datthi 1

 

 

ಮೂಡಿಗೆರೆ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ದತ್ತಿ ಉಪನ್ಯಾಸ ಕಾರ್ಯಕ್ರಮ ಏರ್ಪಡಿಸಲಾಗಿತ್ತು.

ಪಟ್ಟಣದ ತಾಲ್ಲೂಕು ಪಂಚಾಯಿತಿ ದೀನ್ ದಯಾಳ್ ಸಭಾಂಗಣದಲ್ಲಿ ಏರ್ಪಡಿಸಿದ್ದ ದತ್ತಿ ಉಪನ್ಯಾಸ ಕಾರ್ಯಕ್ರಮವನ್ನು ಹಿರಿಯ ಸಾಹಿತಿ ಹಳೇಕೋಟೆ ರಮೇಶ್ ಅವರು ಉದ್ಘಾಟಿಸಿದರು.

ಮುಖ್ಯ ಅತಿಥಿಗಳಾಗಿ ಮೂಡಿಗೆರೆ ಕಾಫಿ ಕೋರ್ಟ್ ಅಧ್ಯಕ್ಷ ಡಿ.ಬಿ. ಜಯಪ್ರಕಾಶ್, ಕನ್ನಡ ಸಾಹಿತ್ಯ ಪರಿಷತ್ ಕಸಬಾ ಹೋಬಳಿ ಅಧ್ಯಕ್ಷ ಕುನ್ನಹಳ್ಳಿ ರವಿ, ಗೋಣಿಬೀಡು ಹೋಬಳಿ ಅಧ್ಯಕ್ಷ ನವೀನ್ ಆನೆದಿಬ್ಬ, ಬಣಕಲ್ ಹೋಬಳಿ ಅಧ್ಯಕ್ಷ ಲೋಕೇಶ್ ಉಪಸ್ಥಿತರಿದ್ದರು.

ಮಾಜಿ ಸಚಿವ ಡಿ.ಬಿ. ಚಂದ್ರೇಗೌಡರ ನೆನಪಿನ ದತ್ತಿ ಉಪನ್ಯಾಸದಲ್ಲಿ ಕುವೆಂಪು ಮತ್ತು ಕನ್ನಡ ವಿಚಾರಧಾರೆ ಎಂಬ ವಿಷಯದ ಮೇಲೆ ಪತ್ರಕರ್ತ ಪ್ರಸನ್ನ ಗೌಡಹಳ್ಳಿ ಮಾತನಾಡಿದರು. ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಹಳಸೇ ಬೈರೇಗೌಡ ಸ್ಮಾರಕ ದತ್ತಿ ಉಪನ್ಯಾಸದಲ್ಲಿ ಸಮಾಜಕ್ಕೆ ಉಳ್ಳವರ ಕೊಡುಗೆ ವಿಚಾರವಾಗಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಕೆ. ವಾಸುದೇವ್ ಮಾತನಾಡಿದರು.

ಕನ್ನಡ ಸಾಹಿತ್ಯ ಪರಿಷತ್ ತಾಲ್ಲೂಕು ಅಧ್ಯಕ್ಷ ಡಿ.ಕೆ. ಲಕ್ಷ್ಮಣಗೌಡ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ತಾಲ್ಲೂಕು ಪ್ರಧಾನ ಕಾರ್ಯರ್ಶಿ ಶ್ರೀಮತಿ ಸುಚಿತ್ರಾ ಪ್ರಸನ್ನ ಕಾರ್ಯಕ್ರಮ ನಿರೂಪಿಸಿದರು. ಕೋಶಾಧ್ಯಕ್ಷ ಆರ್. ಪ್ರಕಾಶ್ ಸ್ವಾಗತಿಸಿದರು. ಶ್ರೀಮತಿ ಇಂಪಾ ಸವಿನ್ ವಂದಿಸಿದರು. ಶ್ರೀಮತಿ ಅಂಬಾವತಿ ಪ್ರಾರ್ಥನೆ ನೆರವೇರಿಸಿದರು.

ಇದೇ ಸಂದರ್ಭದಲ್ಲಿ ರಾಜ್ಯ ಪ್ರಶಸ್ತಿ ವಿಜೇತ ಬಾನಳ್ಳಿ ಶಾಲಾ ಶಿಕ್ಷಕಿ ಶ್ರೀಮತಿ ಇಂಪಾ ಸವಿನ್ ಅವರನ್ನು ಗೌರವಿಸಲಾಯಿತು.

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ