ಪ್ರಸಿದ್ಧ ಧಾರ್ಮಿಕ ಮತ್ತು ಪ್ರವಾಸಿ ಸ್ಥಳವಾಗಿರುವ ಮೂಡಿಗೆರೆ ತಾಲ್ಲೂಕು ಭೈರಾಪುರ ಶ್ರೀ ನಾಣ್ಯದ ಭೈರವೇಶ್ವರಸ್ವಾಮಿ ದೇವಾಲಯದಲ್ಲಿ ಬ್ರಹ್ಮಕಲಶಾ ಪ್ರತಿಷ್ಠಾಪನಾ ವಾರ್ಷಿಕೋತ್ಸವವು ಭಾನುವಾರ ಬಹಳ ವಿಜೃಂಭಣೆಯಿಂದ ನೆರವೇರಿತು.
ಶ್ರೀ ನಾಣ್ಯ ಭೈರವೇಶ್ವರ ಸ್ವಾಮಿ ದೇವಸ್ಥಾನ ಜೀರ್ಣೋದ್ಧಾರ ಹಾಗೂ ವ್ಯವಸ್ಥಾಪನಾ ಸಮಿತಿಯಿಂದ ವಾರ್ಷಿಕೋತ್ಸವವನ್ನು ಅಚ್ಚುಕಟ್ಟಾಗಿ ಆಯೋಜಿಸಲಾಗಿತ್ತು.
ಭಾನುವಾರ ಬೆಳಗ್ಗೆಯಿಂದ ಮಧ್ಯಾಹ್ನದ ವರೆಗೆ ಶ್ರೀ ನಾಣ್ಯ ಭೈರವೇಶ್ವರ ಸ್ವಾಮಿಗೆ ರುದ್ರಹೋಮ, ಪಂಚಾಮೃತಾಭಿಷೇಕ, ರುದ್ತಾಭಿಷೇಕ, ಹೂವಿನ ಅಲಂಕಾರ ಸಹಿತಿ ಮಹಾಪೂಜೆ ನೆರವೇರಿಸಲಾಯಿತು. ಹಾಗೆಯೇ ಸಾಮೂಹಿಕ ಸತ್ಯನಾರಾಯಣ ಪೂಜೆ ಏರ್ಪಡಿಸಲಾಗಿತ್ತು.
ಈ ಎಲ್ಲಾ ಧಾರ್ಮಿಕ ವಿದಿಗಳಲ್ಲಿ ಸಾವಿರಾರು ಭಕ್ತಾಧಿಗಳು ಪಾಲ್ಗೊಂಡಿದ್ದರು. ಮೇಕನಗದ್ದೆ ಕುಟುಂಬದವರಿಂದ ಅನ್ನಸಂತರ್ಪಣೆ ಏರ್ಪಡಿಸಲಾಗಿತ್ತು.



