leed-suddi-9(A) (3)

 

 

ಮೂಗ್ತಿಹಳ್ಳಿ – ಮೂಡಿಗೆರೆ ರಾಷ್ಟ್ರೀಯ ಹೆದ್ದಾರಿಗೆ ಈಗಾಗಲೇ 413 ಕೋಟಿ ರೂ ಬಿಡುಗಡೆಯಾದರೂ ಪ್ರಗತಿಯ ಬಗ್ಗೆ ಮಾಹಿತಿ ನೀಡುವಂತೆ ರಾಷ್ರ್ಟೀಯ ಹೆದ್ದಾರಿ ಪ್ರಾಧಿಕಾರಿ ಅಧಿಕಾರಿಗಳಿಂದ ಮಾಹಿತಿ ನೀಡುವಂತೆ ಲೋಕೊಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದರು

ಮೂಡಿಗೆರೆ ಮಾರ್ಗವಾಗಿ ದಕ್ಷಿಣ ಕನ್ನಡ ಜಿಲ್ಲೆಗೆ ಸಾಗುವ ರಸ್ತೆಯಲ್ಲಿ ಕೊಟ್ಟಿಗೆಹಾರದಲ್ಲಿರುವ ತೇಜಸ್ವಿ ಪ್ರತಿಷ್ಠಾನಕ್ಕೆ ಭೇಟಿ ನೀಡಿ ಪೂಚಂತೇ ಅವರು ಬಳಸುತ್ತಿದ್ದ ಸ್ಕೂಟರ್, ಕ್ಯಾಮರ, ಕುರ್ಚಿ ಕಂಪ್ಯೂಟರ್ ಗಳು ಸೇರಿದಂತೆ ಹಲವು ಪರಿಕರಕಗಳನ್ನು ಮತ್ತು ಅಂದಿನ ಕಾಲದಲ್ಲಿ ಬಳಸುತ್ತಿದ್ದ ಅಡುಗೆ ಕೃಷಿ ಉಪಕರಣಗಳನ್ನು ವೀಕ್ಷಿಸಿ ಮೂಕ ವಿಸ್ಮಿತರಾದರು. ಅಲ್ಲೆ ಅಧಿಕಾರಿಗಳೊಂದಿಗೆ ನೀಲನಕ್ಷೆ ಬಗ್ಗೆ ಚರ್ಚಿಸಿದರು.

ಈ ಸಂದರ್ಭದಲ್ಲಿ ಮಾತನಾಡಿ -ಈಗಾಗಲೇ ರಾಜ್ಯ ಸರ್ಕಾರ ಲೋಕೋಪಯೋಗಿ ಇಲಾಖೆಗೆ ಮುಖ್ಯಮಂತ್ರಿ ಮೂಲ ಸೌಕರ್ಯ ಅಭಿವೃದ್ದಿ ಯೋಜನೆಯಡಿ ಪ್ರತಿ ಕ್ಷೇತ್ರಗಳ ಶಾಸಕರುಗಳಿಗೆ ಒಂದು ಕ್ಷೇತ್ರಕ್ಕೆ  25 ಕೋಟಿಯಂತೆ  ರಸ್ತೆ ಅಭಿವೃದ್ದಿಗೆ ಹಣ ಬಿಡುಗಡೆಗೊಳಿಸಿದ್ದು ಕೆಲಸಗಳು ಪ್ರಗತಿಯಲ್ಲಿದೆ ಎಂದರು. ಬಹುಜನರ ಬೇಡಿಕೆಯಾದ ಶಿಶಿಲಾ- ಬೈರಾಪುರ ರಸ್ತೆಯ ಬಗ್ಗೆ ಬೆಳೆಗಾರರು ಸಚಿವರ ಗಮನಕ್ಕೆತಂದು ಈಗಾಗಲೇ ಪ್ರಸ್ತಾವನೆಗೆ ಸರ್ಕಾರದ ಬಳಿ ಹೋಗಿದೆ ಎಂದಾಗ ಸಚಿವರು ಅದನ್ನು ಪರಿಶೀಲಿಸುವುದಾಗಿ ತಿಳಿಸಿದರು.

ಕೆಜಿಎಫ್ ಮಾಜಿ ಅಧ್ಯಕ್ಷ ಬಿ.ಎಸ್ .ಜೈರಾಂ ಮಾನವ ಮತ್ತು ಆನೆಗಳ ಸಂಘರ್ಷದ ಬಗ್ಗೆ ಶಾಶ್ವತ ಪರಿಹಾರದ ಬಗ್ಗೆ ಸರ್ಕಾರದ ಗಮನಕ್ಕೆ ತರಬೇಕೆಂದಾಗ ಸಚಿವರು ಅರಣ್ಯ ಮಂತ್ರಿಗಳೊಂದಿಗೆ ಭೇಟಿ ಮಾಡಿ ದಿನಾಂಕ ನಿಗದಿ ಪಡಿಸಿ ಬೆಳೆಗಾರರೊಂದಿಗೆ ಸಚಿವರು ಹಾಗೂ ಮುಖ್ಯ ಮಂತ್ರಿಗಳೊಂದಿಗೆ ಸಭೆಯನ್ನು ಕರೆದು ಚರ್ಚಿಸುವುದಾಗಿ ತಿಳಿಸಿದರು.

ಈ ಸಂದರ್ಭದಲ್ಲಿ ಮೂಡಿಗೆರೆ ತಹಸೀಲ್ದಾರ್ ಅಶ್ವಿನಿ, ಲೋಕೋಪಯೋಗಿ ಇಲಾಖೆಯ ಕಿರಿಯ ಅಭಿಯಂತರ ಚನ್ನಕೇಶವ ಬಿ.ಟಿ. ಉಪಸ್ಥಿತರಿದ್ದರು.

ಮೂಡಿಗೆರೆ ಪ್ರವಾಸಿ ಮಂದಿರದಲ್ಲಿ ಕಾಂಗ್ರೆಸ್ ಕಾರ್ಯಕರ್ತರನ್ನು ಭೇಟಿಯಾಗಿದ್ದರು. ಮಾಜಿ ಸಚಿವರುಗಳಾದ  ಬಿ.ಬಿ.ನಿಂಗಯ್ಯ, ಶ್ರೀಮತಿ ಮೋಟಮ್ಮ, ಹಾಗೂ ಜಿ.ಹೆಚ್.ಹಾಲಪ್ಪಗೌಡ,  ಹೆಚ್.ಜಿ. ಸುರೇಂದ್ರ ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ