suddi5 (7)

 

 

ಆಟೋ ಗ್ಯಾಸ್ ಸಮಸ್ಯೆಯನ್ನು ಬಗೆಹರಿಸುವಂತೆ ಜಿಲ್ಲಾಡಳಿತಕ್ಕೆ ಮನವಿಯನ್ನು ಸಲ್ಲಿಸಿದ್ದು, ಸಮಸ್ಯೆ ಬಗೆಹರಿಯದಿದ್ದಲ್ಲಿ ಏಪ್ರಿಲ್ 6 ರಂದು ಅನಿರ್ದಿಷ್ಟಕಾಲ ಮುಷ್ಕರವನ್ನು ನಡೆಸುವುದಾಗಿ ಚಿಕ್ಕಮಗಳೂರು ನಗರ ಆಟೋ ಚಾಲಕರು ಮತ್ತು ಮಾಲೀಕರ ಸಂಘದ ಕಾರ್ಯದರ್ಶಿ ಜಗದೀಶ್ ಕೋಟೆ ತಿಳಿಸಿದರು.

ಅವರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ನಗರದಲ್ಲಿ ಸುಮಾರು 4 ಸಾವಿರ ಆಟೋಗಳು ಸಂಚರಿಸುತ್ತಿದ್ದು, ನಗರದಲ್ಲಿ ಮೂರು ಎಲ್‍ಪಿಜಿ ಗ್ಯಾಸ್ ಬಂಕ್‍ಗಳಿದ್ದು, ಮೂರು ಬಂಕ್‍ಗಳಲ್ಲಿ ಒಂದೊಂದು ಬೆಲೆಯನ್ನು ನಿಗಧಿಪಡಿಸಲಾಗಿದೆ. ಇದರಿಂದ ಆಟೋ ಚಾಲಕರಿಗೆ ಬೆಲೆ ದುಬಾರಿಯಾಗುವುದರ ಜೊತೆಗೆ ಗೊಂದಲವುಂಟಾಗಿದೆ ಎಂದರು.

ಈ ಹಿಂದೆ ಗ್ಯಾಸ್ ಒಂದು ಕೆ.ಜಿಗೆ 56 ರೂಗಳಿಗೆ ಸಿಗುತ್ತಿತ್ತು. ಆದರೆ ಈಗ ಕೆಜಿಗೆ 145 ರೂಗಳಂತೆ ಮಾರಾಟ ಮಾಡಲಾಗುತ್ತಿದೆ. ಗ್ಯಾಸ್ ಬಂಕ್ ಮಾಲೀಕರು ಆಟೋ ಚಾಲಕರ ಜೀವನದಲ್ಲಿ ಚೆಲ್ಲಾಟವಾಡುತ್ತಿದ್ದು, ಇದಕ್ಕೆ ಕಡಿವಾಣ ಹಾಕುವಂತೆ ಒತ್ತಾಯಿಸಿದರು.

ಗ್ಯಾಸ್ ಬೆಲೆ ಏಕಾಏಕಿ ಹೆಚ್ಚಳದ ಬಗ್ಗೆ ಬಂಕ್‍ನ ಸಿಬ್ಬಂದಿಯವರನ್ನು ವಿಚಾರಿಸಿದರೆ ಗೊಂದಲದ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಗ್ಯಾಸ್ ಬಂಕ್‍ಗಳಲ್ಲಿ ಯಾವುದೇ ದರಪಟ್ಟಿಯನ್ನು ಹಾಗೂ ಕಂಪನಿ ಆದೇಶವನ್ನು ಸಹ ನಮೂದಿಸಿರುವುದಿಲ್ಲ. ಕಳೆದ ಹಲವಾರು ದಿನಗಳಿಂದ ಯಾವುದೇ ಬಂಕ್‍ನಲ್ಲಿ ಎಲ್‍ಪಿಜಿ ಗ್ಯಾಸ್ ದೊರೆಯದೇ ಆಟೋ ಚಾಲಕರು ಜೀವನ ನಡೆಸಲು ತುಂಬಾ ಕಷ್ಟವಾಗುತ್ತಿದೆ ಎಂದು ತಿಳಿಸಿದರು.

ಆಟೋ ಗ್ಯಾಸ್ ಕೊರತೆಯಿಂದ ಆಟೋ ಚಾಲಕರ ಕುಟುಂಬಗಳು ಬೀದಿ ಪಾಲಾಗಿದ್ದಾರೆ. ಇವರ ಕಷ್ಟಗಳಿಗೆ ಜನಪ್ರತಿನಿಧಿಗಳು ಕನಿಷ್ಟ ಸೌಜನ್ಯಕ್ಕಾದರೂ ಸ್ಪಂದಿಸುತ್ತಿಲ್ಲ. ಆಟೋಗಳು ಎಲ್ಲೆಂದರಲ್ಲಿ ನಿಲ್ಲುತ್ತಿದ್ದು, ಗ್ಯಾಸ್ ಸಮಸ್ಯೆಯನ್ನು ಬಗೆಹರಿಸುವಂತೆ ಜಿಲ್ಲಾಡಳಿತ ಮತ್ತು ಆಹಾರ ನಾಗರೀಕ ಸರಬರಾಜು ಇಲಾಖೆಗೂ ಮನವಿ ಮಾಡಿದ್ದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ದೂರಿದರು.

ಆಟೋ ಗ್ಯಾಸ್ ಪಡೆಯಲು ಟೋಕನ್ ಪಡೆಯುವಂತೆ ಬಂಕ್ ಮಾಲೀಕರು ಒತ್ತಾಯಿಸುತ್ತಿದ್ದಾರೆ. ಇದರಿಂದ ಆಟೋ ಚಾಲಕರಿಗೆ ತುಂಬಾ ತೊಂದರೆಯಾಗುತ್ತಿದೆ. ಆಟೋ ಗ್ಯಾಸ್ ಕಾಳಸಂತೆಯಲ್ಲಿ ಹೆಚ್ಚಿನ ದರಕ್ಕೆ ಮಾರಾಟ ಮಾಡಲಾಗುತ್ತಿದ್ದು, ಇದನ್ನು ನಿಯಂತ್ರಣ ಮಾಡಲು ಜಿಲ್ಲಾಡಳಿತ ವಿಫಲವಾಗಿದೆ ಎಂದು ದೂರಿದರು.

ಪತ್ರಿಕಾಗೋಷ್ಠಿಯಲ್ಲಿ ಚಿಕ್ಕಮಗಳೂರು ನಗರ ಆಟೋ ಚಾಲಕರು ಮತ್ತು ಮಾಲೀಕರ ಸಂಘದ ಪ್ರಧಾನ ಕಾರ್ಯದರ್ಶಿ ಹೆಚ್.ಸಿ.ರಾಘವೇಂದ್ರ, ಸಂಘಟನಾ ಕಾರ್ಯದರ್ಶಿ ಈಶ್ವರ್, ಸಹ ಕಾರ್ಯದರ್ಶಿ ಯಶ್ವಂತ್, ಮುಖಂಡರಾದ ಜಯಪ್ರಕಾಶ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ