ಲವ್ ಜಿಹಾದ್, ಅಕ್ರಮ ಗೋ ಕಳ್ಳತನ, ಹಿಂದೂಗಳ ಮೇಲೆ ನಿರಂತರ ನಡೆಯುತ್ತಿರುವ ದೌರ್ಜನ್ಯ ಖಂಡಿಸಿ ವಿಶ್ವ ಹಿಂದೂ ಪರಿಷತ್ ಬಜರಂಗದಳ ಮತ್ತು ಬಿಜೆಪಿ ಮುಖಂಡರು ಸೋಮವಾರ ಮೂಡಿಗೆರೆ ಪಟ್ಟಣದಲ್ಲಿ ಪ್ರತಿಭಟನೆ ನಡೆಸಿ ಬಳಿಕ ತಹಸೀಲ್ದಾರ್ ಅವರ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿದರು.
ಈ ಸಂದರ್ಭದಲ್ಲಿ ಬಿಜೆಪಿ ಹಿರಿಯ ಮುಖಂಡ ಎಂ.ಆರ್.ಜಗದೀಶ್ ಮಾತನಾಡಿ, ರಾಜ್ಯ ಸರಕಾರ ಪೊಲೀಸರ ಮೂಲಕ ಹಿಂದೂ ಕಾರ್ಯಕರ್ತರ ಮೇಲೆ ಸುಖಾಸುಮ್ಮನೆ ಸುಳ್ಳು ಪ್ರಕರಣ ದಾಖಲಿಸುತ್ತಿದ್ದಾರೆ. ಮತಾಂದ ಮುಸ್ಲೀಮರಿಂದ ನಿರಂತರವಾಗಿ ಹಿಂದೂಗಳ ಮೇಲೆ ದೌರ್ಜನ್ಯಗಳು ನಡೆಯುತ್ತಿವೆ. ಅನ್ಯ ಧರ್ಮದ ಶಕ್ತಿಗಳು ಅಪ್ರಾಪ್ತ ಬಾಲಕರಿಂದ ಹಿಂದೂ ಹುಡಿಗಿಯರ ಮೇಲೆ ಲವ್ ಜಿಹಾದಿ ಮಾಡಲು ಆರಂಬಿಸಿದ್ದಾರೆ. ಇದಕ್ಕೆ ಇತ್ತೀಚೆಗೆ ನಡೆದ ಪ್ರಕರಣವೇ ಸಾಕ್ಷಿಯಾಗಿದೆ ಎಂದು ಹೇಳಿದರು.
ಬಿಜೆಪಿ ತಾಲೂಕು ಅಧ್ಯಕ್ಷ ಗಜೇಂದ್ರ ಕೊಟ್ಟಿಗೆಹಾರ ಮಾತನಾಡಿ, ಅಕ್ರಮ ಗೋಸಾಗಾಟ ಎಗ್ಗಿಲ್ಲದಂತೆ ನಡೆಯುತ್ತಿದೆ. ಬಾಂಗ್ಲ ವಲಸೆಗರಿಂದ ನಡೆಯುತ್ತಿರುವ ಅಕ್ರಮ ಚಟುವಟಿಕೆ ಹಾಗೂ ಹಿಂದೂ ಅಪ್ರಾಪ್ತ ಬಾಲಕೀಯರನ್ನು ಒಲಿಸಿಕೊಂಡು ಲವ್ ಜಿಹಾದ್ ಮಾಡುತ್ತಿರುವುದನ್ನು ತಡೆಗಟ್ಟಿ ಬಾಲಕಿಯನ್ನು ರಕ್ಷಿಸಲು ಹೋದ ಹಿಂದೂ ಸಂಘಟನೆ ಮುಖಂಡರ ಮೇಲೆ ಸುಳ್ಳು ಪ್ರಕರಣ ದಾಖಲಿಸುತ್ತಿರುವುದು ಖಂಡನೀಯ. ಹಿಂದೂ ಸಂಘಟಕರ ವಿರುದ್ಧ ಹಾಕಿದ ಸುಳ್ಳು ಪ್ರಕರಣ ಕೂಡಲೇ ವಾಪಾಸು ಪಡೆಯಬೇಕು. ಅಕ್ರಮ ಗೋಸಾಗಾಟ ಮತ್ತು ಅಕ್ರಮ ಬಾಂಗ್ಲ ವಲಸಿಗರನ್ನು ಸ್ಥಳಾಂತರಿಸಬೇಕೆಂದು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಬಿಜೆಪಿ, ವಿಶ್ವಹಿಂದೂ ಪರಿಷತ್, ಬಜರಂಗದಳ ಸೇರಿದಂತೆ ವಿವಿಧ ಸಂಘಟನಗಳ ಮುಖಂಡರು ಕಾರ್ಯಕರ್ತರು ಉಪಸ್ಥಿತರಿದ್ದರು.
ಮೂಡಿಗೆರೆ ಪಟ್ಟಣದಲ್ಲಿ ನಡೆದ ಪ್ರತಿಭಟನಾ ಮೆರವಣಿಗೆಯಲ್ಲಿ ಸಾವಿರಾರು ಕಾರ್ಯಕರ್ತರು ಭಾಗವಹಿಸಿದ್ದರು.



