WhatsApp Image 2026-04-03 at 7.48.24 AM

 

 

ಮೂಡಿಗೆರೆ ತಾಲ್ಲೂಕಿನಲ್ಲಿ ಇರುವ ಎಲ್ಲಾ ಧಾರ್ಮಿಕ ಸ್ಥಳಗಳು (ಮಸೀದಿ, ದೇವಾಲಯ, ಚರ್ಚ್ ಮುಂತಾದವು) ಹಾಗೂ ಸಾರ್ವಜನಿಕ ಸ್ಥಳಗಳು (ಬಸ್ ನಿಲ್ದಾಣ, ಮಾರುಕಟ್ಟೆ, ಶಾಲಾ ಕಾಲೇಜುಗಳು, ಸರ್ಕಾರಿ ಕಚೇರಿಗಳು ಇತ್ಯಾದಿ)ಗಳಲ್ಲಿ ಭದ್ರತೆ ಹೆಚ್ಚಿಸುವ ದೃಷ್ಟಿಯಿಂದ ಸಿಸಿ ಕ್ಯಾಮೆರಾ ಅಳವಡಿಸುವುದು ಅತ್ಯಂತ ಅಗತ್ಯವಾಗಿದೆ ಎಂದು ಪೀಸ್ & ಅವೆರ್ನೆಸ್ ಟ್ರಸ್ಟಿನ ಸಂಸ್ಥಾಪಕರಾದ ಅಲ್ತಾಫ್ ಬಿಳಗುಳ ನೇತೃತ್ವದಲ್ಲಿ ಮೂಡಿಗೆರೆ ಠಾಣಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು

ಇತ್ತೀಚಿನ ದಿನಗಳಲ್ಲಿ ಅಹಿತಕರ ಘಟನೆಗಳು, ಕಳ್ಳತನ, ಜಗಳಗಳು ಹಾಗೂ ಶಾಂತಿ ಭಂಗವಾಗುವಂತಹ ಘಟನೆಗಳು ಪದೇ ಪದೇ ಸಂಭವಿಸುತ್ತಿರುವುದರಿಂದ ಹಾಗೂ ಮುಂದೆ ಸಂಭವಿಸುವ ಸಾಧ್ಯತೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ,ಈ ಮೇಲಿನ ಎಲ್ಲಾ ಸ್ಥಳಗಳಲ್ಲೂ ಸಿಸಿ ಕ್ಯಾಮೆರಾಗಳು ಅಳವಡಿಸಿದರೆ:
ಅಪರಾಧಗಳನ್ನು ತಡೆಯಲು, ಹಾಗೂ ನೈಜ ಅಪರಾಧಿಗಳನ್ನು ಪತ್ತೆ ಹಚ್ಚಲು ಸಹಕಾರಿ ಆಗುತ್ತದೆ ಹಾಗೂ ಘಟನೆಗಳ ಬಗ್ಗೆ ನಿಖರ ಮಾಹಿತಿ ದೊರೆಯುತ್ತದೆ, ಸಾರ್ವಜನಿಕರಲ್ಲಿ ಭದ್ರತಾ ಭಾವನೆ ಹೆಚ್ಚುತ್ತದೆ, ಧಾರ್ಮಿಕ ಸೌಹಾರ್ದತೆ ಕಾಪಾಡಲು ನೆರವಾಗುತ್ತದೆ. ಆದ್ದರಿಂದ, ಮೂಡಿಗೆರೆ ತಾಲ್ಲೂಕಿನ ವ್ಯಾಪ್ತಿಯಲ್ಲಿರುವ ಎಲ್ಲಾ ಪ್ರಮುಖ ಧಾರ್ಮಿಕ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಕಡ್ಡಾಯವಾಗಿ ಸಿಸಿ ಕ್ಯಾಮೆರಾ ಅಳವಡಿಸುವಂತೆ ಹಾಗೂ ಅದನ್ನು ನಿಯಮಿತವಾಗಿ ಮೇಲ್ವಿಚಾರಣೆ ಮಾಡುವ ವ್ಯವಸ್ಥೆ ಕೈಗೊಳ್ಳುವಂತೆ ಒತ್ತಾಯಿಸಲಾಯಿತು

ಈ ಸಂಧರ್ಭದಲ್ಲಿ ಟ್ರಸ್ಟಿನ ಕಾರ್ಯದರ್ಶಿ ಫೈರೋಝ್ ಆಲ್ದೂರು, ಪ್ರವೀಣ್ ಕೃಷ್ಣಾಪುರ, ಸಾಜೀದ್ ಬಣಕಲ್, ಬದ್ರುದ್ದೀನ್ ಬಿಳಗುಳ, ಸಫ್ವಾನ್ ಬಿಳಗುಳ ಉಪಸ್ಥಿತರಿದ್ದರು

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ