್ಲೇ ಕೆಲಸ ಮಾಡುತ್ತಿದ್ದ ಕಾರ್ಮಿಕರು ಜೋರಾಗಿ ಬೊಬ್ಬೆ ಹಾಕಿದಾಗ ಕಾಡಾನೆ ಮಹಿಳೆಯನ್ನು ಬಿಟ್ಟು ಸ್ಥಳದಿಂದ ಕಾಲ್ಕಿತ್ತಿದೆ

ಘಟನೆಯಲ್ಲಿ ಕಾರ್ಮಿಕ ಮಹಿಳೆ ಗುರುವಮ್ಮ ಎಂಬುವರು ತೀವ್ರ ಗಾಯಗೊಂಡಿದ್ದಾರೆ. ಅವರ ಎದೆ ಮತ್ತು ಸೊಂಟದ ಭಾಗಕ್ಕೆ ತೀವ್ರವಾಗಿ ಗಾಯಗಳಾಗಿವೆ. ಗಾಯಾಳು ಮಹಿಳೆಯನ್ನು ಮೂಡಿಗೆರೆ ಎಂಜಿಎಂ ಆಸ್ಪತ್ರೆಗೆ ರವಾನಿಸಲಾಗಿದೆ.



