ಸಾರ್ವಜನಿಕರು ಕಳೆದುಕೊಂಡಿದ್ದ ತಮ್ಮ ಮೊಬೈಲ್ ಗಳನ್ನು ಪತ್ತೆ ಹಚ್ಚಿದ ಪೊಲೀಸ್ ಇಲಾಖೆ ಮೊಬೈಲ್ ಗಳನ್ನು ವಾರಸುದಾರರಿಗೆ ಹಸ್ತಾಂತರಿಸಿದ್ದಾರೆ.
ಚಿಕ್ಕಮಗಳೂರು ವಿವಿಧ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಪತ್ತೆ ಹಚ್ಚಿದ ಮೊಬೈಲ್ ಗಳನ್ನು ಗ್ರಾಹಕರಿಗೆ ಹಸ್ತಾಂತರಿಸಲಾಗಿದೆ.

ಮೊಬೈಲ್ ಫೋನ್ ಗಳನ್ನು CEIR (Central Equipment Identity Register) ಪೋರ್ಟಲ್ ಮೂಲಕ ಪತ್ತೆಹಚ್ಚಿ ವಾರಸುದಾರರಿಗೆ ಹಸ್ತಾಂತರಿಸಲಾಗಿದೆ.
ಮೂಡಿಗೆರೆ, ಪಂಚನಹಳ್ಳಿ ಸೇರಿದಂತೆ ವಿವಿಧ ಪೊಲೀಸ್ ಠಾಣೆಗಳಲ್ಲಿ ಮೊಬೈಲ್ ಗಳನ್ನು ಪತ್ತೆ ಹಚ್ಚಿ ವಾರಸುದಾರರಿಗೆ ಒಪ್ಪಿಸಲಾಗಿದೆ.
ನಿಮ್ಮ ಮೊಬೈಲ್ ಕಳೆದುಹೋದರೆ ಗಾಬರಿಯಾಗಬೇಡಿ, ತಕ್ಷಣ ಈ ಕ್ರಮಗಳನ್ನು ಅನುಸರಿಸಿ:
KSP ಆಪ್ ಮೂಲಕ ದೂರು ನೀಡಿ.
http://ceir.gov.in ನಲ್ಲಿ ವಿವರಗಳನ್ನು ದಾಖಲಿಸಿ. ಎಂದು ಪೊಲೀಸ್ ಇಲಾಖೆ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.




