badra river

 

 

ಭದ್ರಾ ನದಿಯಲ್ಲಿ ಈಜಲು ಹೋಗಿದ್ದ ಐಟಿ ಉದ್ಯೋಗಿ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ನಡೆದಿದೆ. ಮೃತ ಯುವಕನನ್ನು ಗದಗ ಮೂಲದ, ಬೆಂಗಳೂರಿನ ಖಾಸಗಿ ಐಟಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಅಭಿಷೇಕ್ (27ವ) ಎಂದು ಗುರುತಿಸಲಾಗಿದೆ.

ಅಭಿಷೇಕ್ ಅವರು ತಮ್ಮ ಸ್ನೇಹಿತನ ಮದುವೆಯಲ್ಲಿ ಪಾಲ್ಗೊಳ್ಳಲು ಸ್ನೇಹಿತರ ಜತೆ ಚಿಕ್ಕಮಗಳೂರಿನ ಬಾಳೆಹೊನ್ನೂರು ಸಮೀಪದ ಬನ್ನೂರು ಗ್ರಾಮಕ್ಕೆ ಬಂದಿದ್ದರು. ಸ್ನೇಹಿತರೊಂದಿಗೆ ಸ್ಥಳೀಯ ಹೋಂ ಸ್ಟೇನಲ್ಲಿ ವಾಸ್ತವ್ಯ ಹೂಡಿದ್ದರು.   ಭದ್ರಾ ನದಿಗೆ ಈಜಲು ತೆರಳಿದ್ದರು. ಈ ವೇಳೆ ನೀರಿನ ಸೆಳೆತಕ್ಕೆ ಸಿಲುಕಿ ಅಭಿಷೇಕ್ ನಾಪತ್ತೆಯಾಗಿದ್ದರು.

ಯುವಕ ನಾಪತ್ತೆಯಾದ ವಿಷಯ ತಿಳಿಯುತ್ತಿದ್ದಂತೆಯೇ ಅಗ್ನಿಶಾಮಕ ದಳದ ಸಿಬ್ಬಂದಿ ಮತ್ತು ಸ್ಥಳೀಯರು ಹುಡುಕಾಟ ನಡೆಸಿದ್ದರು. ಗಂಟೆಗಳ ಕಾಲ ನಡೆಸಿದ ಕಾರ್ಯಾಚರಣೆಯ ನಂತರ, ಬನ್ನೂರು ಗ್ರಾಮದ ಸಮೀಪದ ನದಿಯಲ್ಲಿ ಅಭಿಷೇಕ್ ಮೃತದೇಹ ಪತ್ತೆಯಾಗಿದೆ.

ಮದುವೆ ಸಂಭ್ರಮದಲ್ಲಿದ್ದ ಸ್ನೇಹಿತರು ಶೋಕಸಾಗರದಲ್ಲಿ ಮುಳುಗಿದ್ದಾರೆ. ಬಾಳೆಹೊನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ.

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ