ಮೂಡಿಗೆರೆ ತಾಲ್ಲೂಕು ಬಣಕಲ್ ಠಾಣೆಯ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ (PSI) ಡಿ.ವಿ ರೇಣುಕಾ ಅವರು ಚಿಕ್ಕಮಗಳೂರಿಗೆ ವರ್ಗಾವಣೆಗೊಂಡಿದ್ದಾರೆ
ರೇಣುಕಾ ಅವರು ಕಳೆದ ಎರಡು ವರ್ಷಗಳಿಂದ ನಗರದಲ್ಲಿ ದಕ್ಷತೆಯಿಂದ ಸೇವೆ ಸಲ್ಲಿಸಿ ಬಹಳಷ್ಟು ಅಕ್ರಮ ಚಟುವಟಿಕೆಗಳಿಗೆ ಕಡೀವಾಣ ಹಾಕಿದ್ದರು. ಬಣಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗಾಂಜಾ.ಕಳ್ಳತನ ಮತ್ತಿತರ ಅಕ್ರಮ ಚಟುವಟಿಕೆಗೆ ಬ್ರೇಕ್ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ರೇಣುಕಾ ಅವರು ಪ್ರಮುಖ ಪಾತ್ರವಹಿಸಿದ್ದರು. ಠಾಣೆ ಮೆಟ್ಟಿಲೇರುವ ಸಾರ್ವಜನಿಕರೊಂದಿಗೆ ಸೌಜನ್ಯದಿಂದ ವರ್ತಿಸಿ ಜನರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸುತ್ತಿದ್ದರು.
ಬಣಕಲ್ ಠಾಣಾ ಸರಹದ್ದಿನಲ್ಲಿ ನಡೆಯುವ ಗಣಪತಿ ವಿಸರ್ಜನಾ ಮೆರವಣಿಗೆ, ಈದ್ ಮಿಲಾದ್,ಚರ್ಚ್ ಉತ್ಸವದ ಮೆರವಣಿಗೆ ಹೀಗೆ ಬಣಕಲ್ ನಲ್ಲಿ ನಡೆದ ಹಲವು ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ಮಾಡುವಲ್ಲಿ ಪಿಎಸ್‌ಐ ರೇಣುಕಾ ಅವರ ಶ್ರಮ ಅಪಾರ. ಅಚ್ಚುಕಟ್ಟಾದ ಭದ್ರತಾ ವ್ಯವಸ್ಥೆಯನ್ನು ಕಲ್ಪಿಸುವಲ್ಲಿ ಯಶಸ್ವಿಯಾಗಿದ್ದರು. ಭದ್ರತೆ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಇವರ ಪಾತ್ರ ಅತ್ಯಂತ ಪ್ರಮುಖವಾಗಿತ್ತು. ಹಗಲು-ರಾತ್ರಿ ಎನ್ನದೆ ಪೊಲೀಸ್ ಸಿಬ್ಬಂದಿಯನ್ನು ಸಮನ್ವಯಗೊಳಿಸಿ, ಯಾವುದೇ ಅಹಿತಕರ ಘಟನೆ ನಡೆಯದಂತೆ ಕಾರ್ಯನಿರ್ವಹಿಸಿದ್ದರು.ಇವರ ಕಾರ್ಯ ಸಾಧನೆಗೆ ಗ್ರಾಮದ ಯುವಕರು ಹಾಗೂ ಸಾರ್ವಜನಿಕರು ಮೆಚ್ಚುಗೆ ವ್ಯಕ್ತ ಪಡಿಸಿ ಶುಭಾಶಯ ಕೋರಿ ಬೀಳ್ಕೊಡುಗೆ ನೀಡಲಾಯಿತು
ಸಂದರ್ಭದಲ್ಲಿ ಗ್ರಾಮಸ್ಥರಾದ ಸೂರಿ, ಅರುಣ್ ಪೂಜಾರಿ, ರಂಗನಾಥ್,,ಆಟೋ ಚಾಲಕರದ ಹರೀಶ್,ಕೀರ್ತಿ, ಗಣೇಶ್, ಶಶಿ,ನವೀನ್ ಇದ್ದರು.



